ದೇಶದ ಸ್ವಾತಂತ್ರ್ಯ ಹೋರಾಟದ ಕುರಿತು ಕಂಗನಾ ಹೇಳಿಕೆ ಸಂಪೂರ್ಣ ತಪ್ಪು: ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ ಚಂದ್ರಕಾಂತ್

ಮುಂಬೈ: ದೇಶದ ಸ್ವಾತಂತ್ರ್ಯ ಹೋರಾಟದ ಕುರಿತು ನಟಿ ಕಂಗನಾ ರಣಾವತ್ ಅವರ ಹೇಳಿಕೆ ಸಂಪೂರ್ಣವಾಗಿ ತಪ್ಪು ಎಂದು ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ ಚಂದ್ರಕಾಂತ್ ಪಾಟೀಲ್ ಹೇಳಿದ್ದಾರೆ.
ನಟಿ ಕಂಗನಾ ಇತ್ತೀಚೆಗೆ ನಡೆದ ಕಾರ್ಯಕ್ರಮವೊಂದರಲ್ಲಿ ಭಾರತವು 2014 ರಲ್ಲಿ ನಿಜವಾಗಿಯೂ ಸ್ವಾತಂತ್ರ್ಯವನ್ನು ಗಳಿಸಿದೆ. 1947 ರಲ್ಲಿ ಭಾರತಕ್ಕೆ ಸಿಕ್ಕಿದ್ದು ‘ಭಿಕ್ಷೆ’. ಅದು ಸ್ವಾತಂತ್ರ್ಯವಲ್ಲ ಎಂದು ಹೇಳಿಕೆ ನೀಡಿದ ನಂತರ ಹಲವಾರು ವಲಯಗಳಿಂದ ಟೀಕೆಗೆ ಗುರಿಯಾಗಿದ್ದಾರೆ.
"ದೇಶದ ಸ್ವಾತಂತ್ರ್ಯ ಹೋರಾಟದ ಬಗ್ಗೆ ಕಂಗನಾ ರಣಾವತ್ ಅವರ ಹೇಳಿಕೆ ಸಂಪೂರ್ಣವಾಗಿ ತಪ್ಪು. ಸ್ವಾತಂತ್ರ್ಯ ಚಳವಳಿಯ ಬಗ್ಗೆ ನಕಾರಾತ್ಮಕ ಟೀಕೆಗಳನ್ನು ರವಾನಿಸಲು ಯಾರಿಗೂ ಹಕ್ಕಿಲ್ಲ. ನಟಿಯ ಅಂತಹ ಹೇಳಿಕೆಯ ಹಿಂದಿನ ಭಾವನೆ ಏನೆಂದು ನನಗೆ ತಿಳಿದಿಲ್ಲ. ಕಳೆದ ಏಳು ವರ್ಷಗಳಲ್ಲಿ ಪ್ರಧಾನಿ ಮೋದಿಯವರ ಕಾರ್ಯವನ್ನು ರಣಾವತ್ ಶ್ಲಾಘಿಸಬಹುದು. ಆದರೆ ಅವರಿಗೆ ಸ್ವಾತಂತ್ರ್ಯ ಹೋರಾಟವನ್ನು ಟೀಕಿಸುವ ಅರ್ಹತೆ ಇಲ್ಲ" ಎಂದು ಪಾಟೀಲ್ ಸುದ್ದಿಗಾರರಿಗೆ ತಿಳಿಸಿದರು.
Next Story