ನನ್ನ ಕುಟುಂಬದವರು ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ ಎಂದ ಜಿ.ಟಿ.ದೇವೇಗೌಡ

ಮೈಸೂರು,ನ.13: ವಿಧಾನ ಪರಿಷತ್ ಚುನಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಆಫರ್ ನ್ನು ಶಾಸಕ ಜಿ.ಟಿ.ದೇವೇಗೌಡ ಅವರು ತಿರಸ್ಕರಿಸಿದರು.
ಮೈಸೂರಿನಲ್ಲಿ ಶನಿವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ನನ್ನ ಕುಟುಂಬದವರು ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ. ಜೆಡಿಎಸ್ ನವರು ನನ್ನನ್ನು ಬಿಟ್ಟು ತುಂಬಾ ವರ್ಷಗಳಾಗಿದೆ. ನನ್ನನ್ನು ಬಿಟ್ಟೇ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಪಕ್ಷದ ಅಧ್ಯಕ್ಷರ ನೇಮಕ ಮಾಡಿದ್ದಾರೆ. ನನ್ನ ಗಮನಕ್ಕೆ ಬಾರದೇ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಕುಮಾರಸ್ವಾಮಿ ಬಂದು ಹೋಗಿದ್ದಾರೆ. ರಾಜಕೀಯ ಮಾಡುವ ಸಂದರ್ಭ ಬಂದಾಗ ಎಲ್ಲವನ್ನೂ ಹೇಳುತ್ತೇನೆ ಎಂದು ತಿಳಿಸಿದರು.
Next Story





