Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೃಷಿ ಕೆಲಸದಲ್ಲಿ ತೊಡಗಿದರೆ ಯಾವುದೇ...

ಕೃಷಿ ಕೆಲಸದಲ್ಲಿ ತೊಡಗಿದರೆ ಯಾವುದೇ ಒತ್ತಡ ಇರುವುದಿಲ್ಲ: ಡಾ. ಶ್ರೀ ಶಿವಮೂರ್ತಿ ಮರುಘ ಶರಣರು

ಶಿವಮೊಗ್ಗದಲ್ಲಿ ಕೃಷಿ ಮೇಳ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ12 Nov 2021 11:15 PM IST
share
ಕೃಷಿ ಕೆಲಸದಲ್ಲಿ ತೊಡಗಿದರೆ ಯಾವುದೇ ಒತ್ತಡ ಇರುವುದಿಲ್ಲ: ಡಾ. ಶ್ರೀ ಶಿವಮೂರ್ತಿ ಮರುಘ ಶರಣರು

ಶಿವಮೊಗ್ಗ,ನ.12: ವಾಣಿಜ್ಯ ಬೆಳೆಗಳಿಗಿಂತ ಮುಖ್ಯವಾಗಿ ಬಹುಬೆಳೆಗಳನ್ನು ರೈತರು ಬೆಳೆದು ಆರ್ಥಿಕ ಸಬಲರಾಗುವಂತೆ ಚಿತ್ರದುರ್ಗ ಮುರುಘ ಮಠದ ಡಾ. ಶ್ರೀ ಶಿವಮೂರ್ತಿ ಮರುಘ ಶರಣರು ಕರೆ ನೀಡಿದರು.

ಶುಕ್ರವಾರ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಗೆ ವಿವಿ ವತಿಯಿಂದ ನವುಲೆಯಲ್ಲಿ ಆಯೋಜಿಸಿರುವ ಎರಡು ದಿನಗಳ ಕೃಷಿ ಮೇಳ ಉದ್ಘಾಟಿಸಿ ಅವರು ಮಾತನಾಡಿದರು.

ಒಂದೇ ಬಗೆಯ ವಾಣಿಜ್ಯ ಬೆಳೆ ಬೆಳೆದು ನಷ್ಟ ಅನುಭವಿಸುವುದಕ್ಕಿಂತ ಬಹುಬೆಳೆಯಲ್ಲಿ ನಷ್ಟವಿಲ್ಲದೆ ಜೀವನ ನಡೆಸಬಹುದಾಗಿದೆ. ಪ್ರಗತಿಪರ ಕೃಷಿಯಿಂದ ಹೆಚ್ಚಿನ ಲಾಭಗಳಿಸಬಹುದಾಗಿದೆ, ರೈತರು ಬೆಳೆದ ಬೆಳೆಗೆ ಸೂಕ್ತ ಬೆಲೆ ಸಿಕ್ಕುತ್ತಿಲ್ಲ ಎಂಬ ಅಳಲು ಬಹಳ ವರ್ಷ ಗಳಿಂದ ಇದೆ ಇದನ್ನು ಹೋಗಲಾಡಿಸಲು ಸಾಧ್ಯವಾಗುತ್ತಿಲ್ಲ. ಆದರೆ ಬಹುಬೆಳೆ ಪದ್ಧತಿ ಎಲ್ಲಾ ರೈತರಿಗೂ ಅನುಕೂಲಕರ ಎಂಬುದು ವೈಜ್ಞಾನಿಕವಾಗಿಯೂ ಸಾಬೀತಾಗಿದೆ ಎಂದು ಹೇಳಿದರು.

ಕೃಷಿ ಕೆಲಸದಲ್ಲಿ ತೊಡಗಿದರೆ ಯಾವುದೇ ಒತ್ತಡ ಇರುವುದಿಲ್ಲ. ರೋಗ ಮುಕ್ತ ಜೀವನ ನಡೆಸಬಹುದಾಗಿದೆ. ಕೃಷಿ ಕೆಲಸದಲ್ಲಿ ತೊಡಗಿದರೆ ವಾಕ್ ಮಾಡುವ ಸಂದರ್ಭವವೇ ಬರುವುದಿಲ್ಲ, ರಾಗಿ ಹಾಗೂ ಸಿರಿ ಧಾನ್ಯ ಗಳನ್ನು ಪ್ರತಿ ನಿತ್ಯ ಬಳಸುವುದರಿಂದ ಆರೋಗ್ಯ ಕಾಪಾಡಿಕೊಳ್ಳಬಹುದಾಗಿದೆ. ಜೀವನ ಪದ್ಧತಿ ಬದಲಾಯಿಸಿಕೊಳ್ಳಬೇಕಿದೆ. ಯಾಂತ್ರಿಕ ಜೀವನದಿಂದ ಹೊರ ಬರಬೇಕಿದೆ ಎಂದರು.

ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಶಿವಮೊಗ್ಗದ ಗೌರವಾನ್ವಿತ ವ್ಯವಸ್ಥಾಪನಾ ಮಂಡಳಿ ಸದಸ್ಯರು ಹಾಜರಿದ್ದರು. ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ.ಎಂ.ಕೆ.ನಾಯಕ್ ಅಧ್ಯಕ್ಷತೆ ವಹಿಸಿದ್ದರು. ವಿಶೇಷ ಆಹ್ವಾನಿತರಾಗಿ ರಾಜ್ಯಪಶಸ್ತಿ ಪುರಸ್ಕೃತ ಕೃಷಿಕ ಹೆಚ್.ವಿ. ಸಜ್ಜನ್. ವಿಶ್ರಾಂತ ಪ್ರಾಚಾರ್ಯ ಕೆ. ಗುಣಪಾಲ್ ಕಡಂಬ, ಪ್ರಗತಿಪರ ಕೃಷಿಕ ಕೆ.ಆರ್. ಕೇಶವ, ಡಾ.ಬಿ. ಹೇಮ್ಲಾ ನಾಯಕ್ ಮೊದಲಾದವರಿದ್ದರು. 36 ವಿಭಾಗಗಳಿಂದ ವಸ್ತು ಪ್ರದರ್ಶನ, ಕೃಷಿ ತಾಕುಗಳ ಪ್ರದರ್ಶನ ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ಶ್ರೇಷ್ಠ ರೈತ ಮತ್ತು ರೈತ ಮಹಿಳೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಕೃಷಿ ಮಳಿಗೆಗಳು : ಕೃಷಿ ಮೇಳದಲ್ಲಿ ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಸೇರಿದಂತೆ ವಿವಿಧ ಜಿಲ್ಲೆಗಳ ಕೃಷಿ, ತೋಟಗಾರಿಕೆ, ಕೃಷಿ ವಿಜ್ಞಾನ ಕೇಂದ್ರಗಳು, ಪಶುಸಂಗೋಪನೆ, ಕಾನೂ ಸೇವಾ ಪ್ರಾಧಿಕಾರ ಸೇರಿದಂತೆ ವಿವಿಧ ಇಲಾಖೆಗಳ ಒಟ್ಟು 36 ಮಳಿಗೆಗಳನ್ನು ಸ್ಥಾಪಿಸಲಾಗಿದ್ದು, ರೈತರ, ಸಾರ್ವಜನಿಕರ ಗಮನ ಸೆಳೆಯುತ್ತಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X