ಬಿಟ್ ಕಾಯಿನ್ ಪ್ರಕರಣ: ಬಿಜೆಪಿ ರಾಜ್ಯಾಧ್ಯಕ್ಷರ ಮೌನ ಆಶ್ಚರ್ಯ; ಶಾಸಕ ಪ್ರಿಯಾಂಕ್ ಖರ್ಗೆ

ಬೆಂಗಳೂರು, ನ.15: ಬಿಟ್ ಕಾಯಿನ್ ವಿಚಾರದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರು ಮೌನವಾಗಿರುವುದನ್ನು ನೋಡಿ ನನಗೆ ಆಶ್ಚರ್ಯವಾಗಿದೆ ಎಂದು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಆಡಳಿತ ಪಕ್ಷದ ಅಧ್ಯಕ್ಷರಾಗಿ ಅವರಿಗೆ ಬಿಟ್ ಕಾಯಿನ್ ವಿಚಾರದಲ್ಲಿ ಸಾಕಷ್ಟು ಮಾಹಿತಿ ಇರುತ್ತದೆ ಎಂದು ನನಗೆ ಖಾತ್ರಿಯಿದೆ. ಅವರು ತಮ್ಮ ಮೌನ ಮುರಿಯಬೇಕು. ಇಲ್ಲವಾದಲ್ಲಿ ಅವರ ನಿಗೂಢ ಮೌನದ ಬಗ್ಗೆ ಜನರು ತಪ್ಪು ತಿಳಿಯಬಹುದು ಎಂದು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಟ್ವೀಟ್ ತಿಳಿಸಿದ್ದಾರೆ.
ಬಿಟ್‌ಕಾಯಿನ್ ವಿಚಾರದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷರು ಮೌನವಾಗಿರುವುದನ್ನು ನೋಡಿ ನನಗೆ ಆಶ್ಚರ್ಯವಾಗಿದೆ!
— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) November 15, 2021
ಆಡಳಿತ ಪಕ್ಷದ ಅಧ್ಯಕ್ಷರಾಗಿ ಅವರಿಗೆ ಬಿಟ್ ಕಾಯಿನ್ ವಿಚಾರದಲ್ಲಿ ಸಾಕಷ್ಟು ಮಾಹಿತಿ ಇರುತ್ತದೆ ಎಂದು ನನಗೆ ಖಾತ್ರಿಯಿದೆ. ಅವರು ತಮ್ಮ ಮೌನ ಮುರಿಯಬೇಕು ಇಲ್ಲವಾದಲ್ಲಿ ಅವರ 'ನಿಗೂಢ ಮೌನ'ದ ಬಗ್ಗೆ ಜನರು ತಪ್ಪು ತಿಳಿಯಬಹುದು.
Next Story







