Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ​ಇಂದು ದೇಶೀಯ ಚಿಂತಕರ ಅಗತ್ಯವಿದೆ:...

​ಇಂದು ದೇಶೀಯ ಚಿಂತಕರ ಅಗತ್ಯವಿದೆ: ಡಾ.ಶೇಷ ಶಾಸ್ತ್ರಿ

ಸೇಡಿಯಾಪು, ಕಡಂಗೋಡ್ಲು ಪ್ರಶಸ್ತಿ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ13 Nov 2021 8:23 PM IST
share
​ಇಂದು ದೇಶೀಯ ಚಿಂತಕರ ಅಗತ್ಯವಿದೆ: ಡಾ.ಶೇಷ ಶಾಸ್ತ್ರಿ

ಉಡುಪಿ, ನ.13: ಕನ್ನಡ ಭಾಷೆ, ಸಾಹಿತ್ಯ, ವ್ಯಾಕರಣ, ಭಾಷಾಶಾಸ್ತ್ರ ಹಾಗೂ ಸಂಶೋಧನಾ ಕ್ಷೇತ್ರದಲ್ಲಿ ಮಹತ್ತರ ಕೊಡುಗೆ ನೀಡಿದ ಸೇಡಿಯಾಪು ಕೃಷ್ಣ ಭಟ್ಟರಂಥ ದೇಶೀಯ ಚಿಂತಕರ ಅಗತ್ಯ ಇಂದು ತುಂಬಾ ಇದೆ ಎಂದು ಖ್ಯಾತ ವಿದ್ವಾಂಸ ಹಾಗೂ ಅನಂತಪುರದ ಶ್ರೀಕೃಷ್ಣದೇವರಾಯ ವಿವಿಯ ನಿವೃತ್ತ ಕನ್ನಡ ಪ್ರಾಧ್ಯಾಪಕರಾಗಿರುವ ಡಾ.ಆರ್.ಶೇಷ ಶಾಸ್ತ್ರಿ ಹೇಳಿದ್ದಾರೆ.

ಉಡುಪಿಯ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಷನ್ ಇವರ ಸಂಯುಕ್ತ ಆಶ್ರಯದಲ್ಲಿ ಇಂದು ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆದ ಸಮಾರಂಭದಲ್ಲಿ 2021ನೇ ಸಾಲಿನ ಸೇಡಿಯಾಪು ಕೃಷ್ಣ ಭಟ್ಟ ಪ್ರಶಸ್ತಿಯನ್ನು ಸ್ವೀಕರಿಸಿ ಅವರು ಮಾತನಾಡುತಿದ್ದರು.

ಇವರೊಂದಿಗೆ 2020ನೇ ಸಾಲಿನ ಸೇಡಿಯಾಪು ಪ್ರಶಸ್ತಿಯನ್ನು ಕಾಸರಗೋಡಿನ ನಿವೃತ್ತ ಕನ್ನಡ ಪ್ರಾಧ್ಯಾಪಕ ಹಾಗೂ ವಿದ್ವಾಂಸ ಡಾ.ಪಿ.ಶ್ರೀಕೃಷ್ಣ ಭಟ್ ಅವರು ಸ್ವೀಕರಿಸಿದರು. ಸೇಡಿಯಾಪು ಅವರ ಚಿಂತನೆ ಆಳ, ವಿಸ್ತಾರ, ವ್ಯಾಪಕ ಅಧ್ಯಯನಗಳನ್ನು ಒಳಗೊಂಡಿತ್ತು ಎಂದರು.

ಇದರೊಂದಿಗೆ 2021ನೇ ಸಾಲಿನ ಕಡೆಂಗೋಡ್ಲು ಕಾವ್ಯ ಪ್ರಶಸ್ತಿಯನ್ನು ಹಾಸನ ಜಿಲ್ಲೆಯ ಅರಸೀಕೆರೆಯಲ್ಲಿ ಜೀವವಿಮಾ ನಿಗಮದ ಆಡಳಿತಾಧಿಕಾರಿಯಾಗಿರುವ ಡಿ.ಎಸ್.ರಾಮಸ್ವಾಮಿ ತಮ್ಮ ‘ಮೀನು ಬೇಟೆಗೆ ನಿಂತ ದೋಣಿ ಸಾಲು’ ಕೃತಿಗೆ ಸ್ವೀಕರಿಸಿದರು.

ಪ್ರಶಸ್ತಿ ವಿಜೇತ ಕೃತಿಯನ್ನು ಬಿಡುಗಡೆಗೊಳಿಸಿದ ಖ್ಯಾತ ವಿಮರ್ಶಕ ಪ್ರೊ. ಮುರಳೀಧರ ಉಪಾಧ್ಯಾಯ ಹಿರಿಯಡಕ ಅವರು, ಕೃತಿ ಹಾಗೂ ಕೃತಿಕಾರರನ್ನು ಅಭಿನಂದಿಸಿ ಮಾತನಾಡಿದರು. ಉಡುಪಿ ಪೂರ್ಣಪ್ರಜ್ಞ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಮಂಜುನಾಥ ಕರಬ ಅವರು ಸೇಡಿಯಾಪು ಪ್ರಶಸ್ತಿ ವಿಜೇತರನ್ನು ಅಭಿನಂದಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಕುಮಟಾ ಯಕ್ಷಗಾನ ಸಂಶೋಧನಾ ಕೇಂದ್ರದ ನಿರ್ದೇಶಕ ರಾಗಿರುವ ಡಾ.ಜಿ.ಎಲ್.ಹೆಗಡೆ ಅವರು ‘ಡಾ.ಶೇಣಿ ಗೋಪಾಲಕೃಷ್ಣ ಭಟ್ ಮತ್ತು ಕನ್ನಡ ಸಾಹಿತ್ಯ’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದರು.

ಎಂಜಿಎಂ ಕಾಲೇಜಿನ ಪ್ರಾಂಶುಪಾಲರಾದ ಡಾ.ದೇವಿದಾಸ್ ಎಸ್.ನಾಯ್ಕ್ ಅವರು ಸಮಾರಂಭದ ಅದ್ಯಕ್ಷತೆ ವಹಿಸಿದ್ದರು. ಡಾ.ಸೇಡಿಯಾಪು ಜಯರಾಮ ಭಟ್ ಅವರು ಉಪಸ್ಥಿತರಿದ್ದರು.

ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದ ಆಡಳಿತಾಧಿಕಾರಿ ಡಾ.ಬಿ. ಜಗದೀಶ್ ಶೆಟ್ಟಿ ಅತಿಥಿಗಳನ್ನು ಸ್ವಾಗತಿಸಿದರೆ, ವಿದ್ವಾಂಸ ಡಾ.ಪಾದೇಕಲ್ಲು ವಿಷ್ಣು ಭಟ್ಟ ಪ್ರಾಸ್ತಾವಿಕ ಮಾತುಗಳೊಂದಿಗೆ ಪ್ರಶಸ್ತಿ ವಿಜೇತರನ್ನು ಪರಿಚಯಿಸಿದರು. ಕಾಲೇಜಿನ ವಿದ್ಯಾರ್ಥಿನಿ ದೀಪಿಕಾ ವಂದಿಸಿದರೆ, ನವ್ಯಶ್ರೀ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X