ಉಡುಪಿ ಜಿಲ್ಲೆಯಾದ್ಯಂತ ಭಾರೀ ಮಳೆ

ಉಡುಪಿ, ನ.14: ಹವಾಮಾನ ವೈಫರೀತ್ಯದಿಂದ ಕಳೆದ ರಾತ್ರಿಯಿಂದ ಉಡುಪಿ ಜಿಲ್ಲೆಯ ಹಲವೆಡೆ ಭಾರೀ ಮಳೆಯಾಗಿರುವ ಬಗ್ಗೆ ವರದಿಯಾಗಿದೆ.
ಉಡುಪಿ ನಗರ ಸೇರಿದಂತೆ ಹಲವು ಕಡೆಗಳಲ್ಲಿ ಬೆಳಗ್ಗೆಯಿಂದ ಮೋಡ ಕವಿದ ವಾತಾವರಣ ಕಂಡುಬಂದಿದ್ದು, ಮಧ್ಯಾಹ್ನ ವೇಳೆ ಮಳೆಯಾಗಿದೆ. ಆದರೆ ಕಾರ್ಕಳ, ಬ್ರಹ್ಮಾವರ ಸೇರಿದಂತೆ ಕೆಲವು ಕಡೆಗಳಲ್ಲಿ ಸಂಜೆ ಬಳಿಕ ಭಾರೀ ಮಳೆ ಯಾಗಿದೆ.
ಅಕಾಳಿಕವಾಗಿ ಸುರಿದ ಮಳೆಯಿಂದ ಕಾರ್ಕಳದ ಕೆಲವು ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ಕಾರ್ಕಳ ಶ್ರೀಅನಂತಪದ್ಮನಾಭ ದೇವಸ್ಥಾನದ ಹೊರಾಂಗಣಕ್ಕೆ ನೀರು ನುಗ್ಗಿದೆ. ಅಲ್ಲದೆ ಜಿಲ್ಲೆಯ ಕೆಲವೆಡೆ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗಿದ್ದು, ಕಟಾವು ಮಾಡಿ ಮನೆಯ ಅಂಗಳದಲ್ಲಿ ರಾಶಿ ಹಾಕಿದ್ದ ಭತ್ತಕ್ಕೆ ಹಾನಿಯಾಗಿದೆ. ಇದರಿಂದ ಕೃಷಿಕರು ತೀವ್ರ ತೊಂದರೆ ಅನುಭವಿಸುವಂತಾಗಿದೆ.
Next Story





