Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನ.26ಕ್ಕೆ ರಾಷ್ಟ್ರೀಯ ಹೆದ್ದಾರಿ ಬಂದ್:...

ನ.26ಕ್ಕೆ ರಾಷ್ಟ್ರೀಯ ಹೆದ್ದಾರಿ ಬಂದ್: ಬಡಗಲಪುರ ನಾಗೇಂದ್ರ

ವಾರ್ತಾಭಾರತಿವಾರ್ತಾಭಾರತಿ12 Nov 2021 8:01 PM IST
share
ನ.26ಕ್ಕೆ ರಾಷ್ಟ್ರೀಯ ಹೆದ್ದಾರಿ ಬಂದ್: ಬಡಗಲಪುರ ನಾಗೇಂದ್ರ

ತುಮಕೂರು: ಕೃಷಿ ಕಾಯ್ದೆ ವಿರೋಧಿಸಿ ನಡೆಯುತ್ತಿರುವ ರೈತರ ಚಳವಳಿಯಲ್ಲಿ ದೇಶ ಒಂದಾಗಿ, ಜಾತಿ, ಧರ್ಮ ಮೀರಿ ಸಂಘಟಿತವಾಗಿ ಹೋರಾಡುತ್ತಿವೆ, ದೇಶಕ್ಕೆ ಅಪಾಯವಾಗಿರುವುದರ ವಿರುದ್ಧ ನಡೆಯುತ್ತಿರುವ ದೇಶ ಪ್ರೇಮಿ ಚಳವಳಿ ಎಂದು ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಅಭಿಪ್ರಾಯಪಟ್ಟರು.

ಬೆಂಗಳೂರು ವಿಭಾಗೀಯ ಪದಾಧಿಕಾರಿಗಳ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ಸಾರ್ವಭೌಮತೆಯನ್ನು ಧಿಕ್ಕಿರಿಸಿ ಮಸೂದೆ ರೂಪಿಸಿರುವ ಜನವಿರೋಧಿ, ಜೀವ ವಿರೋಧಿ ಕಾಯ್ದೆ ಇದಾಗಿವೆ, ರೈತರು ಮಾಡು ಇಲ್ಲವೇ ಮಡಿ ಹೋರಾಟದಲ್ಲಿ ಪಾಲ್ಗೊಂಡಿದ್ದಾರೆ ಎಂದರೆ.

ಈ ರೈತ ಚಳವಳಿ ಗೆದ್ದರೆ ದೇಶ ಗೆಲ್ಲಲ್ಲಿದೆ, ರೈತ ಚಳವಳಿಗೆ ಒಂದು ವರ್ಷ ಪೂರ್ಣವಾದ ಹಿನ್ನೆಲೆಯಲ್ಲಿ ನ.26ರಂದು ಕಾರ್ಮಿಕ, ದಲಿತ, ರೈತ ಸಂಯುಕ್ತ ಹೋರಾಟ ಸಮಿತಿ ಎತ್ತು, ಎಮ್ಮೆ, ಕೋಳಿ, ಎತ್ತಿನಗಾಡಿ, ಟ್ರ್ಯಾಕ್ಟರ್ ನೊಂದಿಗೆ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಲಿದ್ದೇವೆ ಎಂದು ತಿಳಿಸಿದರು.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕಾನೂನು ತಡೆಹಿಡಿದ್ದರೆ, ರಾಜ್ಯ ಸರ್ಕಾರ ಅದನ್ನು ಜಾರಿಗೆ ತಂದಿವೆ, ಎಪಿಎಂಸಿಗಳ ಬಳಿ ದುಡ್ಡಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ, ಶಿವಮೊಗ್ಗದಂತಹ ಅಡಿಕೆ ಮಾರುಕಟ್ಟೆಯಲ್ಲಿ ಅಡಿಕೆ ವಹಿವಾಟು ಶೇ.18ಕ್ಕೆ ಇಳಿದಿದೆ, ಮುಂದಿನ ದಿನಗಳಲ್ಲಿ ಎಪಿಎಂಸಿಗಳು ಅದಾನಿ, ಅಂಬಾನಿಗಳ ಸಂತತಿ ಪಾಲಾಗಾಲಿದೆ ಎಂದು ಹೇಳಿದರು.

