Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಗೋಹತ್ಯೆ ನಿಷೇಧ ಕಾಯ್ದೆ: ಡಿ.16ಕ್ಕೆ...

ಗೋಹತ್ಯೆ ನಿಷೇಧ ಕಾಯ್ದೆ: ಡಿ.16ಕ್ಕೆ ಅಂತಿಮ ವಿಚಾರಣೆ

ವಾರ್ತಾಭಾರತಿವಾರ್ತಾಭಾರತಿ15 Nov 2021 10:34 PM IST
share
ಗೋಹತ್ಯೆ ನಿಷೇಧ ಕಾಯ್ದೆ: ಡಿ.16ಕ್ಕೆ ಅಂತಿಮ ವಿಚಾರಣೆ

ಬೆಂಗಳೂರು, ನ.15: ಸರಕಾರ ಜಾರಿಗೆ ತಂದಿರುವ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣ ಕಾಯ್ದೆ-2020ರ ಸಿಂಧುತ್ವ ಪ್ರಶ್ನಿಸಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ಅಂತಿಮ ವಿಚಾರಣೆಯನ್ನು ಹೈಕೋರ್ಟ್ ಡಿ.16ಕ್ಕೆ ನಿಗದಿಪಡಿಸಲಾಗಿದೆ.

ಕಾಯ್ದೆಯನ್ನು ಪ್ರಶ್ನಿಸಿ ಬೆಂಗಳೂರಿನ ಸಾಮಾಜಿಕ ಕಾರ್ಯಕರ್ತ ಆರೀಫ್ ಜಮೀಲ್, ಕಸಾಯಿ ಖಾನೆ ಮಾಲಕರು ಮತ್ತು ಗೋಮಾಂಸ ಮಾರಾಟಗಾರರು ಸಲ್ಲಿಸಿರುವ ಪ್ರತ್ಯೇಕ ಅರ್ಜಿಗಳ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠವು ಸೋಮವಾರ ನಡೆಸಿತು.

ಅರ್ಜಿದಾರರೊಬ್ಬರ ಪರ ಹಾಜರಿದ್ದ ಮಾಜಿ ಅಡ್ವೊಕೇಟ್ ಜನರಲ್, ಹಿರಿಯ ವಕೀಲ ಪ್ರೊ.ರವಿವರ್ಮ ಕುಮಾರ್ ಅವರು, ಸೆಪ್ಟೆಂಬರ್ 8ರಂದು ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್, ಅಂತಿಮ ವಿಚಾರಣೆಗೆ ದಿನಾಂಕ ನಿಗದಿಪಡಿಸಲು ಸೋಮವಾರ ಪ್ರಕರಣವನ್ನು ಪಟ್ಟಿ ಮಾಡಿತ್ತು. ನ್ಯಾಯಾಲಯ ಅವಕಾಶ ನೀಡಿದರೆ, ಇಂದೇ ವಾದ ಮಂಡಿಸಲು ಸಿದ್ಧವಿದ್ದೇನೆ ಎಂದು ತಿಳಿಸಿದರು.

ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ ಅವರು, ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಹಾಗೂ ಗುಜರಾತ್ ಹೈಕೋರ್ಟ್‍ಗಳೂ ತೀರ್ಪು ನೀಡಿವೆ. ಜತೆಗೆ, ಪ್ರಕರಣದಲ್ಲಿ ಕಾಯಿದೆಯನ್ನು ಬೆಂಬಲಿಸಿ ಕೆಲ ಸಂಸ್ಥೆಗಳು ಮಧ್ಯಂತರ ಅರ್ಜಿ ಸಲ್ಲಿಸಿವೆ. ಈ ಎಲ್ಲ ಅರ್ಜಿಗಳನ್ನು ಒಟ್ಟಾಗಿ ವಿಚಾರಣೆ ನಡೆಸಬಹುದಾಗಿದೆ ಎಂದರು.

