Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಿಜೆಪಿಯವರಿಗೆ ಭ್ರಷ್ಟಾಚಾರ ಎಂಬುದು ನೀರು...

ಬಿಜೆಪಿಯವರಿಗೆ ಭ್ರಷ್ಟಾಚಾರ ಎಂಬುದು ನೀರು ಕುಡಿದಷ್ಟು ಸಲೀಸಾಗಿದೆ: ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ14 Nov 2021 7:35 PM IST
share
ಬಿಜೆಪಿಯವರಿಗೆ ಭ್ರಷ್ಟಾಚಾರ ಎಂಬುದು ನೀರು ಕುಡಿದಷ್ಟು ಸಲೀಸಾಗಿದೆ: ಸಿದ್ದರಾಮಯ್ಯ

ಬೆಂಗಳೂರು: 'ಬಿಜೆಪಿಯವರಿಗೆ ಭ್ರಷ್ಟಾಚಾರ ಎಂಬುದು ನೀರು ಕುಡಿದಷ್ಟು ಸಲೀಸಾಗಿದೆ. ಅದು ಅವರ ರಾಜಕೀಯದ ಒಂದು ಭಾಗ. ಹಣ ಮತ್ತು ಅಧಿಕಾರ ಇದ್ದರೆ ಏನನ್ನು ಬೇಕಾದರೂ ಮಾಡಿ ಜಯಿಸಿಕೊಳ್ಳಬಹುದು ಎಂಬುದು ಅವರ ಧೋರಣೆ. ಇಂತಹ ಬಿಜೆಪಿಯನ್ನು 2023ರ ಚುನಾವಣೆಯಲ್ಲಿ ಅಧಿಕಾರದಿಂದ ಕಿತ್ತೊಗೆಬೇಕು. ದೇಶ, ಸಮಾಜ, ಪ್ರಜಾಪ್ರಭುತ್ವ, ಸಂವಿಧಾನದ ಉಳಿವಿಗಾಗಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು' ಎಂದು  ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.  

ರವಿವಾರ ಇಲ್ಲಿನ ಅರಮನೆ ಮೈದಾನದಲ್ಲಿ ಪಂಡಿತ್ ಜವಾಹರ ಲಾಲ್ ನೆಹರು ಅವರ ಜನ್ಮ ದಿನಾಚರಣೆ ಹಾಗೂ ಸದಸ್ಯತ್ವ ನೋಂದಣಿ ಅಭಿಯಾನದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, `ಕೋಮುವಾದಿ ಬಿಜೆಪಿಯಿಂದ ದೇಶದ ಒಗ್ಗಟ್ಟು, ಐಕ್ಯತೆಯನ್ನು ಉಳಿಸಲು ಸಾಧ್ಯವಿಲ್ಲ. ಹಾಗಾಗಿ ಕಾಂಗ್ರೆಸ್‍ಗೆ ಹೊಸ ರಕ್ತ ಬರಬೇಕು, ಹೊಸ ಚಿಂತನೆಗಳು ಬರಬೇಕು, ಬದ್ಧತೆ ಬರಬೇಕು ಇದಕ್ಕಾಗಿ ಹೊಸಬರನ್ನು ಪಕ್ಷಕ್ಕೆ ಸೇರಿಸಿ' ಎಂದು ಸಲಹೆ ನೀಡಿದರು.

`ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಮಹಿಳೆಯರು, ರೈತರು, ಕಾರ್ಮಿಕರು, ವಿದ್ಯಾರ್ಥಿಗಳು, ಯುವ ಜನರು ಹೆಚ್ಚಿನ ಪ್ರಮಾಣದಲ್ಲಿ ಕಾಂಗ್ರೆಸ್ ಸೇರಬೇಕು. ಜಾತಿ, ಧರ್ಮ, ಲಿಂಗ ತಾರತಮ್ಯ ಇಲ್ಲದೆ ದೇಶದ 136 ಕೋಟಿ ಜನರನ್ನು ಒಗ್ಗೂಡಿಸಿಕೊಂಡು ಹೋಗುವ ಏಕೈಕ ಪಕ್ಷ ಕಾಂಗ್ರೆಸ್. ನಮಗೆ ಡಾ.ಅಂಬೇಡ್ಕರ್ ಅವರು ನೀಡಿರುವ ಸಂವಿಧಾನದಲ್ಲಿ ಜಾತ್ಯತೀತ ರಾಷ್ಟ್ರ ನಿರ್ಮಾಣ ಮಾಡಬೇಕೆಂದಿದೆ, ಧರ್ಮಾಧಾರಿತ ರಾಷ್ಟ್ರವಲ್ಲ. ಬಿಜೆಪಿಯವರು ಹಿಂದೂ ರಾಷ್ಟ್ರ ನಿರ್ಮಾಣ ಮಾಡುತ್ತೇವೆ ಎನ್ನುತ್ತಾರೆ, ಬಿಜೆಪಿಯವರು ಮಾತ್ರ ಹಿಂದೂಗಳೇ? ನಾವ್ಯಾರು ಹಿಂದೂಗಳಲ್ಲವೇ? ಈ ದೇಶ ಯಾವುದೇ ಒಂದು ಭಾಷೆ, ಜಾತಿ, ಧರ್ಮದ ಜನರಿಂದ ಕೂಡಿಲ್ಲ, ನಮ್ಮದು ಬಹುತ್ವದ ದೇಶ. ಈ ಬಹುತ್ವ, ಏಕತೆಯನ್ನು ಉಳಿಸಿಕೊಂಡು ರಾಷ್ಟ್ರ ನಿರ್ಮಾಣ ಮಾಡಲು ಕಾಂಗ್ರೆಸ್ ನಿಂದ ಮಾತ್ರ ಸಾಧ್ಯ. ಕಾಂಗ್ರೆಸ್ ಪಕ್ಷದಲ್ಲಿದ್ದೇವೆ ಎಂದು ಪ್ರತಿಯೊಬ್ಬ ಕಾಂಗ್ರೆಸಿಗ ಹೆಮ್ಮೆಪಡಬೇಕು ಎಂದು ಸಿದ್ದರಾಮಯ್ಯ ತಿಳಿಸಿದರು.

`ನೆಹರು ಅವರ ಜನ್ಮದಿನವನ್ನು ಇಂದು ದೇಶಾದ್ಯಂತ ಮಕ್ಕಳ ದಿನಾಚರಣೆ ಆಗಿ ಆಚರಣೆ ಮಾಡುತ್ತಿದ್ದೇವೆ. ನೆಹರು ಅವರಿಗೆ ಮಕ್ಕಳ ಬಗ್ಗೆ ಅಪಾರವಾದ ಪ್ರೀತಿ ಇತ್ತು, ಮಕ್ಕಳು ಮತ್ತು ಯುವಕರಿಂದ ಮಾತ್ರ ದೇಶದ ಬದಲಾವಣೆ ಸಾಧ್ಯ ಎಂದು ಅವರು ಬಲವಾಗಿ ನಂಬಿದ್ದರು. ಇಂತಹಾ ಮಹಾನ್ ನಾಯಕನ ಜನ್ಮದಿನದ ಶುಭಾಶಯವನ್ನು ದೇಶದ ಜನರಿಗೆ ಕೋರಲು ಬಯಸುತ್ತೇನೆ ಹಾಗೂ ನಾಡಿನ ಮಕ್ಕಳ ಭವಿಷ್ಯ ಉಜ್ವಲವಾಗಲಿ ಎಂದು ಹಾರೈಸುತ್ತೇನೆ ಎಂದರು.

