Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ‘ಬಿಟ್ ಕಾಯಿನ್’ ಸಮಗ್ರ ಮಾಹಿತಿ ಸರಕಾರ...

‘ಬಿಟ್ ಕಾಯಿನ್’ ಸಮಗ್ರ ಮಾಹಿತಿ ಸರಕಾರ ಸಾರ್ವಜನಿಕರ ಮುಂದಿಡಲಿ: ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ12 Nov 2021 8:26 PM IST
share
‘ಬಿಟ್ ಕಾಯಿನ್’ ಸಮಗ್ರ ಮಾಹಿತಿ ಸರಕಾರ ಸಾರ್ವಜನಿಕರ ಮುಂದಿಡಲಿ: ಡಿ.ಕೆ.ಶಿವಕುಮಾರ್

ಬೆಂಗಳೂರು, ನ.12: ಬಿಟ್ ಕಾಯಿನ್ ವಿಚಾರವಾಗಿ ಪ್ರಧಾನಮಂತ್ರಿ ಜತೆ ಮಾತನಾಡಿದ್ದೇನೆ, ಅವರು ಇದು ಪ್ರಮುಖ ವಿಚಾರವಲ್ಲ ಎಂದಿರುವುದಾಗಿ ಮುಖ್ಯಮಂತ್ರಿ ಹೇಳಿದ್ದಾರೆ. ಬೆಂಕಿ ಇಲ್ಲದೆ ಹೊಗೆ ಆಡುತ್ತದೆಯೇ? ಸಿಸಿಬಿ ಸಲ್ಲಿಸಿರುವ ಆರೋಪ ಪಟ್ಟಿಯಲ್ಲಿ 31 ಬಿಟ್ ಕಾಯಿನ್ ವಶಪಡಿಸಿಕೊಂಡಿರುವುದಾಗಿ ತಿಳಿಸಿದ್ದಾರೆ. ಆ ಬಿಟ್ ಕಾಯಿನ್ ಈಗ ಎಲ್ಲಿದೆ? ಯಾರ ಬಳಿ ಇದೆ? ಯಾರು ಸೀಜ್ ಮಾಡಿದ್ದಾರೆ? ಅದರ ಪಂಚನಾಮಗಳಾಗಿವೆಯೇ? ಇವೆಲ್ಲವನ್ನೂ ಸರಕಾರ ಜನರ ಮುಂದೆ ಇಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗ್ರಹಿಸಿದರು.

ಶುಕ್ರವಾರ ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿರೋಧ ಪಕ್ಷವಾಗಿ ಮಾಧ್ಯಮಗಳ ವರದಿ, ಅಧಿಕಾರಿಗಳಿಂದ ಪಡೆದ ಮಾಹಿತಿಗಳ ಆಧಾರದ ಮೇಲೆ ನಾವು ಆರೋಪ ಮಾಡುತ್ತೇವೆ. ಮಾಧ್ಯಮಗಳು ಕೂಡ ಸುಖಾಸುಮ್ಮನೆ ವರದಿ ಮಾಡುತ್ತವೆಯೇ? ಎಂದು ಪ್ರಶ್ನಿಸಿದರು.

ಇದು ಗಂಭೀರ ವಿಚಾರವಲ್ಲದಿದ್ದರೆ ಇದನ್ನು ಪ್ರಧಾನಮಂತ್ರಿ ಜತೆ ಚರ್ಚೆ ಮಾಡುವ ಅಗತ್ಯವೇನಿತ್ತು? ಉನ್ನತ ಮಟ್ಟದ ಚರ್ಚೆಯಾಗಿದೆ ಎಂದರೆ ಇದು ಪ್ರಮುಖ ವಿಚಾರವೇ ಅಲ್ಲವೇ? ಈ ಪ್ರಕರಣದಲ್ಲಿ ಯಾವ ಅಧಿಕಾರಿಗಳು, ಯಾರೆಲ್ಲಾ ಭಾಗಿಯಾಗಿದ್ದಾರೆ ಎಂಬ ಮಾಹಿತಿ ನಮ್ಮ ಬಳಿಯೂ ಇದೆ ಎಂದು ಶಿವಕುಮಾರ್ ಹೇಳಿದರು.

ಗೃಹ ಮಂತ್ರಿಗಳು ಕಾಂಗ್ರೆಸ್ ನಾಯಕರ ಮಕ್ಕಳು ಭಾಗಿಯಾಗಿದ್ದಾರೆ ಎನ್ನುತ್ತಾರೆ. ಹಾಗಾದರೆ ಎಲ್ಲರ ಹೆಸರನ್ನೂ ಬಯಲು ಮಾಡಲಿ, ಅವರನ್ನು ಬಂಧಿಸಲಿ. ಕೆಲವು ಮಾಧ್ಯಮಗಳಲ್ಲಿ ಕಾಂಗ್ರೆಸ್ ನಾಯಕರ ಮಕ್ಕಳು ಭಾಗಿಯಾಗಿದ್ದಾರೆ ಎಂದು ವರದಿ ಬರೆಸಿದ್ದಾರೆ. ಅದನ್ನು ಬರೆಸಿದ್ದು ಯಾರು ಎಂದು ನಮಗೆ ಗೊತ್ತಿಲ್ಲವೇ? ಅವರು ಏನು ಬೇಕಾದರೂ ಬರೆಸಿಕೊಳ್ಳಲಿ ಎಂದು ಶಿವಕುಮಾರ್ ತಿಳಿಸಿದರು.

