ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯಲ್ಲಿ ಎನ್ಕೌಂಟರ್: 26 ಮಾವೋವಾದಿಗಳ ಹತ್ಯೆ

ಸಾಂದರ್ಭಿಕ ಚಿತ್ರ
ನಾಗ್ಪುರ/ಮುಂಬೈ: ಮುಂಬೈನಿಂದ 900 ಕಿ.ಮೀ. ದೂರದಲ್ಲಿರುವ ಪೂರ್ವ ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯಲ್ಲಿ ಶನಿವಾರ ಪೊಲೀಸರು ನಡೆಸಿದ ಎನ್ಕೌಂಟರ್ನಲ್ಲಿ ಕನಿಷ್ಠ 26 ಮಾವೋವಾದಿಗಳು ಹತರಾಗಿದ್ದಾರೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ ಎಂದು ndtv.com ವರದಿ ಮಾಡಿದೆ.
ನಾವು ಈವರೆಗೆ 26 ನಕ್ಸಲರ ಮೃತದೇಹಗಳನ್ನು ಅರಣ್ಯದಿಂದ ವಶಪಡಿಸಿಕೊಂಡಿದ್ದೇವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಕಿತ್ ಗೋಯಲ್ ತಿಳಿಸಿದ್ದಾರೆ.
ಹೆಚ್ಚುವರಿ ಎಸ್ಪಿ ಸೌಮ್ಯಾ ನೇತೃತ್ವದಲ್ಲಿ ಸಿ-60 ಪೊಲೀಸ್ ಕಮಾಂಡ್ ತಂಡ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾಗ ಮರ್ಡಿಂತೋಲಾ ಅರಣ್ಯ ಪ್ರದೇಶದ ಕೊರ್ಚಿಯಲ್ಲಿ ಬೆಳಗ್ಗೆ ಗುಂಡಿನ ಕಾಳಗ ನಡೆದಿದೆ ಎಂದು ಗೋಯಲ್ ಹೇಳಿದ್ದಾರೆ.
Next Story