ರಾಜ್ಯದಲ್ಲಿ ನ.16ವರೆಗೆ ಭಾರೀ ಮಳೆ ಸಾಧ್ಯತೆ

ಬೆಂಗಳೂರು, ನ.13: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ವಾಯುಭಾರ ಕುಸಿತದಿಂದಾಗಿ ಬೆಂಗಳೂರು ನಗರ, ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ ಸೇರಿದಂತೆ ನೆನ್ನೆ(ನ.13) ಚಳಿಯ ವಾತಾವರಣವಿದ್ದು, ಇಂದು(ನ.14) ಮತ್ತು ನಾಳೆ(ನ.15) ಭಾರೀ ಮಳೆಯಾಗುವ ಸಾಧ್ಯತೆ ಇದೆ. ನ.16ರವರೆಗೂ ರಾಜ್ಯದ ದಕ್ಷಿಣ ಒಳನಾಡಿನ ಬೆಂಗಳೂರು ಸೇರಿದಂತೆ ಚಿತ್ರದುರ್ಗ, ತುಮಕೂರು ಮತ್ತು ಕೋಲಾರಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ.
ಅಕ್ಟೋಬರ್ ತಿಂಗಳಿನಲ್ಲಿ ಕರ್ನಾಟಕದಾದ್ಯಂತ ಮಳೆಗೆ 21 ಜನರು ಸಾವನ್ನಪ್ಪಿದ್ದು, ರಾಜ್ಯದಲ್ಲಿ ನ.16ರವರೆಗೆ ಭಾರೀ ಮಳೆ ಸುರಿಯಲಿದೆ. ವಿಶೇಷವಾಗಿ ಚಿತ್ರದುರ್ಗ, ತುಮಕೂರು ಮತ್ತು ಕೋಲಾರಗಳಲ್ಲಿ ಭಾರೀ ಮಳೆಯಾಗಲಿದೆ.
Next Story





