Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸುಭದ್ರ ರಾಷ್ಟ್ರ ನಿರ್ಮಾಣಕ್ಕೆ ಸಮರ್ಥ...

ಸುಭದ್ರ ರಾಷ್ಟ್ರ ನಿರ್ಮಾಣಕ್ಕೆ ಸಮರ್ಥ ಕೇಂದ್ರ ಮತ್ತು ರಾಜ್ಯಗಳು ಅಗತ್ಯ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ14 Nov 2021 9:24 PM IST
share
ಸುಭದ್ರ ರಾಷ್ಟ್ರ ನಿರ್ಮಾಣಕ್ಕೆ ಸಮರ್ಥ ಕೇಂದ್ರ ಮತ್ತು ರಾಜ್ಯಗಳು ಅಗತ್ಯ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು/ತಿರುಪತಿ, ನ. 14: `ಸುಭದ್ರ ರಾಷ್ಟ್ರ ನಿರ್ಮಾಣಕ್ಕೆ ಸಮರ್ಥ ಕೇಂದ್ರ ಮತ್ತು ರಾಜ್ಯಗಳ ಅಗತ್ಯವಿದೆ. ನಾವು ಪರಸ್ಪರ ಸಹಕಾರದೊಂದಿಗೆ ಕೆಲಸ ಮಾಡಿದರೆ ಹಲವು ವರ್ಷಗಳಿಂದ ಬಾಕಿ ಉಳಿದಿರುವ ಹಲವಾರು ಸಮಸ್ಯೆಗಳನ್ನು ಬಗೆ ಹರಿಸಿಕೊಳ್ಳಬಹುದು' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ರವಿವಾರ ಆಂಧ್ರ ಪ್ರದೇಶದ ತಿರುಪತಿಯಲ್ಲಿ ನಡೆದ ದಕ್ಷಿಣ ವಲಯ ಪರಿಷತ್ತಿನ 29ನೆ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, `ದಕ್ಷಿಣ ಭಾರತದ ರಾಜ್ಯಗಳೆಲ್ಲವೂ ಪ್ರಾಕೃತಿಕವಾಗಿ ಸಂಪರ್ಕಿತವಾಗಿರುವುದರಿಂದ ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡುವುದು ಅನಿವಾರ್ಯ. ದಕ್ಷಿಣದ ರಾಜ್ಯಗಳು ಸ್ವತಂತ್ರವಾಗಿ ಅಲ್ಲದೆ, ಪರಸ್ಪರ ಅವಲಂಬಿತರಾಗಿ ಕಾರ್ಯನಿರ್ವಹಿಸಬೇಕಾದ ಪರಿಸ್ಥಿತಿ ಪರಿಸ್ಥಿತಿ ಇದೆ. ರಾಷ್ಟ್ರದ ಒಳಿತಿಗಾಗಿ ಒಮ್ಮತದಿಂದ ಕೆಲಸ ಮಾಡಿದಾಗ ಭಾರತದ ಅಭಿವೃದ್ಧಿ ಸಾಧ್ಯ ಎಂದು ಅಭಿಪ್ರಾಯಪಟ್ಟರು.

`ಪ್ರಧಾನ ಮಂತ್ರಿಗಳ ಸಹಕಾರಿ ಸಂಯುಕ್ತ ತತ್ವ ನಮ್ಮ ಮೂಲಮಂತ್ರವಾಗಬೇಕು. ಒಟ್ಟಾಗಿ ಕೆಲಸ ಮಾಡುವ ಮೂಲಕ ಇದನ್ನು ಸಂಪೂರ್ಣವಾಗಿ ಅನುಷ್ಠಾನಕ್ಕೆ ತರುವ ಹೊಣೆ ನಮ್ಮೆಲ್ಲರ ಮೇಲಿದೆ. ದಕ್ಷಿಣ ವಲಯ ಪರಿಷತ್ತು ಸಭೆಗಳು ನೀರು ಹಂಚಿಕೆ, ಸಾರಿಗೆ ಸಂಪರ್ಕ, ಆರೋಗ್ಯ ಮತ್ತು ವ್ಯವಹಾರಗಳನ್ನು ಒಮ್ಮತದಿಂದ ಬಗೆಹರಿಸಿಕೊಳ್ಳು ಉತ್ತಮ ವೇದಿಕೆಯಾಗಿದೆ. ದಕ್ಷಿಣದ ರಾಜ್ಯಗಳು ಎಲ್ಲ ವಲಯಗಳಲ್ಲಿಯೂ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವುದು ಹೆಮ್ಮೆಯ ಸಂಗತಿ ಎಂದು ತಿಳಿಸಿದರು.