ನೆಹರು ಅವರು 17 ವರ್ಷಗಳ ಕಾಲ ದೇಶದ ಪ್ರಧಾನಿಯಾಗಿ ಅಧಿಕಾರದಲ್ಲಿದ್ದರು. ಈ ದೇಶ ಕಟ್ಟಲು ಅವರು ತ್ಯಾಗ ಬಲಿದಾನ ಮಾಡಿದ್ದಾರೆ. ಅವರು ಒಬ್ಬ ಮಹಾನ್ ಪ್ರಜಾಪ್ರಭುತ್ವವಾದಿಯಾಗಿದ್ದರು. ಇಂಥವರ ಹೆಸರಿಗೆ ಕಳಂಕ ತರಲು ಬಿಜೆಪಿ ಪಕ್ಷ ನಿರಂತರವಾಗಿ ಪ್ರಯತ್ನ ಮಾಡುತ್ತಿದೆ. ನೆಹರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಆಗತಾನೆ ವಾಜಪೇಯಿ ಅವರು ಲೋಕಸಭೆಗೆ ಪ್ರವೇಶ ಮಾಡಿದ್ದರು. ಒಮ್ಮೆ ನೆಹರು ಅವರು ವಾಜಪೇಯಿ ಅವರನ್ನು ಕುರಿತು ತಾವು ಮುಂದೆ ದೇಶದ ಪ್ರಧಾನಿಯಾಗುವ ಎಲ್ಲಾ ಲಕ್ಷಣ ಇದೆ ಎಂದಿದ್ದರು. ಹೀಗೆ ನೆಹರು ಅವರು ಪ್ರತಿಪಕ್ಷದವರನ್ನು ದ್ವೇಷಿಸುತ್ತಾ ಇರಲಿಲ್ಲ. ಲೋಹಿಯಾ ಅವರು ನೆಹರು ಅವರನ್ನು ಸಾಕಷ್ಟು ಟೀಕೆ ಮಾಡುತ್ತಿದ್ದರು. ಅವರ ಬಗ್ಗೆ ಪ್ರೀತಿ ವಿಶ್ವಾಸ ಇಟ್ಟಿದ್ದರು ಎಂದು ಅವರು ಸ್ಮರಿಸಿದರು.

ಮೌಢ್ಯ ಪ್ರತಿಪಾದಕ ಮೋದಿ: `ನೆಹರು ಅವರು ಲೋಕಸಭೆಯಲ್ಲಿ ವಿಪಕ್ಷದವರು ಮಾತನಾಡುವಾಗ ಸೌಮ್ಯವಾಗಿ ಕುಳಿತು ಕೇಳುತ್ತಿದ್ದರು. ಆದರೆ ಇಂದಿನ ಪ್ರಧಾನಿ ಲೋಕಸಭೆಗೆ ಬರುವುದೇ ಅಪರೂಪ, ಬಂದರೂ ಪ್ರಶ್ನೆಗಳಿಗೆ ಉತ್ತರ ನೀಡುವುದಿಲ್ಲ. ನೆಹರು ಒಬ್ಬ ಮಾದರಿ ಪ್ರಧಾನಿಯಾಗಿ ಆಡಳಿತ ನಡೆಸಿದರು. ದೇಶದಲ್ಲಿ ವೈಚಾರಿಕತೆ, ವಿಜ್ಞಾನದ ಬೆಳವಣಿಗೆಗೆ ಅವರು ಹೆಚ್ಚು ಮಹತ್ವ ನೀಡಿದ್ದರು. ಆದರೆ ಈಗಿನ ಪ್ರಧಾನಿ ಮೋದಿ ಅವರು ಜನರಲ್ಲಿ ಮೌಢ್ಯ ಬಿತ್ತುವ ಕೆಲಸ ಮಾಡುತ್ತಿದ್ದಾರೆ. ಕೊರೊನ ಓಡಿಸಲು ಚಪ್ಪಾಳೆ ತಟ್ಟಲು, ಶಂಖ, ಜಾಗಟೆ ಬಾರಿಸಲು, ದೀಪ ಹಚ್ಚಲು ಹೇಳಿದ ಮೋದಿ ಅವರೆಲ್ಲಿ, ವೈಜ್ಞಾನಿಕ ಭಾವನೆ ಹೊಂದಿದ್ದ ನೆಹರು ಅವರೆಲ್ಲಿ ಎಂಬುದನ್ನು ನಾವು ಅರ್ಥಮಾಡಿಕೊಳ್ಳಬೇಕು. ಮೋದಿ ಅವರಂಥ ಮೌಢ್ಯದ ಪ್ರತಿಪಾದಕ ಇನ್ನೊಬ್ಬ ಸಿಗುವುದಿಲ್ಲ' ಎಂದು ಸಿದ್ದರಾಮಯ್ಯ ಬಣ್ಣಿಸಿದರು.

