ನ್ಯೂಝಿಲ್ಯಾಂಡ್ ವಿರುದ್ಧ ಟೆಸ್ಟ್ ಸರಣಿ: ಭಾರತ ತಂಡ ಪ್ರಕಟ
ಮೊದಲ ಟೆಸ್ಟ್ ನಲ್ಲಿ ಅಜಿಂಕ್ಯ ರಹಾನೆ ನಾಯಕ

ಹೊಸದಿಲ್ಲಿ: ನ್ಯೂಝಿಲ್ಯಾಂಡ್ ವಿರುದ್ದ ಸ್ವದೇಶದಲ್ಲಿ ಈ ತಿಂಗಳಾಂತ್ಯದಲ್ಲಿ ಆರಂಭವಾಗಲಿರುವ 2 ಪಂದ್ಯಗಳ ಟೆಸ್ಟ್ ಸರಣಿಗೆ ಭಾರತ ತಂಡವನ್ನು ಬಿಸಿಸಿಐ ಶುಕ್ರವಾರ ಪ್ರಕಟಿಸಿದೆ.
ಮೊದಲ ಟೆಸ್ಟ್ ನಲ್ಲಿ ಖಾಯಂ ನಾಯಕ ವಿರಾಟ್ ಕೊಹ್ಲಿ ವಿಶ್ರಾಂತಿ ಪಡೆದಿರುವ ಕಾರಣ ಅಜಿಂಕ್ಯ ರಹಾನೆ ತಂಡದ ನಾಯಕತ್ವವಹಿಸಿಕೊಳ್ಳಲಿದ್ದಾರೆ.
ಎರಡನೇ ಟೆಸ್ಟ್ ಸಮಯದಲ್ಲಿ ಟೀಮ್ ಇಂಡಿಯಾವನ್ನು ಸೇರಿಕೊಳ್ಳಲಿರುವ ವಿರಾಟ್ ಕೊಹ್ಲಿ ತಂಡವನ್ನು ನಾಯಕನಾಗಿ ಮುನ್ನಡೆಸಲಿದ್ದಾರೆ.
ಭಾರತ ಟೆಸ್ಟ್ ತಂಡ: ಅಜಿಂಕ್ಯ ರಹಾನೆ(ನಾಯಕ), ಚೇತೇಶ್ವರ ಪೂಜಾರ(ಉಪ ನಾಯಕ), ಕೆ.ಎಲ್.ರಾಹುಲ್, ಮಯಾಂಕ್ ಅಗರ್ವಾಲ್, ಶುಭಮನ್ ಗಿಲ್, ಶ್ರೇಯಸ್ ಅಯ್ಯರ್, ವೃದ್ಧಿಮಾನ್ ಸಹಾ(ವಿಕೆಟ್ ಕೀಪರ್), ಕೆಎಸ್ ಭರತ್(ವಿಕೆಟ್ ಕೀಪರ್), ರವೀಂದ್ರ ಜಡೇಜ, ಆರ್. ಅಶ್ವಿನ್, ಅಕ್ಷರ್ ಪಟೇಲ್, ಜಯಂತ್ ಯಾದವ್, ಇಶಾಂತ್ ಶರ್ಮಾ, ಉಮೇಶ್ ಯಾದವ್, ಮುಹಮ್ಮದ್ ಸಿರಾಜ್, ಪ್ರಸಿದ್ಧ ಕೃಷ್ಣ.
Next Story