Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸರಕಾರದ ಜನವಿರೋಧಿ ನೀತಿಗಳಿಂದ ನಿರುದ್ಯೋಗ...

ಸರಕಾರದ ಜನವಿರೋಧಿ ನೀತಿಗಳಿಂದ ನಿರುದ್ಯೋಗ ಸೃಷ್ಟಿ: ಪೊ.ಚಂದ್ರ ಪೂಜಾರಿ

ವಾರ್ತಾಭಾರತಿವಾರ್ತಾಭಾರತಿ13 Nov 2021 12:45 PM IST
share
ಸರಕಾರದ ಜನವಿರೋಧಿ ನೀತಿಗಳಿಂದ ನಿರುದ್ಯೋಗ ಸೃಷ್ಟಿ: ಪೊ.ಚಂದ್ರ ಪೂಜಾರಿ

ಮಂಗಳೂರು, ನ.13: ದೇಶದಲ್ಲಿ ನಿರುದ್ಯೋಗ ಹೆಚ್ಚಳ ಆಗುತ್ತಿರುವ ನಡುವೆ ಉದ್ಯೋಗ ಇರುವವರಿಗೆ ಗುಣಮಟ್ಟದ ಉದ್ಯೋಗ ಇಲ್ಲ. ಸರಕಾರ ಉದ್ಯೋಗ ಸೃಷ್ಟಿ ಮಾಡುವ ಬಗ್ಗೆ ಗಮನಹರಿಸದೆ ಬರೀ ಕೈಗಾರಿಕೆಗಳ ಮೇಲೆ ಗಮನಹರಿಸುತ್ತಿದೆ ಎಂದು ಹಂಪಿ ವಿಶ್ವವಿದ್ಯಾನಿಲಯದ ನಿವೃತ್ತ ಪ್ರಾಧ್ಯಾಪಕ ಪ್ರೊ.ಚಂದ್ರ ಪೂಜಾರಿ ಹೇಳಿದ್ದಾರೆ.

ಡಿವೈಎಫ್‌ಐ 23ನೇ ದ.ಕ. ಜಿಲ್ಲಾ ಸಮ್ಮೆಳನದ ಅಂಗವಾಗಿ ಸಿಪಿಎಂ ಮಂಗಳೂರು ನಗರ ಉತ್ತರ ಮತ್ತು ದಕ್ಷಿಣ ಸಮಿತಿಗಳ ವತಿಯಿಂದ 'ಉದ್ಯೋಗದ ಹಕ್ಕು, ಸರಕಾರದ ನೀತಿಗಳು' ಎಂಬ ವಿಚಾರದಲ್ಲಿ ಶುಕ್ರವಾರ ನಡೆದ ವಿಚಾರ ಸಂಕಿರಣದಲ್ಲಿ ಅವರು ಮಾತನಾಡುತ್ತಿದ್ದರು.

ದೇಶದಲ್ಲಿ ಉದ್ಯೋಗ ಸೃಷ್ಟಿ ಮಾಡಬೇಕಾದ ಸರಕಾರವೇ ಸುಮ್ಮನಿದೆ. ಸರಕಾರದ ನೀತಿಯಿಂದ ಆರ್ಥಿಕ ಕುಸಿತ ಉಂಟಾಗಿದೆ. 2016ರಲ್ಲಿ ನೋಟು ಅಮಾನ್ಯೀಕರಣದಿಂದಾಗಿ ಆರ್ಥಿಕತೆ ಹಠಾತ್ ಕುಸಿತವಾಗಿದೆ. ಬಳಿಕ ಜಿಎಸ್ಟಿಯಿಂದಾಗಿ ಆರ್ಥಿಕತೆ ಮತ್ತಷ್ಟು ಕುಸಿಯಿತು ಎಂದು ಪ್ರೊ. ಚಂದ್ರ ಪೂಜಾರಿ ತಿಳಿಸಿದ್ದಾರೆ.

ಜನರು ಉದ್ಯೋಗಕ್ಕೆ ಅರ್ಜಿ ಸಲ್ಲಿಸಿ ಬೇಸತ್ತು ಈಗ ಅರ್ಜಿ ಸಲ್ಲಿಸುವುದನ್ನೇ ಬಿಟ್ಟಿದ್ದಾರೆ. ಲಾಕ್‌ಡೌನ್ ಬಳಿಕ ಇನ್ನಷ್ಟು ಸಂಕಷ್ಟ ಉಂಟಾಗಿದೆ. ಹಲವು ಮಂದಿ ಉದ್ಯೋಗ ಕಳೆದುಕೊಂಡು ಬೀದಿಗೆ ಬಂದಿದ್ದಾರೆ. ಆದರೂ ಸರಕಾರ ಉದ್ಯೋಗ ಸೃಷ್ಟಿಗಾಗಿ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ ಎಂದು ಹೇಳಿದರು.

ದ.ಕ. ಜಿಲ್ಲೆಯಲ್ಲಿ ಜಾತಿ, ಧರ್ಮದ ರಾಜಕೀಯ ನಡೆಯುತ್ತಿದೆ. ಜನರ ಸಮಸ್ಯೆ, ನಿರುದ್ಯೋಗದ ಬಗ್ಗೆ ಮಾತನಾಡುವವರು ಇಲ್ಲ. ಉದ್ಯೋಗಕ್ಕಿಂತ ಮಂದಿರ ನಿರ್ಮಾಣವೇ ದೊಡ್ಡ ವಿಷಯವಾಗಿದೆ. ಈ ನಡುವೆ ಪ್ರಮುಖ ಪಾತ್ರ ವಹಿಸಬೇಕಾದ ಮಾಧ್ಯಮ ಬೇಜವಾಬ್ದಾರಿಯ ವರ್ತನೆ ತೋರುತ್ತಿದೆ. ಪ್ರಸ್ತುತ ಸರಕಾರ ಶಿಕ್ಷಣ, ಆರೋಗ್ಯ, ಉದ್ಯೋಗದ ಅಭಿವೃದ್ಧಿಯತ್ತ ಗಮನ ಹರಿಸಬೇಕು ಎಂದು ಪ್ರೊ.ಚಂದ್ರ ಪೂಜಾರಿ ತಿಳಿಸಿದರು.

ಸಿಪಿಎಂ ದ.ಕ. ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಮುನೀರ್ ಕಾಟಿಪಳ್ಳ ಮಾತನಾಡಿದರು. ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಸುನೀಲ್ ಕುಮಾರ್ ಬಜಾಲ್ ವಿಚಾರ ಸಂಕಿರಣದ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ನಗರ ದಕ್ಷಿಣ ಕಾರ್ಯದರ್ಶಿ ಸಂತೋಷ್ ಬಜಾಲ್ ಸ್ವಾಗತಿಸಿದರು. ಮಂಗಳೂರು ನಗರ ಉತ್ತರ ಕಾರ್ಯದರ್ಶಿ ಬಶೀರ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X