Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು ವಿವಿ ಯಕ್ಷಗಾನ ಅಧ್ಯಯನ ಕೇಂದ್ರದ...

ಮಂಗಳೂರು ವಿವಿ ಯಕ್ಷಗಾನ ಅಧ್ಯಯನ ಕೇಂದ್ರದ 'ದಶಮ ಸಂಭ್ರಮ'

ಅರುವ, ಪೇತ್ರಿ, ಕುರಿಯ, ಆರ್ಗೋಡು ಸೇರಿ 15 ಮಂದಿಗೆ ದಶಮಾನೋತ್ಸವ ಪ್ರಶಸ್ತಿ, ಇಬ್ಬರು ಸಾಧಕರಿಗೆ ಕೃತಿ ಪ್ರಶಸ್ತಿ

ವಾರ್ತಾಭಾರತಿವಾರ್ತಾಭಾರತಿ12 Nov 2021 10:59 PM IST
share

ಕೊಣಾಜೆ: ಮಂಗಳೂರು ವಿಶ್ವವಿದ್ಯಾನಿಲಯದ ಡಾ.ಪಿ.ದಯಾನಂದ ಪೈ ಮತ್ತು ಶ್ರೀ ಪಿ.ಸತೀಶ್ ಪೈ ಯಕ್ಷಗಾನ ಅಧ್ಯಯನ  ಕೇಂದ್ರವು  ದಶಮ ಸಂಭ್ರಮದಲ್ಲಿದೆ. ಈ ದಶಮಾನೋತ್ಸವ ಸಮಾರಂಭದಲ್ಲಿ ಯಕ್ಷಗಾನ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ದಶಮಾನೋತ್ಸವ ಪ್ರಶಸ್ತಿ ನೀಡಿ ಗೌರವಿಸಲು ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ತೆಂಕು ಬಡಗು ತಿಟ್ಟಿನ ಹಿಮ್ಮೇಳ ಹಾಗೂ ಮುಮ್ಮೇಳ ಸೇರಿದಂತೆ ಹದಿನೈದು ಮಂದಿ 'ದಶಮಾನೋತ್ಸವ ಪ್ರಶಸ್ತಿ'ಗೆ  ಹಾಗೂ ಯಕ್ಷಗಾನ ಸಾಹಿತ್ಯ ಕ್ಷೇತ್ರದ  ಇಬ್ಬರು ಸಾಧಕರು 'ಕೃತಿ ಪ್ರಶಸ್ತಿ'ಗೆ ಆಯ್ಕೆಯಾಗಿದ್ದಾರೆ. 

ಮುಮ್ಮೇಳದ ಸಾಧಕರಾದ ಹಿರಿಯ ಯಕ್ಚಗಾನ ಕಲಾವಿದ ಅರುವ ಕೊರಗಪ್ಪ ಶೆಟ್ಟಿ, ಪೇತ್ರಿ ಮಾಧವ ನಾಯ್ಕ್, ಮುಖ್ಯಪ್ರಾಣ ಕಿನ್ನಿಗೋಳಿ, ಕೃಷ್ಣ ಯಾಜಿ ಬಳ್ಕೂರು, ಆರ್ಗೋಡು ಮೋಹನ್ ದಾಸ್ ಶೆಣೈ,  ಶಿವರಾಮ ಜೋಗಿ, ಪೂಕಳ ಲಕ್ಷ್ಮೀನಾರಾಯಣ ಭಟ್, ಉಬರಡ್ಕ ಉಮೇಶ್ ಶೆಟ್ಟಿ, ಕುಂಬ್ಳೆ ಸುಂದರ್ ರಾವ್, ಹಿಮ್ಮೇಳ ಕ್ಷೇತ್ರದ ಸಾಧಕರಾದ  ಸುಬ್ರಹ್ಮಣ್ಯ ಧಾರೇಶ್ವರ, ಕುರಿಯ ಗಣಪತಿ ಭಟ್ ,  ಪುತ್ತಿಗೆ ರಘುರಾಮ ಹೊಳ್ಳ, ದಿನೇಶ ಅಮ್ಮಣ್ಣಾಯ,  ಪದ್ಯಾಣ ಶಂಕರನಾರಾಯಣ ಭಟ್, ಹರಿನಾರಾಯಣ ಬೈಪಾಡಿತ್ತಾಯ, ಹಾಗೂ ಯಕ್ಷಗಾನ ಸಾಹಿತ್ಯ ಕ್ಷೇತ್ರದಲ್ಲಿ  ಕೃತಿಗಳನ್ನು ರಚಿಸಿರುವ ಡಾ.ಉಪ್ಪಂಗಳ ಶಂಕರನಾರಾಯಣ ಭಟ್ ಹಾಗೂ ಡಾ.ಚಂದ್ರಶೇಖರ್ ದಾಮ್ಲೆ ಅವರು ದಶಮಾನೋತ್ಸವದ 'ಕೃತಿ ಪ್ರಶಸ್ತಿ'ಗೆ ಆಯ್ಕೆಯಾಗಿದ್ದಾರೆ‌.