ಗೋದಾವರಿ, ಕಾವೇರಿ ಮತ್ತು ಇತರೆ ನದಿಗಳ ಲಿಂಕ್ ಯೋಜನೆ ಬಗ್ಗೆ ರಾಜ್ಯ ತನ್ನ ಅಭಿಪ್ರಾಯವನ್ನು ಈಗಾಗಲೇ ರಾಷ್ಟ್ರೀಯ ಜಲ ಅಭಿವೃದ್ಧಿ ಸಂಸ್ಥೆಗೆ ತಿಳಿಸಿದೆ.  ಕಾವೇರಿ, ಕೃಷ್ಣಾ ಮತ್ತು ಪೆನ್ನಾರ್ ಜಲಾನಯನ ಪ್ರದೇಶದಲ್ಲಿ ರಾಜ್ಯಕ್ಕೆ ತನ್ನ ಪಾಲಿನ ನೀರು ಹಂಚಿಕೆಯಾಗಬೇಕು. ಸಹ ಜಲಾನಯನ ಪ್ರದೇಶಗಳನ್ನು ಹೊಂದಿರುವ ರಾಜ್ಯಗಳ ಪಾಲನ್ನು ನಿರ್ಧರಿಸಲಾಗಿಲ್ಲದಿದ್ದರೂ ತಮಿಳುನಾಡು ಕಾವೇರಿ-ವಗೈ-ಗುಂಡಾರ್ ಸಂಪರ್ಕ ಕಾಮಗಾರಿಯನ್ನು ಮುಂದುವರೆಸಿದೆ. ಇದಕ್ಕೆ ಕಾನೂನಿನಲ್ಲಿ ಅವಕಾಶವಿರುವುದಿಲ್ಲ. ಆದುದರಿಂದ ಕಾವೇರಿ- ವಗೈ- ಗುಂಡಾರ್ ಸಂಪರ್ಕದ ಪ್ರಸ್ತಾವನೆಯನ್ನು ಅನುಮೋದಿಸಬಾರದು ಎಂದು ಕೇಂದ್ರ ಸರಕಾರಕ್ಕೆ  ಬೊಮ್ಮಾಯಿ ಮನವಿ ಮಾಡಿದರು.

ಜಲ ನ್ಯಾಯ ಮಂಡಳಿ ತೀರ್ಪನ್ನು ಉಲ್ಲಂಘಿಸಿ ಹೆಚ್ಚುವರಿ ನೀರಿನ ಬಳಕೆಗೆ ಯೋಜಿಸಿರುವ ಬೃಹತ್ ಮಟ್ಟದ ಶಾಶ್ವತ ಯೋಜನೆಗಳಿಗೆ ಶಾಸನಬದ್ಧ ಅನುಮೋದನೆಯನ್ನು ನೀಡಬಾರದು. ಕೃಷ್ಣಾ ಜಲಾಶಯದ ಮೂಲಕ ಶ್ರೀಶೈಲಂ ಜಲಾಶಯದಲ್ಲಿ ಅಪಾರ ಮೊತ್ತದ ಹೆಚ್ಚುವರಿ ನೀರನ್ನು ಬಳಸಿಕೊಂಡು ಪಲಮುರು ರಂಗಾರೆಡ್ಡಿ ಮತ್ತು ನಕ್ಕಲಗಂಡಿಯಲ್ಲಿ ಏತನೀರಾವರಿ ಯೋಜನೆಗಳನ್ನು ಕೈಗೊಳ್ಳಲು ತೆಲಂಗಾಣ ಅಥವಾ ಅಪೆಕ್ಸ್ ಮಂಡಳಿಗೆ ಅಧಿಕಾರವಿಲ್ಲ ಎಂದು ಅವರು ತಿಳಿಸಿದರು.