`ದೇಶದ ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಲು ನೆಹರು ಅವರು ಕಾರಣ. ಇಂದು ದೇಶ ಆರ್ಥಿಕವಾಗಿ ದಿವಾಳಿ ಹಂತ ತಲುಪಿದೆ, ಹೀಗಿರುವಾಗ ಮೋದಿ ಅವರಿಗೆ ನೆಹರು ಅವರ ಬಗ್ಗೆ ಟೀಕೆ ಮಾಡುವ ಯಾವ ನೈತಿಕತೆ ಇದೆ? ನಾನು 1978ರಿಂದ ಸಕ್ರಿಯ ರಾಜಕಾರಣದಲ್ಲಿ ಇದ್ದೀನಿ, ನನ್ನ ರಾಜಕೀಯ ಜೀವನದಲ್ಲೇ ದೇಶವನ್ನು ಇಂತಹಾ ಆರ್ಥಿಕ ದುಸ್ಥಿತಿಗೆ ಕೊಂಡೊಯ್ದ ಹಾಗೂ ಇಷ್ಟು ಸುಳ್ಳು ಹೇಳುವ ಮಹಾನ್ ಸುಳ್ಳುಗಾರ ಪ್ರಧಾನಿಯನ್ನು ಕಂಡಿಲ್ಲ. ಮೊನ್ನೆ ಮನ್ ಕಿ ಬಾತ್ ನಲ್ಲಿ ಮೋದಿ ಅವರು ಪೆಟ್ರೋಲ್, ಡೀಸೆಲ್ ಹಾಗೂ ಗ್ಯಾಸ್ ಬೆಲೆ ಹೆಚ್ಚಾಗಲು ಕಾಂಗ್ರೆಸ್ ಸರಕಾರ ಮಾಡಿರುವ ಸಾಲ ಕಾರಣ ಎಂದು ಹಸಿ ಹಸಿ ಸುಳ್ಳು ಹೇಳಿದರು ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

`ಬೆಕ್ಕು ತಾನು ಕಣ್ಣು ಮುಚ್ಚಿಕೊಂಡು ಹಾಲು ಕುಡಿದರೆ, ಜಗತ್ತು ಕಣ್ಣುಮುಚ್ಚಿಕೊಂಡಿದೆ ಎಂದು ಭ್ರಮಿಸಿದಂತೆ ಮೋದಿಯವರು  ಭ್ರಮೆಯಲ್ಲಿ ಇದ್ದಾರೆ. ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಕೇಂದ್ರ ಸರಕಾರ ಅಬಕಾರಿ ತೆರಿಗೆಯನ್ನು ಹೆಚ್ಚು ಮಾಡಿರುವುದೇ ಇಂದಿನ ಪೆಟ್ರೋಲ್, ಡೀಸೆಲ್ ಬೆಲೆಯೇರಿಕೆಗೆ ಕಾರಣ ಎಂಬ ಸತ್ಯವನ್ನು ಜನ ಅರ್ಥಮಾಡಿಕೊಳ್ಳಬೇಕು. 7 ವರ್ಷಗಳಲ್ಲಿ ಕೇಂದ್ರ ಸರಕಾರ ಒಟ್ಟು 23 ಲಕ್ಷ ಕೋಟಿ ರೂಪಾಯಿಗಳನ್ನು ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ಅಬಕಾರಿ ಸುಂಕದ ರೂಪದಲ್ಲಿ ಸಂಗ್ರಹಿಸಿದೆ. ವಾಜಪೇಯಿ ಹಾಗೂ ಮನಮೋಹನ ಸಿಂಗ್ ಅವರ ಸರಕಾರ ಒಟ್ಟು ಖರೀದಿ ಮಾಡಿರುವ ತೈಲಬಾಂಡ್ ಮೌಲ್ಯ ಕೇವಲ 1.40 ಲಕ್ಷ ಕೋಟಿ ರೂಪಾಯಿ. ಮೋದಿ ಅವರು ದೇಶದ ಜನರ ಪೆದ್ದರು, ಅವರನ್ನು ಸುಲಭವಾಗಿ ದಾರಿತಪ್ಪಿಸಬಹುದು ಎಂದು ತಿಳಿದುಕೊಂಡಿದ್ದಾರೆ. ಆದರೆ ಜನ ದಡ್ಡರಲ್ಲ' ಎಂದು ಸಿದ್ದರಾಮಯ್ಯ ತಿರುಗೇಟು ನೀಡಿದರು.

