Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕನ್ನಡ ಕಟ್ಟುವ ಪ್ರಕ್ರಿಯೆ ಕೇವಲ...

ಕನ್ನಡ ಕಟ್ಟುವ ಪ್ರಕ್ರಿಯೆ ಕೇವಲ ಆರಂಭದಲ್ಲಿದ್ದರೆ ಮಾತ್ರ ಸಾಲದು: ಡಾ. ಮೋಹನ ಆಳ್ವ

'ತುಳುನಾಡಿನ ನೆಲದಲ್ಲಿ ಕನ್ನಡ ವೃಕ್ಷದ ಬೇರು-ಚಿಗುರುಗಳು' ವಿಚಾರಗೋಷ್ಠಿ

ವಾರ್ತಾಭಾರತಿವಾರ್ತಾಭಾರತಿ13 Nov 2021 9:05 PM IST
share
ಕನ್ನಡ ಕಟ್ಟುವ ಪ್ರಕ್ರಿಯೆ ಕೇವಲ ಆರಂಭದಲ್ಲಿದ್ದರೆ ಮಾತ್ರ ಸಾಲದು: ಡಾ. ಮೋಹನ ಆಳ್ವ

ಕಾರ್ಕಳ: ಕನ್ನಡ ಕಟ್ಟುವ ಪ್ರಕ್ರಿಯೆ ಕೇವಲ ಆರಂಭದಲ್ಲಿದ್ದರೆ ಮಾತ್ರ ಸಾಲದು, ಬದಲು ಮುಂದುವರಿಕೆಯಲ್ಲೂ, ಸೂರ್ಯಚಂದ್ರರಿರುವವರೆಗೂ ನಡೆಯಬೇಕಾದುದು ಅನಿವಾರ್ಯ ಎಂದು ಮೂಡಬದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಮೋಹನ ಆಳ್ವ ಹೇಳಿದರು.

ಶ್ರೀಭುವನೇಂದ್ರ ಕಾಲೇಜಿನಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ, ನಮ ತುಳುವೆರ್ ಕಲಾ ಸಂಘಟನೆ, ನಾಟ್ಕದೂರು, ಮುದ್ರಾಡಿ ಹಾಗೂ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಕನ್ನಡ ಕಾಯಕ ವರ್ಷದ ಪ್ರಯುಕ್ತ ಅಯೋಜಿಸಿದ 'ತುಳುನಾಡಿನ ನೆಲದಲ್ಲಿ ಕನ್ನಡ ವೃಕ್ಷದ ಬೇರು-ಚಿಗುರುಗಳು' ಎಂಬ ಕುರಿತು ರಾಜ್ಯಮಟ್ಟದ ವಿಚಾರಗೋಷ್ಠಿಯನ್ನು ಶನಿವಾರ ಉದ್ಘಾಟಿಸಿ ಮಾತನಾಡಿದ ಅವರು, ಎರಡು ಸಾವಿರ ವರುಷ ಇತಿಹಾಸವಿರುವ ಕನ್ನಡ ಭಾಷೆಗೆ ಇಂದು ಸೋಲಿನ ಅನುಭವವಾಗದಂತೆ ನಾವೆಲ್ಲರೂ ಕಟಿಬದ್ಧರಾಗಿ ದುಡಿಯಬೇಕು. ಭಾಷೆಯಲ್ಲೂ ಸ್ಪರ್ಧಾತ್ಮಕತೆ ಬಂದಿರುವುದು ವಿಷಾದದ ಸಂಗತಿ. ನಮ್ಮಲ್ಲಿ ಸಂಪತ್ತಾಗಿ ಇಂಗ್ಲೀಷ್ ಆಕ್ರಮಿಸಿಕೊಳ್ಳುತ್ತಿದೆ. ನೆಲದ ಭಾಷೆಗೂ ಅಪಾರ ಪ್ರೀತಿಯನ್ನು ತೋರಬೇಕಾದುದು ನಮ್ಮ ಆದ್ಯ ಕರ್ತವ್ಯ ಎಂದರು.

ಮುಖ್ಯಅತಿಥಿ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಡಾ. ಮಾಧವ ಮೂಡುಕೋಣಾಜೆ ಮಾತನಾಡಿ, ಕನ್ನಡದ ಕುರಿತು ಯಾವತ್ತೂ ಕೀಳರಿಮೆ ಸಲ್ಲದು ಎಂದರು.

ಅಧ್ಯಕ್ಷತೆ ವಹಿಸಿದ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಸಿ.ಎ. ಶಿವಾನಂದ ಪೈ ಮಾತನಾಡಿ ಇಂತಹ ಭಾಷಾ ವಿಚಾರಗಳು ಮನೋವಿಕಾಸಕ್ಕೆ ಕಾರಣವಾಗುತ್ತವೆ. ನಾವೆಲ್ಲರೂ ಇಂತಹ ಕಾರ್ಯಕ್ರಮಗಳನ್ನು ತುಂಬಾ ಆಸ್ಥೆಯಿಂದ ಅನುಸರಿಸುವಂತಾಗಬೇಕು ಎಂದರು.

ಪ್ರಾಂಶುಪಾಲ ಡಾ. ಮಂಜುನಾಥ್ ಎ. ಕೋಟ್ಯಾನ್ ಕಾಲೇಜಿನ ಸಂಪನ್ಮೂಲತೆ ಮತ್ತು ಅದರ ಕೊಡುಗೆಯನ್ನು ಸ್ಮರಿಸಿದರು.

ನಮ ತುಳುವೆರ್ ಕಲಾ ಸಂಘಟನೆಯ ಸಾಂಸ್ಕೃತಿಕ ಕಾರ್ಯದರ್ಶಿ ಜಗದೀಶ ಜಾಲ ಸಂಸ್ಥೆಯ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮದ ಸಂಚಾಲಕ ಪ್ರೊ. ದತ್ತಾತ್ರೇಯ ಮಾರ್ಪಳ್ಳಿ ಸ್ವಾಗತಿಸಿ ಪ್ರಸ್ತಾಪಿಸಿದರು. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಸುಕುಮಾರ ಮುದ್ರಾಡಿ ವಂದಿಸಿದರು. ಶಿವಾನಿ ಭಟ್ ಮತ್ತು ಬಳಗ ಹಾಡಿದರು/ ಕನ್ನಡ ಉಪನ್ಯಾಸಕಿ ವನಿತಾ ಶೆಟ್ಟಿ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X