ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಬೆಂಗಳೂರಿಗೆ ಆಗಮನ

ಬೆಂಗಳೂರು, ನ. 14: ಭಾರತದ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರು ನಾಲ್ಕು ದಿನಗಳ ಭೇಟಿಗಾಗಿ ರವಿವಾರ ಹೊಸದಿಲ್ಲಿಯಿಂದ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಆಗಮಿಸಿದರು.
ರವಿವಾರ ಸಂಜೆ 6.25ರ ಸುಮಾರಿಗೆ ಬೆಂಗಳೂರಿನ ಎಚ್.ಎ.ಎಲ್. ವಿಮಾನ ನಿಲ್ದಾಣಕ್ಕೆ ಬಂದಿಳಿದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್, ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ.ಮಂಜುನಾಥ್ ಅವರು ಆತ್ಮೀಯವಾಗಿ ಬರಮಾಡಿಕೊಂಡರು.
Next Story





