Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಿಟ್ ಕಾಯಿನ್ ಹಗರಣ; ಅಮೆರಿಕದಲ್ಲಿ...

ಬಿಟ್ ಕಾಯಿನ್ ಹಗರಣ; ಅಮೆರಿಕದಲ್ಲಿ ಪ್ರಧಾನಿ ಮೋದಿಗೆ ಮುಜುಗರ ಆಗಿದೆ ಎಂದ ಎಚ್.ಡಿ.ಕುಮಾರಸ್ವಾಮಿ

''ಕಾಂಗ್ರೆಸ್ ನಾಯಕರು ತನಿಖೆ ದಾರಿ ತಪ್ಪಿಸುವುದು ಬೇಡ''

ವಾರ್ತಾಭಾರತಿವಾರ್ತಾಭಾರತಿ13 Nov 2021 8:31 PM IST
share
ಬಿಟ್ ಕಾಯಿನ್ ಹಗರಣ; ಅಮೆರಿಕದಲ್ಲಿ ಪ್ರಧಾನಿ ಮೋದಿಗೆ ಮುಜುಗರ ಆಗಿದೆ ಎಂದ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು, ನ.13: ಪ್ರಧಾನಿ ನರೇಂದ್ರ ಮೋದಿ ಇತ್ತೀಚೆಗೆ ಅಮೆರಿಕಕ್ಕೆ ಭೇಟಿ ನೀಡದೇ ಇದ್ದಿದ್ದರೆ ಬಹುಶಃ ಬಿಟ್ ಕಾಯಿನ್ ಹಗರಣ ಬೆಳಕಿಗೆ ಬರುತ್ತಿರಲಿಲ್ಲ. ಅವರು ಮೌನವಾಗಿದ್ದಾರೆ ಎಂದರೆ ಹಗರಣವನ್ನು ಮುಚ್ಚಿಹಾಕಲು ಹೊರಟಿದ್ದಾರೆ ಅಂತ ಹೇಳುವುದಕ್ಕೆ ಆಗುವುದಿಲ್ಲ. ಅಮೆರಿಕದಲ್ಲಿ ಅವರಿಗೆ ಆಗಿರುವ ಮುಜುಗರವನ್ನು ಅಲ್ಲಗಳೆಯಲು ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ಶನಿವಾರ ನಗರದಲ್ಲಿರುವ ಪಕ್ಷದ ಕಚೇರಿಯಲ್ಲಿ ನಡೆದ ಜನತಾ ಪರ್ವ 1.0 ಎರಡನೇ ಹಂತದ ಕಾರ್ಯಾಗಾರ ‘ಜನತಾ ಸಂಗಮ'ದ ವೇಳೆ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಅಮೆರಿಕದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೆಲ ತನಿಖಾ ಸಂಸ್ಥೆಗಳ ಮುಖ್ಯಸ್ಥರು ಬಿಟ್ ಕಾಯಿನ್ ಹಗರಣದ ವಿವರ ನೀಡಿದ್ದಾರೆ. ಅಲ್ಲಿ ಅವರಿಗೆ ಕಸಿವಿಸಿ ಆಗಿರುವುದು ನಿಜ. ಹೀಗಾಗಿ ಪ್ರಧಾನಿ ಮೌನವಾಗಿದ್ದರೂ ಇಡೀ ಹಗರಣವನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದರು.

ಬಿಟ್ ಕಾಯನ್ ಪ್ರಕರಣ ಕಳೆದ 15 ದಿನಗಳಿಂದ ಸದ್ದು ಮಾಡುತ್ತಿದೆ. ಸಾರ್ವಜನಿಕವಾಗಿ ಆರೋಪ ಪ್ರತ್ಯಾರೋಪ ಎರಡೂ ರಾಷ್ಟ್ರೀಯ ಪಕ್ಷಗಳ ನಡುವೆ ನಡೆಯುತ್ತಿರುವುದನ್ನು ಗಮನಿಸುತ್ತಿದ್ದೇನೆ. ಸೂಕ್ಷ್ಮ ವಿಚಾರಗಳ ಬಗ್ಗೆ ಜವಾಬ್ದಾರಿಯುತವಾಗಿ ಮಾತನಾಡದಂತೆ ನಾಯಕರಿಗೆ ಹೇಳಲು ಬಯಸುತ್ತೇನೆ. ನಾನು ಹಾಗೆ ಮಾತನಾಡಲು ಬಯಸುವುದಿಲ್ಲ ಎಂದು ಕುಮಾರಸ್ವಾಮಿ ತಿಳಿಸಿದರು.