2050ರಲ್ಲಿ ಪರಿಶೀಲನೆಗೆ ಒಳಪಡುವ ನೆಪದಲ್ಲಿ ಉಳಿಕೆ ನೀರನ್ನು ಬಳಸುವ ತೆಲಂಗಾಣ ರಾಜ್ಯದ ರಾಜೀವ್ ಗಾಂಧಿ ಸಂಗಮ ಬಂಡಾ ಬ್ಯಾರೇಜ್ ನಿರ್ಮಾಣಕ್ಕೆ  ಕರ್ನಾಟಕದ ವಿರೋಧವಿದೆ. ಶಾಶ್ವತ ಯೋಜನೆಗಳಿಂದಾಗಿ ಉಳಿಕೆ ನೀರನ್ನು ಬಳಸಲು ಅನುಮತಿ ನೀಡಿದರೆ ಕರ್ನಾಟಕ ತನಗೆ ದೊರೆಯಬೇಕಾದ ಸಮಪಾಲಿನಿಂದ ವಂಚಿತವಾಗಲಿದೆ. ಈ ಬಗ್ಗೆ ಜಂಟಿ ಸಮೀಕ್ಷೆಯಲ್ಲಿ ರಾಜ್ಯ ಕೈಜೋಡಿಸಲು ಸಿದ್ಧವಿದೆ ಎಂದು ಸ್ಪಷ್ಟಪಡಿಸಿದರು.

ಹಂಚಿಕೆಯ ಹೊರತಾಗಿ ಕೃಷ್ಣಾ ನೀರಿಗೆ ಸಂಬಂಧಿಸಿದಂತೆ ಆಂಧ್ರ ಹಾಗೂ ತೆಲಂಗಾಣ ರಾಜ್ಯಗಳ ಯಾವುದೇ ಯೋಜನೆಗಳಿಗೆ ಅನುಮತಿಯಿಲ್ಲ. ಕರ್ನಾಟಕ ಹಾಗೂ ನೆರೆರಾಜ್ಯಗಳ ನಡುವೆ ಅಂತರ ರಾಜ್ಯ ಪರಸ್ಪರ ಸಾರಿಗೆ ಒಪ್ಪಂದಕ್ಕೆ ಸಂಬಂಧಿಸಿದಂತೆ ತೆಲಂಗಾಣ, ಪುದುಚೆರಿ, ತಮಿಳುನಾಡು, ಆಂಧ್ರಪ್ರದೇಶ ಮತ್ತು ಕೇರಳ ರಾಜ್ಯಗಳ ಒಪ್ಪಿಗೆಯನ್ನು ನಿರೀಕ್ಷಿಸಲಾಗಿದ್ದು, ಈ ಬಗ್ಗೆ ತ್ವರಿತ ಕ್ರಮಕ್ಕೆ ಮನವಿ ಮಾಡಿದರು. ಅಂತರರಾಜ್ಯ ಗೃಹ ಇಲಾಖೆಗಳ ಸಮನ್ವಯ ಹಲವು ಅಪರಾಧಗಳನ್ನು ತಡೆಗಟ್ಟಲು ಅಗತ್ಯವಾಗಿದೆ. ಗಡಿಗಳಲ್ಲಿ ಸಂಪರ್ಕಜಾಲಗಳನ್ನು ಬಲಪಡಿಸಲು ಕೋರಿದರು.

ಸಭೆ ಅಧ್ಯಕ್ಷತೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ವಹಿಸಿದ್ದರು. ಸರಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ, ಜಲ ಸಂಪನ್ಮೂಲ ಇಲಾಖೆ ಎಸಿಎಸ್ ರಾಕೇಶ್ ಸಿಂಗ್, ಸಿಎಂ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್, ಗುಪ್ತಚರ ವಿಭಾಗದ ಎಡಿಜಿಪಿ ದಯಾನಂದ ಸಭೆಯಲ್ಲಿ ಉಪಸ್ಥಿತರಿದ್ದರು. ಆಂಧ್ರ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ, ಲಕ್ಷ್ಯದ್ವೀಪದ ಆಡಳಿತಗಾರ ಪ್ರಫುಲ್ ಪಟೇಲ್, ಪುದುಚೆರಿ ಲೆಫ್ಟಿನೆಂಟ್ ಗವರ್ನರ್ ಡಾ.ತಮಿಲಿಸಾಯಿ ಸೌಂದರಾಜನ್, ಪಾಂಡಿಚೇರಿಯ ಮುಖ್ಯಮಂತ್ರಿ ಎನ್.ರಂಗಸ್ವಾಮಿ, ಪಾಂಡಿಚೇರಿಯ ಲೆಫ್ಟನೆಂಟ್ ಗವರ್ನರ್ ಎಡ್ಮಿರಲ್ ಡಿ.ಕೆ. ಜೋಶಿ ಸಭೆಯಲ್ಲಿ ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X