ದಾವಣಗೆರೆ ಜಿಲ್ಲಾಧಿಕಾರಿ ಆರೋಗ್ಯದ ಬಗ್ಗೆ ಸುಳ್ಳು ಸುದ್ದಿ; ಮಹಾಂತೇಶ ಬೀಳಗಿ ಬೇಸರ

ಮಹಾಂತೇಶ ಬೀಳಗಿ
ದಾವಣಗೆರೆ, ನ.12: ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಆರೋಗ್ಯದ ಬಗ್ಗೆ ಕಿಡಿಗೇಡಿಗಳು ಸುಳ್ಳು ಸುದ್ದಿ ಹಬ್ಬಿಸಿದ್ದು, ಇದಕ್ಕೆ ಜಿಲ್ಲಾಧಿಕಾರಿ ಬೇಸರ ವ್ಯಕ್ತಪಡಿಸಿದ್ದಾರೆ. ನನಗೆ ಹೃದಯಾಘಾತ ಆಗಿದೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ್ದಾರೆ. ನಾನು ಚನ್ನಾಗಿದ್ದೇನೆ. ಈಗ ನನ್ನ ಕಚೇರಿಯಲ್ಲಿ ರಾಜ್ಯ ಮುಖ್ಯ ಕಾರ್ಯದರ್ಶಿ ಅವರ ಜೊತೆ ವಿಸಿಯಲ್ಲಿ ಪಾಲ್ಗೊಂಡಿದ್ದೇನೆ. ಜೊತೆಗೆ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಸಭೆ ಮಾಡಿರುವೆ ನನಗೆ ಹೃದಯಾಘಾತ ಆಗಿದೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ್ದು ನಾನು ಚನ್ನಾಗಿದ್ದೇನೆ ಎಂದು ಸ್ಪಷ್ಟನೆ ನೀಡಿದರು.
ಸುಳ್ಳು ಸುದ್ದಿಗೆ ಕಿವಿ ಕೊಡಬೇಡಿ ಎಂದು ವಿನಂತಿಸಿದರು. ಕಳೆದ ಎರಡುವರ್ಷಗಳಿಂದ ದಾವಣಗೆರೆ ಜಿಲ್ಲಾಧಿಕಾರಿಯಾಗಿ ಸೇವೆ ಮಾಡುತ್ತಿರುವೆ ಜನರು ಚನ್ನಾಗಿ ಸ್ಪಂದಿಸಿದ್ದಾರೆ. ಯಾರೋ ಕಿಡಿಗೇಡಿಗಳು ಸುಳ್ಳು ಸುದ್ದಿ ಹಬ್ಬಿಸಿದ್ದಾರೆ. ಸುಳ್ಳು ಸುದ್ದಿಗೆ ಗಮನ ಕೊಡದಂತೆ ಮನವಿ ಮಾಡಿದರು.
Next Story