`ದೇಶದ ಸ್ವಾತಂತ್ರ್ಯ, ಪ್ರಜಾಪ್ರಭುತ್ವ, ಸಂವಿಧಾನ ಉಳಿಸುವ ಜವಾಬ್ದಾರಿ ಕಾಂಗ್ರೆಸ್ ಪಕ್ಷದ ಮೇಲಿದೆ, ಕಾರಣ ದೇಶಕ್ಕೆ ಸಂವಿಧಾನ ಕೊಟ್ಟಿದ್ದು, ಹೋರಾಟದ ಮೂಲಕ ಸ್ವಾತಂತ್ರ್ಯ ತಂದುಕೊಟ್ಟಿದ್ದು ಕಾಂಗ್ರೆಸ್ ಪಕ್ಷ. ಬಿಜೆಪಿಗೆ ದೇಶವನ್ನು ಹಾಳು ಮಾಡಲು ಮಾತ್ರ ಗೊತ್ತು. ದೇಶ, ಸಂವಿಧಾನ, ಪ್ರಜಾತಂತ್ರ ವ್ಯವಸ್ಥೆ ಉಳಿಯಬೇಕಾದರೆ ಕಾಂಗ್ರೆಸ್ ಪಕ್ಷ ಉಳಿಯಬೇಕು. ಪಕ್ಷವನ್ನು ಉಳಿಸಿ, ಬೆಳೆಸುವ ಕೆಲಸ ಪ್ರತಿಯೊಬ್ಬ ಕಾಂಗ್ರೆಸಿಗನ ಕರ್ತವ್ಯ. ದೇಶವಿಂದು ವಿಜ್ಞಾನ, ತಂತ್ರಜ್ಞಾನ, ಕೈಗಾರಿಕೆ, ನೀರಾವರಿ ಕ್ಷೇತ್ರಗಳಲ್ಲಿ ಬೆಳೆದಿದ್ದರೆ ಅದಕ್ಕೆ ನೆಹರು ಅವರು ಹಾಕಿಕೊಟ್ಟ ಭದ್ರ ಬುನಾದಿ ಕಾರಣ. ಇಂದು ನೆಹರು ಅವರ ಜನ್ಮದಿನವನ್ನು ಆಚರಿಸುವ ನಿಜವಾದ ಉದ್ದೇಶವೆಂದರೆ ಅವರು ತೋರಿದ ಹಾದಿಯಲ್ಲಿ ಸಾಗುವುದು, ಅವರ ತ್ಯಾಗ, ಬಲಿದಾನ, ಆದರ್ಶಗಳನ್ನು ನೆನೆದು ಅವರಂತೆ ನಾವಾಗಬೇಕು ಎಂಬುದನ್ನು ಅರ್ಥಮಾಡಿಕೊಳ್ಳುವುದು. ಇದು ಅವರಿಗೆ ಸಲ್ಲಿಸುವ ನಿಜವಾದ ಗೌರವ' ಎಂದು ಸಿದ್ದರಾಮಯ್ಯ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X