Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ​ಮಕ್ಕಳಿಗೆ ಶಿಕ್ಷಣದ ಜೊತೆಗೆ ಮೌಲ್ಯಯುತ...

​ಮಕ್ಕಳಿಗೆ ಶಿಕ್ಷಣದ ಜೊತೆಗೆ ಮೌಲ್ಯಯುತ ಸಂಸ್ಕಾರ ನೀಡಬೇಕು: ಶ್ಯಾಮಲಾ ಕುಂದರ್

ವಾರ್ತಾಭಾರತಿವಾರ್ತಾಭಾರತಿ12 Nov 2021 7:54 PM IST
share
​ಮಕ್ಕಳಿಗೆ ಶಿಕ್ಷಣದ ಜೊತೆಗೆ ಮೌಲ್ಯಯುತ ಸಂಸ್ಕಾರ ನೀಡಬೇಕು: ಶ್ಯಾಮಲಾ ಕುಂದರ್

ಉಡುಪಿ, ನ.12: ಮಹಿಳೆಯರು ತಮ್ಮ ಹಕ್ಕನ್ನು ಸರಿಯಾದ ರೀತಿಯಲ್ಲಿ ಸದುಪಯೋಗ ಪಡಿಸಿಕೊಳ್ಳುವುದರ ಜೊತೆಗೆ ಮನೆಯಿಂದಲೇ ಮಕ್ಕಳಲ್ಲಿ ಉತ್ತಮ ಸಂಸ್ಕಾರದ ಜೊತೆಗೆ ಮೌಲ್ಯಯುತ ಶಿಕ್ಷಣದ ಬೋಧನೆ ಮಾಡಬೇಕು ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಶ್ಯಾಮಲಾ ಕುಂದರ್ ತಿಳಿಸಿದ್ದಾರೆ.

ನಗರದ ಬೋರ್ಡ್ ಹೈಸ್ಕೂಲ್‌ನಲ್ಲಿ ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರ ಹೊಸದಿಲ್ಲಿ, ಭಾರತದ ರಾಷ್ಟ್ರೀಯ ಮಹಿಳಾ ಆಯೋಗ, ರಾಜ್ಯ ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಶಿಕ್ಷಣ ಸಂಪನ್ಮೂಲ ಕೇಂದ್ರ ಉಡುಪಿ ಇವುಗಳ ಸಂಯುಕ್ತಾಶ್ರಯದಲ್ಲಿ ಗುರುವಾರ ಆಯೋಜಿಸಲಾದ ಶಿಕ್ಷಣ ಹಕ್ಕು ಕಾಯ್ದೆ ಹಾಗೂ ಮಹಿಳೆಯರಿಗಾಗಿ ಕಾನೂನು ಅರಿವು ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಮಹಿಳಾ ಹಕ್ಕುಗಳು ಮತ್ತು ಕಾನೂನುಗಳ ಕುರಿತು ಮಹಿಳೆಯರು ಅರಿತು ಕೊಳ್ಳುವುದರ ಜೊತೆಗೆ ಸಮಾಜದಲ್ಲಿ ಇರುವ ಅನಕ್ಷರರಿಗೂ ಈ ಕುರಿತು ಅರಿವು ಮೂಡಿಸಬೇಕು ಎಂದ ಶ್ಯಾಮಲಾ ಕುಂದರ್, ಮಹಿಳೆಯರು ತಮ್ಮ ಸಂಸ್ಕೃತಿ ಮತ್ತು ಕಾನೂನಿನ ಚೌಕಟ್ಟಿನಲ್ಲಿ ಬೇಕಾದ ನ್ಯಾಯವನ್ನು ಪಡೆಯಬೇಕೇ ಹೊರತು ಕಾನೂನಿನ ದುರ್ಬಳಕೆ ಮಾಡಿಕೊಳ್ಳಬಾರದು ಎಂದರು.

