ಚಿಕ್ಕಮಗಳೂರು: ಸಿಡಿಲು ಬಡಿದು ಟ್ರ್ಯಾಕ್ಟರ್, 15 ಮೂಟೆ ಅಡಿಕೆ ಬೆಂಕಿಗಾಹುತಿ

ಚಿಕ್ಕಮಗಳೂರು, ನ.15: ಸಿಡಿಲು ಬಡಿದು ಟ್ಯಾಕ್ಟರ್ ಶೆಡ್‍ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಟ್ರ್ಯಾಕ್ಟರ್ ಸೇರಿದಂತೆ ಅಡಿಕೆ ಬೆಳೆ ಸಂಪೂರ್ಣವಾಗಿ ಸುಟ್ಟು ಕರಕಲಾಗಿರುವ ಘಟನೆ ತರೀಕೆರೆ ತಾಲೂಕಿನ ವಿಠಲಾಪುರ ಗ್ರಾಮದಲ್ಲಿ ವರದಿಯಾಗಿದೆ.
ರವಿವಾರ ರಾತ್ರಿ ತರೀಕೆರೆ ತಾಲೂಕಿನಾದ್ಯಂತ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗಿದ್ದು, ಈ ವೇಳೆ ಸಿಡಿಲ ಆರ್ಭಟಕ್ಕೆ ವಿಠಲಾಪುರ ಗ್ರಾಮದ ಕರುಣಾ ಎಂಬವರ ಜಮೀನಿನಲ್ಲಿದ್ದ ಟ್ರ್ಯಾಕ್ಟರ್‍ನ ಶೆಡ್‍ಗೆ ಸಿಡಿಲು ಬಡಿದು ಬೆಂಕಿ ಹೊತ್ತಿಕೊಂಡಿದೆ. ಪರಿಣಾಮ ಶೆಡ್‍ನಲ್ಲಿ ನಿಲ್ಲಿಸಿದ್ದ ಟ್ರ್ಯಾಕ್ಟರ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಅಲ್ಲದೇ ಶೆಡ್‍ನಲ್ಲಿ ಸಂಗ್ರಹಿಸಿಟ್ಟಿದ್ದ 15 ಕ್ವಿಂಟಾಲ್ ಅಡಿಕೆ ಮೂಟೆಗಳು ಹಾಗೂ ಅಡಿಕೆ ಸುಲಿಯುವ ಯಂತ್ರ ಬೆಂಕಿಗೆ ಆಹುತಿಯಾಗಿದೆ ಎಂದು ತಿಳಿದು ಬಂದಿದ್ದು, ಅಂದಾಜು ಸುಮಾರು 25 ಲಕ್ಷ ರೂ. ಮೌಲ್ಯದ ಸ್ವತ್ತು ಬೆಂಕಿಯ ಕೆನ್ನಾಲಿಗೆಗೆ ತುತ್ತಾಗಿದೆ ಎಂದು ತಿಳಿದು ಬಂದಿದೆ.
Next Story