58,000 ಕೋಟಿ ರೂ. ಅವ್ಯವಹಾರ ಆಗಿದೆ ಅಂತ ಸುದ್ದಿ ಮಾಧ್ಯಮಗಳಲ್ಲಿ ಬರುತ್ತಿದೆ. ನನ್ನಲ್ಲಿ ಇರುವ ಮಾಹಿತಿ ಪ್ರಕಾರ ಶ್ರೀಕಿ ಎಂಬ ಯುವಕನನ್ನು ಎಂಟರಿಂದ ಹತ್ತು ಬಾರಿ ಬಂಧನ ಮಾಡಲಾಗಿದೆ. 2020ರ ನವೆಂಬರ್‍ನಿಂದ 8-10 ಬಾರಿ ಪೊಲೀಸರು ಕರೆದುಕೊಂಡು ಬಂಧನ ಮಾಡಿ ಬಿಡುಗಡೆ ಮಾಡಿದ್ದು ಆಗಿದೆ. ಇನ್ನು ಹದಿನೈದು ದಿನ ಸಮಯ ಕೊಡಿ, ಈ ಹಗರಣದ ಬಗ್ಗೆ ನಾನೇ ಪೂರ್ಣ ಮಾಹಿತಿ ಕೊಡುತ್ತೇನೆ ಎಂದು ಅವರು ಹೇಳಿದರು.

ಕಾಂಗ್ರೆಸ್ ತನಿಖೆ ಹಾದಿ ತಪ್ಪಿಸುವುದು ಬೇಡ: ನಾನು ಈಗಾಗಲೇ ಜನಧನ್ ಖಾತೆಗಳಿಂದ ಹಣ ಎತ್ತಿರುವುದನ್ನು ಕೂಡ ಹೇಳಿದ್ದೇನೆ. ಈ ಬಗ್ಗೆ ಕೂಡ ಕೇಂದ್ರ ಗಂಭೀರವಾಗಿದೆ ಎನ್ನುವುದು ನನ್ನ ಭಾವನೆ.  ಸುಖಾಸುಮ್ಮನೆ ಕಾಂಗ್ರೆಸ್ ನಾಯಕರು ತನಿಖೆ ನಡೆಯುತ್ತಿರುವ ಸಂದರ್ಭದಲ್ಲಿ ಆ ತನಿಖೆಯ ಹಾದಿ ತಪ್ಪಿಸುವುದು ಬೇಡ. ಅದಕ್ಕೆ ಅವರು ಕಾರಣರಾಗುವುದು ಬೇಡ ಎಂದು ಕುಮಾರಸ್ವಾಮಿ, ಕಾಂಗ್ರೆಸ್ ನಾಯಕರಿಗೆ ಕಿವಿಮಾತು ಹೇಳಿದರು.

ನಿಖರವಾಗಿ ಯಾವ ರಾಜಕೀಯ ಮುಖಂಡರಿಗೆ ಅಥವಾ ಅಧಿಕಾರಿಗೆ ಹಣ ವರ್ಗಾವಣೆ ಆಗಿದೆ ಎಂಬ ಬಗ್ಗೆ ಕಾಂಗ್ರೆಸ್ ನಾಯಕರು ದಾಖಲೆ ನೀಡುವುದು ಸೂಕ್ತ. ಆಗ ಜನರಿಗೂ ಸರಿಯಾದ ಮಾಹಿತಿ ಸಿಕ್ಕಿದಂತೆ ಆಗುತ್ತದೆ. ಈ ಹಗರಣದಿಂದ ಸಾರ್ವಜನಿಕರಲ್ಲೂ ಆತಂಕದ ಜತೆಗೆ ನೂರಾರು ಪ್ರಶ್ನೆಗಳೂ ಉಂಟಾಗಿವೆ ಎಂದು ಕುಮಾರಸ್ವಾಮಿ ಹೇಳಿದರು.

ಯುಬಿ ಸಿಟಿ ಘಟನೆ ನೆನಪಿಸಿದ ಎಚ್‍ಡಿಕೆ: 2016 ರಿಂದಲೇ ಬಿಟ್ ಕಾಯಿನ್ ದಂಧೆ ಪ್ರಾರಂಭ ಆಗಿದೆ ಅಂತ ಮಾಹಿತಿ ಇದೆ. 2018ರ ಫೆಬ್ರವರಿಯಲ್ಲಿ ಯುಬಿ ಸಿಟಿಯಲ್ಲಿ ಹಲ್ಲೆಯ ಘಟನೆ ನಡೆದಿತ್ತು. ಅದು ಕೇವಲ ಇಬ್ಬರು ವ್ಯಕ್ತಿಗಳ ನಡುವಿನ ಸಂಘರ್ಷ ಅಲ್ಲ ಅಂತ ಆಗಲೇ ನಾನು ಹೇಳಿದ್ದೆ ಎಂದು ಕುಮಾರಸ್ವಾಮಿ ತಿಳಿಸಿದರು.

ಆಗ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರವೇ ಇತ್ತು. ಆ ಘಟನೆ ನಡೆದ ಸಂದರ್ಭದಲ್ಲಿ ಶ್ರೀಕಿ ಕೂಡ ಅಲ್ಲಿಯೇ ಇದ್ದ ಎನ್ನುವುದು ಗೊತ್ತು. ಆಗ ಯಾಕೆ ಶ್ರೀಕಿಯನ್ನು ಬಂಧಿಸಲಿಲ್ಲ? ಆಗ ಪಶ್ಚಿಮ ಬಂಗಾಳದಿಂದ ಒಬ್ಬ ಆರೋಪಿಯನ್ನು ಬಂಧಿಸಿ ಕರೆ ತರಲಾಗಿತ್ತು ಎಂದು ಕುಮಾರಸ್ವಾಮಿ ಮಾಹಿತಿ ನೀಡಿದರು.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X