ರಾಷ್ಟ್ರೀಯ, ರಾಜ್ಯ ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರವು ಮಹಿಳೆ ಯರ ಹಿತರಕ್ಷಣೆಗೆ ಶ್ರಮಿಸುತ್ತಿದ್ದು, ತಮಗೆ ಏನಾದರೂ ತೊಂದರೆಗಳು ಉಂಟಾದಲ್ಲಿ ಜಿಲ್ಲೆಯ ಸಖಿ ಒನ್ ಸರ್ವಿಸ್ ಕೇಂದ್ರವನ್ನು ಸಂಪರ್ಕಿಸಬಹುದು ಮತ್ತು ಅಲ್ಲಿ ಉಚಿತ ಕಾನೂನು ನೆರವನ್ನು ಸಹ ಪಡೆಯಲು ಅವಕಾಶವಿದೆ. ಅದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್ ಮಾತನಾಡಿ, ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಕಾನೂನಿನ ಅರಿವು ಅತ್ಯವಶ್ಯವಾಗಿದ್ದು, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರವು ಮನೆ ಬಾಗಿಲಿಗೆ ತೆರಳಿ ಈ ಕುರಿತು ಅರಿವು ಮೂಡಿಸುವ ಕಾರ್ಯ ಮಾಡುತ್ತದೆ. ವಿಶೇಷವಾಗಿ ಮಹಿಳೆಯರು ಮತ್ತು ಮಕ್ಕಳಲ್ಲಿ ಇದರ ಅವಶ್ಯಕತೆ ಹೆಚ್ಚು ಇರುವುದರಿಂದ ಶಾಲಾ-ಕಾಲೇಜುಗಳಲ್ಲಿ ಇಂತಹ ಕಾರ್ಯಕ್ರಮಗಳನ್ನು ಹೆಚ್ಚು-ಹೆಚ್ಚು ಏರ್ಪಡಿಸಿ ಅರಿವು ಮೂಡಿಸಲಾಗುವುದು ಎಂದರು.

ಮಹಿಳೆಯರು ಮತ್ತು ಆರ್ಥಿಕವಾಗಿ ಬಡತನ ರೇಖೆಗಿಂತ ಕೆಳಗಿರುವವರು ಉಚಿತವಾಗಿ ಕಾನೂನಿನ ನೆರವು ಪಡೆಯಲು ಅವಕಾಶವಿದ್ದು, ಲೋಕ್ ಅದಾಲತ್, ಸಂತ್ರಸ್ಥರ ಪರಿಹಾರ ಯೋಜನೆಗಳು ಕಾನೂನು ಸೇವಾ ಪ್ರಾಧಿಕಾರ ದಲ್ಲಿವೆ. ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳುವಂತಾಗಬೇಕು ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಂದ್ರಪ್ಪ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಹಿರಿಯ ನ್ಯಾಯವಾದಿಗಳಾದ ವಾಣಿ ವಿ.ರಾವ್ ಮತ್ತು ಮೇರಿ ಅನ್ನೆ ರಂಜನಿ ಶ್ರೇಷ್ಟ ಭಾಗವಹಿಸಿದ್ದರು.

ಉಡುಪಿ ಜಿಲ್ಲಾ ಬಾಲನ್ಯಾಯ ಮಂಡಳಿಯ ಸದಸ್ಯೆ ಅಮೃತ ಕಲಾ, ಸಹ ಶಿಕ್ಷಕ ಸುರೇಶ್ ಎಸ್. ಹಾಗೂ ವಿವಿಧ ಶಾಲೆಗಳ ಮಹಿಳಾ ಶಿಕ್ಷಕಿಯರು ಉಪಸ್ಥಿತರಿದ್ದರು. ಜಿಲ್ಲಾ ಶಿಕ್ಷಣ ಸಂಪನ್ಮೂಲ ಕೇಂದ್ರದ ಉಪಾಧ್ಯಕ್ಷೆ ತಿಲೊತ್ತಮ ನಾಯಕ್ ಕಾರ್ಯಕ್ರಮ ನಿರೂಪಿಸಿ, ಉಡುಪಿ ಬಿ.ಆರ್.ಪಿ ಮೀನಾಕುಮಾರಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X