ನೀತಿ ಸಂಹಿತೆ ಉಲ್ಲಂಘನೆ: ದೂರು ದಾಖಲಿಸಲು ಕಂಟ್ರೋಲ್ ರೂಂ
ಉಡುಪಿ: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಚುನಾವಣಾ ಕ್ಷೇತ್ರದಿಂದ ರಾಜ್ಯ ವಿಧಾನ ಪರಿಷತ್ ದ್ವೈವಾರ್ಷಿಕ ಚುನಾವಣೆಗೆ ಸಂಬಂಧಿಸಿದಂತೆ, ಚುನಾವಣಾ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗದಿಂದ ಪ್ರಕಟಿಸಲಾಗಿದ್ದು, ಜಿಲ್ಲೆಯಾದ್ಯಂತ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ.
ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆಗಿರುವ ಪ್ರಕರಣಗಳ ಬಗ್ಗೆ ಸಾರ್ವಜನಿಕರಿಗೆ ದೂರುಗಳನ್ನು ಸಲ್ಲಿಸಲು ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕಂಟ್ರೋಲ್ ರೂಂ ಅನ್ನು ತೆರೆಯಲಾಗಿದ್ದು, ಕಂಟ್ರೋಲ್ ರೂಂ ದೂರವಾಣಿ ಸಂಖ್ಯೆ: 0820-2574802ಗೆ ಸಾರ್ವಜನಿಕರು ಕರೆ ಮಾಡಿ ದೂರುಗಳನ್ನು ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
Next Story