ಅಲ್ಲದೆ ಈ ದಶಮಾನೋತ್ಸವದ ಸಂದರ್ಭದಲ್ಲಿ ಯಕ್ಷಗಾನಕ್ಕೆ ಹಾಗೂ ಯಕ್ಷಗಾನ ಕೇಂದ್ರದ ಬೆಳವಣಿಗೆಗೆ ಸಹಕಾರ ನೀಡಿದಂತಹ ಮಹನೀಯರನ್ನು ಕೇಂದ್ರದ ವತಿಯಿಂದ ಗೌರವ ಸನ್ಮಾನದೊಂದಿಗೆ ಗೌರವಿಸಲಾಗುವುದು. ನವೆಂಬರ್ ಕೊನೆಯ ವಾರದಲ್ಲಿ ನಡೆಯುವ ದಶಮಾನೋತ್ಸವ ಉದ್ಘಾಟನೆ ಸಮಾರಂಭದಲ್ಲಿ ಸಾಧಕರಿಗೆ ದಶಮಾನೋತ್ಸವ ಪ್ರಶಸ್ತಿ , ಹಾಗೂ ಗೌರವ ಸನ್ಮಾನ ನೀಡಿ ಗೌರವಿಸಲಾಗುವುದು ಎಂದು ಯಕ್ಷಗಾನ ಅಧ್ಯಯನ ಕೇಂದ್ರದ ನಿರ್ದೇಶಕರಾದ ಪ್ರೊ.ಶ್ರೀಪತಿ ಕಲ್ಲೂರಾಯ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ದಶಮ ಸಂಭ್ರಮ
ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಡಾ.ಪಿ.ದಯಾನಂದ ಪೈ ಮತ್ತು ಶ್ರೀ ಪಿ.ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರವು ಪರಿಪೂರ್ಣ ರಂಗಭೂಮಿಯಾದ ಯಕ್ಷಗಾನ ಅಧ್ಯಯನ, ಪ್ರಕಟಣೆ, ಸಂವರ್ಧನೆ ಮತ್ತು ಸಂರಕ್ಷಣೆಗಾಗಿ ಮಂಗಳೂರು ವಿವಿಯಲ್ಲಿ ಅಸ್ತಿತ್ವಕ್ಕೆ ಬಂದಿದೆ. ಯಕ್ಷಗಾನದ ಕುರಿತಂತೆ ಅಧ್ಯಯನ ಮತ್ತು ಸಂಗ್ರಹ, ವಿಚಾರಸಂಕಿರಣ, ಪ್ರಚಾರೋಪನ್ಯಾಸ, ದಾಖಲಾತಿ,  ಯಕ್ಷ ತರಬೇತಿ, ಪ್ರಾತ್ಯಕ್ಷಿಕೆ, ಯಕ್ಷಮಂಗಳ ಪ್ರಶಸ್ತಿ , ಪ್ರಚಾರೋಪನ್ಯಾಸ, ಕಲಾವಿದನಿಗೆ ಸಂಶೋಧಕರಿಗೆ , ವಿದ್ಯಾರ್ಥಿಗಳಿಗೆ ಮುಖ್ಯ ಆಕರವಾಗಬಲ್ಲ ಸುಸಜ್ಜಿತ ಗ್ರಂಥಾಲಯ, ಅನನ್ಯವಾದ ವಸ್ತುಸಂಗ್ರಹಾಲಯ ನಿರ್ಮಾಣ,  ಸಹಯೋಗದ ಕಾರ್ಯಕ್ರಮಗಳು ಇಂತಹ ಬಹುಮುಖಿ ಉದ್ದೇಶ, ಕಾರ್ಯ ಯೋಜನೆಗಳೊಂದಿಗೆ ಕಳೆದ ಹತ್ತು ವರ್ಷಗಳಿಂದ ಮುನ್ನಡೆಯುತ್ತಿದ್ದು, ಈ ಬಾರಿ ದಶಮ ಸಂಭ್ರಮವನ್ನು ವೈಶಿಷ್ಟ್ಯಪೂರ್ಣವಾಗಿ ಆಚರಿಸಲು ನಿರ್ಧರಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X