ಭೂ ಸುಧಾರಣೆ ಕಾಯ್ದೆ ಹೆಸರಿನಲ್ಲಿ ಜಾರಿಗೆ ಬಂದ ನಂತರ ನೋಂದಣಿ ಶುಲ್ಕ ಹೆಚ್ಚಳವಾಗಿದೆ, ಕೃಷಿ ಭೂಮಿ ಕೃಷಿಯೇತರ ಚಟುವಟಿಕೆಗಳಿಗೆ ಸುಲಭವಾಗಿ ದೊರಕುವಂತಾಗಿದೆ ಎಂದ ಅವರು ಐ.ಟಿ, ಬಿ.ಟಿಯವರು ಕೃಷಿಯಲ್ಲಿ ಪಾಲ್ಗೊಳ್ಳುತ್ತಾರೆ ಎನ್ನುವುದರ ಬಗ್ಗೆ ಶ್ವೇತಪತ್ರ ಹೊರಡಿಸಬೇಕು ಎಂದು ಒತ್ತಾಯಿಸಿದರು.

ನವೆಂಬರ್ 26ರ ನಂತರ ರಾಜ್ಯದ ಹತ್ತು ಕಡೆ ಮಹಾಪಂಚಾಯತ್ ಹಮ್ಮಿಕೊಂಡು ಈ ಕಾಯ್ದೆಯ ಬಗ್ಗೆ ಜನರಲ್ಲಿ ಅರಿವು ಮೂಡಿಸಿ, ಬಜೆಟ್ ಮಂಡನೆಗೆ ಮೊದಲು ಜನಾಧಿವೇಶನವನ್ನು ಹಮ್ಮಿಕೊಂಡು ನಿರ್ಣಯ ಕೈಗೊಳ್ಳಲಾಗುವುದು, ನ.28ರಿಂದ ಕೇಂದ್ರ ಸಚಿವರಿಗೆ ಕಪ್ಪುಪಟ್ಟಿ ಪ್ರದರ್ಶನ ಮಾಡಲಿದ್ದೇವೆ ಎಂದರು.

ಸರ್ಕಾರ ಪಶು ಆಹಾರವನ್ನು ರಿಯಾಯಿತಿ ದರದಲ್ಲಿ ನೀಡಬೇಕು ಎಂದ ಅವರು 12ಜಿಲ್ಲೆಗಳಲ್ಲಿ ಬೆಳೆಯುವ ಮುಸುಕಿನಜೋಳವನ್ನು ಸರ್ಕಾರ ಖರೀದಿಸಿ ಪಶು ಆಹಾರವನ್ನಾಗಿ ಮಾರ್ಪಡಿಸಬೇಕು ಇದರಿಂದ ಉದ್ಯೋಗ ಹೆಚ್ಚಳವಾಗಲಿದೆ, ಹಾಲಿನ ಉತ್ಪಾದನಾ ವೆಚ್ಚ ಹೆಚ್ಚಳವಾಗಿದೆ, ಸರ್ಕಾರ ನೀಡುವ ಸಬ್ಸಿಡಿ ದೊರಕದಂತೆ ಆಗಿದೆ ಎಂದರು.

ಬರಪೀಡಿತ ಪ್ರದೇಶವಾದ ಚಿತ್ರದುರ್ಗದಲ್ಲಿ ಮಳೆಯಿಂದಾಗಿ ಈರುಳ್ಳಿ, ಶೇಂಗಾ ಬೆಳೆ ನಾಶವಾಗಿದೆ ಸರ್ಕಾರ ರೈತರ ನೆರವಿಗೆ ನಿಲ್ಲಬೇಕು, ಪೂರ್ಣ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿದ ಅವರು, ಫಸಲ್ ಬೀಮಾ ಯೋಜನೆ ರೈತರ ಪರವಾಗಿಲ್ಲ ಅದು ವಿಮಾಸಂಸ್ಥೆಗಳ ಪರವಾಗಿದೆ ಎಂದು ದೂರಿದರು.