ಬಾಂಬೆ ಹೈಕೋರ್ಟ್ ಹಾಗೂ ಗುಜರಾತ್ ತೀರ್ಪುಗಳ ಬಗ್ಗೆ ಸರಕಾರ ಹೇಳುತ್ತಿದೆ. ಆದರೆ, ಈ ವಿಚಾರದಲ್ಲಿ ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನ ಆಧಾರದ ಮೇಲೆ ನಾವು ವಾದ ಮಂಡಿಸಲಿದ್ದೇವೆ. ಅರ್ಜಿ ವಿಚಾರಣೆಗೆ ಯಾವುದಾದರೂ ಹತ್ತಿರದ ದಿನಾಂಕ ನಿಗದಿಪಡಿಸಬೇಕೆಂದು ರವಿವರ್ಮ ಕುಮಾರ್ ಮನವಿ ಮಾಡಿದರು.

ನಾವದಗಿ ಅವರು, ಜಾತಿ ಆಧಾರಿತ ನಿಗಮ-ಮಂಡಳಿ ರಚನೆ, ಆನ್‍ಲೈನ್ ಜೂಜಾಟ ನಿಷೇಧ ಪ್ರಶ್ನಿಸಿದ ಅರ್ಜಿಗಳೂ ಇದೇ ನ್ಯಾಯಾಲಯದ ಮುಂದಿದೆ. ಈ ಎಲ್ಲ ಪ್ರಕರಣಗಳು ಹೆಚ್ಚು ಸಮಯ ತೆಗೆದುಕೊಳ್ಳಲಿದ್ದು, ಅವುಗಳಿಗೆ ಸಿದ್ಧತೆ ನಡೆಸಿಕೊಳ್ಳಬೇಕಿದೆ. ಜತೆಗೆ, ಸುಪ್ರೀಂ ಕೋರ್ಟ್‍ನಲ್ಲೂ ಕೆಲ ಪ್ರಮುಖ ಪ್ರಕರಣಗಳಿವೆ. ಹತ್ತಿರದ ದಿನಾಂಕ ನಿಗದಿಪಡಿಸಿದರೆ ನನಗೆ ಕೊಂಚ ಕಷ್ಟವಾಗಲಿದೆ. ಹೀಗಾಗಿ, ಜನವರಿ ಮೊದಲ ವಾರದ ನಂತರ ಅರ್ಜಿ ವಿಚಾರಣೆಗೆ ನಿಗದಿಪಡಿಸಬೇಕು ಎಂದು ಕೋರಿದರು.

ಜನವರಿ ಎಂದರೆ ಬಹಳ ವಿಳಂಬವಾಗುತ್ತದೆ. ಅರ್ಜಿ ಸಂಬಂಧ ನ್ಯಾಯಾಲಯ ಯಾವುದೇ ಮಧ್ಯಂತರ ಆದೇಶಗಳನ್ನೂ ನೀಡಿಲ್ಲ. ಹೀಗಾಗಿ, ಆದಷ್ಟೂ ಶೀಘ್ರ ಅರ್ಜಿ ವಿಚಾರಣೆ ನಡೆಸಿ, ಇತ್ಯರ್ಥಪಡಿಸಬೇಕಿದೆ. ನಾವೇ ಮೊದಲು ವಾದ ಮಂಡಿಸಲು ಸಿದ್ಧರಿದ್ದೇವೆ ಎಂದು ರವಿವರ್ಮ ಕುಮಾರ್ ತಿಳಿಸಿದರು.

ಇದನ್ನು ಪರಿಗಣಿಸಿದ ಪೀಠವು ಡಿಸೆಂಬರ್ ಮೂರನೆ ವಾರದಲ್ಲಿ ಅರ್ಜಿ ವಿಚಾರಣೆಗೆ ನಿಗದಿಪಡಿಸಲಾಗುವುದು. ಒಂದು ವೇಳೆ ಅಡ್ವೊಕೇಟ್ ಜನರಲ್‍ಗೆ ವಾದ ಮಂಡಿಸಲು ಸಾಧ್ಯವಾಗದಿದ್ದರೆ ಆಗ ನೋಡೋಣ. ಮೊದಲು ಅರ್ಜಿದಾರರೇ ವಾದ ಮಂಡನೆ ಆರಂಭಿಸಲಿ. ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ಅರ್ಜಿಗಳು ಹಾಗೂ ಮಧ್ಯಂತರ ಅರ್ಜಿಗಳನ್ನೂ ಆಲಿಸುವುದಾಗಿ ತಿಳಿಸಿ, ವಿಚಾರಣೆಯನ್ನು ಡಿಸೆಂಬರ್ 16ಕ್ಕೆ ಮುಂದೂಡಿತು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X