Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಿಟ್ ಕಾಯಿನ್ ಪ್ರಕರಣ:...

ಬಿಟ್ ಕಾಯಿನ್ ಪ್ರಕರಣ: ಕಾಂಗ್ರೆಸ್ಸಿನವರದು ಹುಳಿ ಹಿಂಡುವ ರಾಜಕಾರಣ ಎಂದ ಸಚಿವ ಸಿ.ಸಿ.ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ14 Nov 2021 5:30 PM IST
share
ಬಿಟ್ ಕಾಯಿನ್ ಪ್ರಕರಣ: ಕಾಂಗ್ರೆಸ್ಸಿನವರದು ಹುಳಿ ಹಿಂಡುವ ರಾಜಕಾರಣ ಎಂದ ಸಚಿವ ಸಿ.ಸಿ.ಪಾಟೀಲ್

ಬೆಂಗಳೂರು, ನ. 14: `ರಾಜ್ಯದಲ್ಲಿ ಯಾವುದೇ ಭ್ರಷ್ಟಾಚಾರಕ್ಕೆ ಆಸ್ಪದವಿಲ್ಲದಂತೆ ಜನಪರವಾದ ಆಡಳಿತವನ್ನು ನೀಡುತ್ತಾ ಈಗಾಗಲೇ ಯಶಸ್ವಿಯಾಗಿ ಶತದಿನಗಳನ್ನು ಪೂರೈಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆಡಳಿತದ ಕಾರ್ಯಸಾಧನೆಯನ್ನು ಕಂಡು ಹತಾಶರಾಗಿ ಕಾಂಗ್ರೆಸ್ ನಾಯಕರು `ಬಿಟ್ ಕಾಯಿನ್' ಹೆಸರಿನಲ್ಲಿ ವಿನಾಕಾರಣ ರಾಜ್ಯ ಸರಕಾರದ ಮೇಲೆ ಗೂಬೆ ಕೂರಿಸಲು ಹವಣಿಸುತ್ತಿದ್ದಾರೆ' ಎಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ಆರೋಪಿಸಿದ್ದಾರೆ.

ರವಿವಾರ ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಬಿಟ್ ಕಾಯಿನ್ ವಿಚಾರದಲ್ಲಿ ವಿವಾದ ಸೃಷ್ಟಿಸಿ ಅದರಿಂದ ರಾಜಕೀಯ ದುರ್ಲಾಭ ಪಡೆದುಕೊಳ್ಳಬಹುದು ಎಂಬ ಹಗಲುಗನಸು ಕಾಣುತ್ತಿರುವ ಕಾಂಗ್ರೆಸ್ ಮುಖಂಡರಿಗೆ, ಇದೇ ಬಿಟ್ ಕಾಯಿನ್ ತಿರುಗುಬಾಣವಾಗಿ ಮುಳುವಾಗಲಿದೆ ಎಂಬುದು ಮುಂದಿನ ದಿನಗಳಲ್ಲಿ ಸಾಬೀತಾಗುತ್ತದೆ ಎಂದು ಟೀಕಿಸಿದ್ದಾರೆ. `ಬಿಜೆಪಿ ನಾಯಕರೇ ತಮಗೆ ಬಿಟ್ ಕಾಯಿನ್ ಹಗರಣದ ಮಾಹಿತಿ ನೀಡುತ್ತಿದ್ದಾರೆಂದು ಕಾಂಗ್ರೆಸ್ಸಿನ ಮುಖಂಡರೊಬ್ಬರು ಹೇಳುವ ಮೂಲಕ ಈ ತನಿಖೆಯ ಹಾದಿ ತಪ್ಪಿಸಲು ಮತ್ತು ಬಿಜೆಪಿಯಲ್ಲಿ ಹುಳಿ ಹಿಂಡಿ ಒಡಕು ಸೃಷ್ಟಿಸಲು ಹವಣಿ ಸಿರುವುದು ಸ್ಪಷ್ಟವಾಗಿದೆ. ಆದರೆ, ಇಂತಹ ಹುನ್ನಾರಗಳ ಆಟ ನಡೆಯುವುದಿಲ್ಲ. ಬಿಜೆಪಿಯಲ್ಲಿ ಆಂತರಿಕ ಒಕ್ಕಟ್ಟು ಗಟ್ಟಿಯಾಗಿದೆ.  ಕಾಂಗ್ರೆಸ್ಸಿನ ಹಾಗೆ `ಒಂದು ಮನೆ ಹಲವು ಬಾಗಿಲು' ಎಂಬಂಥ ಪರಿಸ್ಥಿತಿ ನಮ್ಮಲ್ಲಿಲ್ಲ ಎಂದು ಸಿ.ಸಿ.ಪಾಟೀಲರು ಕಾಂಗ್ರೆಸ್ಸಿಗೆ ತಿರುಗೇಟು ನೀಡಿದ್ದಾರೆ.

`ಬಿಟ್ ಕಾಯಿನ್ ಹಗರಣ ಈಗಾಗಲೇ ಕೆಲವು ಕಾಂಗ್ರೆಸ್ ಮುಖಂಡರ ಕಾಲಿಗೆ ಸುತ್ತಿಕೊಂಡಿರುವುದು ಬಹಿರಂಗವಾಗಿದ್ದರೂ, ತಾವೇ ಸ್ವತಹ ಗಾಜಿನ ಮನೆಯಲ್ಲಿ ಕುಳಿತು ಕಲ್ಲು ಹೊಡೆಯುವ ದುಸ್ಸಾಹಸಕ್ಕೆ ಕಾಂಗ್ರೆಸ್ ಮುಖಂಡರು ಇಳಿಯುತ್ತಿರುವ ವರ್ತನೆ ನಿಜಕ್ಕೂ ವಿಚಿತ್ರವಾಗಿದೆ ಎಂದು ಅವರು ಟೀಕಿಸಿದ್ದಾರೆ.

ಬಿಟ್ ಕಾಯಿನ್ ಹಗರಣದ ಬಗ್ಗೆ ಸೂಕ್ತ ತನಿಖೆ ಮಾಡಿದ್ದು, ಈಡಿ ಹಾಗೂ ಸಿಬಿಐಗೆ ಶಿಫಾರಸು ಮಾಡಿದ್ದೆ ನಮ್ಮ ಸರಕಾರ. ಈ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಈಗಾಗಲೇ ಸ್ವತಃ ಮುಖ್ಯಮಂತ್ರಿ ಬೊಮ್ಮಾಯಿಯವರೇ ಸ್ಪಷ್ಟಪಡಿಸಿದ್ದಾರೆ. ಅದರಂತೆ ಈಗ ತನಿಖೆ ಸರಿಯಾದ ದಿಕ್ಕಿನಲ್ಲಿಯೇ ನಡೆಯುತ್ತಿರುವುದರಿಂದ ಯಾರೂ ಸ್ವ ಕಪೆÇೀಲಕಲ್ಪಿತವಾಗಿ ರಾಜಕೀಯ ಪ್ರೇರಿತ ಹೇಳಿಕೆ ನೀಡುವುದು ಸರಿಯಲ್ಲ ಎಂದು ಸಿ.ಸಿ.ಪಾಟೀಲ್ ಆಕ್ಷೇಪಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X