ನರೇಂದ್ರ ಮೋದಿ ಅವರ ಸ್ವಂತ ರಾಜ್ಯ ಗುಜರಾತ್ ನಲ್ಲಿ ಈ ಯೋಜನೆಯನ್ನು ಜಾರಿಗೊಳಿಸಿಲ್ಲ, ಮೇಲ್ನೋಟಕ್ಕೆ ರೈತ ಪರವಾದ ಯೋಜನೆಗಳು ಕಾರ್ಪೊರೇಟ್ ಸಂಸ್ಥೆಗಳ ಪರವಾಗಿದೆ, ಖಾಸಗಿ ಸಂಸ್ಥೆಗಳಿಗೆ ಅನುಕೂಲ ಕಲ್ಪಿಸುವ ಉದ್ದೇಶ ಹೊಂದಿದೆ ಎಂದು ಆರೋಪಿಸಿದರು.

ಜಿಲ್ಲಾಧ್ಯಕ್ಷ ಎ.ಗೋವಿಂದರಾಜು ಅವರು ಮಾತನಾಡಿ ನ.26ರಂದು ಹೆದ್ದಾರಿ ಬಂದ್ ಮಾಡಲಿದ್ದೇವೆ, ಜಿಲ್ಲೆಯಲ್ಲಿ ಶೇಂಗಾ, ರಾಗಿ ನಾಶವಾಗಿವೆ, ಮಳೆಯಿಂದಾಗಿ ಬಾಳೆ ಬೆಲೆ ಕುಸಿದಿದೆ, ನೀರಾವರಿ ಯೋಜನೆ ಅನುಷ್ಠಾನ ಮತ್ತು ರೈತರ ನಷ್ಟ ತುಂಬಿಕೊಡುವಂತೆ ಒತ್ತಾಯಿಸಿ, ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡುವುದಾಗಿ ತಿಳಿಸಿದರು.

ತುಮಕೂರು, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ ಜಿಲ್ಲೆಗಳನ್ನು ಒಳಗೊಂಡಂತೆ ಡಿಸೆಂಬರ್ ನಲ್ಲಿ ಮಹಾ ಪಂಚಾಯತ್ ಹಮ್ಮಿಕೊಳ್ಳಲಾಗುವುದು ಎಂದ ಅವರು ಸಂಯುಕ್ತ ಹೋರಾಟ ಸಮಿತಿಯ ಮುಖಂಡರು, ಕಾರ್ಯಕರ್ತರು ಸೇರಿ ಹತ್ತು ಸಾವಿರಕ್ಕೂ ಹೆಚ್ಚು ಜನರನ್ನು ಒಳಗೊಂಡ ಮಹಾ ಪಂಚಾಯತಿ ನಡೆಯಲಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ರೈತಸಂಘದ ರಾಜ್ಯ ಉಪಾಧ್ಯಕ್ಷ ಟಿ.ನುಲೇನೂರು ಶಂಕರಪ್ಪ, ವಿಭಾಗೀಯ ಕಾರ್ಯದರ್ಶಿ ಡಾ.ಚೌಕೀಮಠ್, ವಿಭಾಗೀಯ ಕಾರ್ಯದರ್ಶಿ ವಿ.ಗೋಪಾಲ್, ಸುರೇಶ್ ಬಾಬು, ಸಂಘಟನಾ ಕಾರ್ಯದರ್ಶಿ ರಾಜು, ಚಂದ್ರಶೇಖರ್, ಅನುಸೂಯಮ್ಮ ಜೆ.ಸಿ.ಶಂಕರಪ್ಪ, ಕೆ.ಮಲ್ಲಯ್ಯ ಸೇರಿದಂತೆ ಇತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X