ಕೆಲವು ದಾಖಲೆಗಳೊಂದಿಗೆ ಪ್ರಿಯಾಂಕ್ ಖರ್ಗೆ ಮಾಡಿರುವ ಆರೋಪದ ಬಗ್ಗೆ ಪಕ್ಷದ ತೀರ್ಮಾನ ಹಾಗೂ ಯಾವ ರೀತಿ ಮುಂದೆ ಹೋರಾಟ ಮಾಡುತ್ತದೆ ಎಂಬ ಪ್ರಶ್ನೆಗೆ, ಪಕ್ಷವಾಗಿ ನಾವು ಕೂತು ತೀರ್ಮಾನಿಸುತ್ತೇವೆ. ನಮಗೆ ಕೆಲವು ಮಾಹಿತಿ ಇದ್ದು, ನಾವೂ ತನಿಖೆ ಮಾಡುತ್ತಿದ್ದೇವೆ ಎಂದು ಅವರು ತಿಳಿಸಿದರು.

ಈ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರ ಮಕ್ಕಳು ಇದ್ದಾರೆ, ಕಾಂಗ್ರೆಸ್ ನಾಯಕರು ಎಚ್ಚರಿಕೆಯಿಂದ ಮಾತನಾಡಲಿ ಎಂದು ನೀಡಿರುವ ಎಚ್ಚರಿಕೆಗೆ, ‘ಕಾಂಗ್ರೆಸ್ ನಾಯಕರು ಭಾಗಿಯಾಗಿದ್ದರೆ, ಸುಮ್ಮನೆ ಬಂಧಿಸಿ ಒಳಗೆ ಹಾಕಲಿ. ಯಾರನ್ನೂ ಪ್ರಶ್ನೆ ಮಾಡುವ ಅಗತ್ಯವಿಲ್ಲ. ಯಾರ ಮಕ್ಕಳಾದರೂ ಇರಲಿ. ತಪ್ಪು ಮಾಡಿರುವವರನ್ನು ಒಳಗೆ ಹಾಕಲಿ, ಅದರಲ್ಲಿ ಏನಿದೆ? ಗೃಹಮಂತ್ರಿಗಳು ಆಡಿರುವ ಮಾತಿಗೆ ನಾವು ಸುಮ್ಮನೆ ಕೂರುತ್ತೀವಾ? ಸಮಯ ಬಂದಾಗ ಭಾಗಿಯಾಗಿರುವ ಎಲ್ಲರ ಹೆಸರೂ ಹೇಳುತ್ತೇವೆ’ ಎಂದರು.

ಬಿಡುಗಡೆಯಾಗಿರುವ ಪೊಲೀಸ್ ಅಧಿಕಾರಿಗಳ ಸಂಭಾಷಣೆ ಆಡಿಯೋದಲ್ಲಿ, 'ಈ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಗಳಿಂದ ಸಚಿವರವರೆಗೂ ಎಲ್ಲರೂ ಭಾಗಿಯಾಗಿದ್ದಾರೆ' ಎಂಬ ಮಾತುಗಳಿರುವ ವಿಚಾರವಾಗಿ ಕೇಳಿದ ಪ್ರಶ್ನೆಗೆ, ‘ಆಡಿಯೋ ಬಿಡುಗಡೆಯಾಗಿದೆ, ಪೊಲೀಸರು ಭಾಗಿಯಾಗಿದ್ದಾರೆ ಎಂದು ಮಾಧ್ಯಮಗಳೇ ಹೇಳುತ್ತಿವೆ. ಹೀಗಾಗಿ ಸಮಯ ಬಂದಾಗ ಎಲ್ಲ ವಿಚಾರಗಳು ಹೊರಬರುತ್ತವೆ’ ಎಂದು ಪ್ರತಿಕ್ರಿಯಿಸಿದರು.

ನಿಮಗೆ ಸರಕಾರದ ಅಧಿಕಾರಿಗಳೇ ಮಾಹಿತಿ ನೀಡುತ್ತಾದ್ದಾರೆಯೇ ಎಂಬ ಪ್ರಶ್ನೆಗೆ, ‘ನೀವು ಈ ವಿಚಾರವಾಗಿ ಅನೇಕ ಪೊಲೀಸ್ ಅಧಿಕಾರಿಗಳು ಭಾಗಿಯಾಗಿದ್ದಾರೆ ಎಂದು ವರದಿ ಮಾಡುತ್ತಿದ್ದೀರಿ. ಆ ಮಾಹಿತಿ ಕೊಟ್ಟವರು ಯಾರು? ನಿಮಗೆ ಪೊಲೀಸ್ ಇಲಾಖೆಯಲ್ಲಿ ಮೂಲಗಳಿರುವಂತೆ ನಮಗೂ ಮೂಲಗಳಿವೆ’ ಎಂದು ಶಿವಕುಮಾರ್ ಉತ್ತರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X