Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜ.30ರ ಒಳಗಾಗಿ ದೇವಸ್ಥಾನಗಳ ಆಡಿಟ್...

ಜ.30ರ ಒಳಗಾಗಿ ದೇವಸ್ಥಾನಗಳ ಆಡಿಟ್ ರಿಪೋರ್ಟ್ ಸಲ್ಲಿಸುವಂತೆ ಅಧಿಕಾರಿಗಳಿಗೆ ಸಚಿವೆ ಶಶಿಕಲಾ ಜೊಲ್ಲೆ ತಾಕೀತು

''ಮುಜರಾಯಿ ದೇವಸ್ಥಾನಗಳ ಮೇಲೆ ಸರಕಾರದ ನಾಮಫಲಕ ಕಡ್ಡಾಯ''

ವಾರ್ತಾಭಾರತಿವಾರ್ತಾಭಾರತಿ16 Nov 2021 7:43 PM IST
share
ಜ.30ರ ಒಳಗಾಗಿ ದೇವಸ್ಥಾನಗಳ ಆಡಿಟ್ ರಿಪೋರ್ಟ್ ಸಲ್ಲಿಸುವಂತೆ ಅಧಿಕಾರಿಗಳಿಗೆ ಸಚಿವೆ ಶಶಿಕಲಾ ಜೊಲ್ಲೆ ತಾಕೀತು

ಬೆಂಗಳೂರು, ನ.16: ರಾಜ್ಯದ ಮುಜರಾಯಿ ಇಲಾಖೆಯ ಹಲವಾರು ದೇವಸ್ಥಾನಗಳಲ್ಲಿ ಹಲವಾರು ವರ್ಷಗಳಿಂದ ಲೆಕ್ಕಪತ್ರ ತಪಾಸಣೆ ನಡೆದಿಲ್ಲ. ಇದು ದೇವಸ್ಥಾನದ ಆಡಳಿತದ ವಿಷಯದಲ್ಲಿ ಜನರಲ್ಲಿ ಸಂಶಯ ಮೂಡಿಸುತ್ತದೆ. ಈ ನಿಟ್ಟಿನಲ್ಲಿ 2022ರ ಜನವರಿ 30ರ ಒಳಗಾಗಿ ಲೆಕ್ಕಪತ್ರ ತಪಾಸಣೆ ವರದಿಯನ್ನು ಸಲ್ಲಿಸದ ದೇವಸ್ಥಾನದ ಅಧಿಕಾರಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಮುಜರಾಯಿ, ಹಜ್ ಹಾಗೂ ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ಎಚ್ಚರಿಕೆ ನೀಡಿದ್ದಾರೆ.

ಮಂಗಳವಾರ ವಿಕಾಸಸೌಧಲ್ಲಿ ನಡೆದ ಎ ಮತ್ತು ಬಿ ವರ್ಗದ ದೇವಾಲಯಗಳ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗಿನ ಸಭೆಯಲ್ಲಿ ರಾಜ್ಯದ ಮುಜರಾಯಿ ದೇವಸ್ಥಾನಗಳ ಅಭಿವೃದ್ಧಿ ಕಾರ್ಯ ಎದುರಿಸುತ್ತಿರುವ ಸಮಸ್ಯೆಗಳ ವಿಸ್ತ್ರತ ವರದಿಯನ್ನು ಅವರು ಪಡೆದುಕೊಂಡರು.

ಜನವರಿ 30ರ ಒಳಗಾಗಿ ಮಜರಾಯಿ ದೇವಸ್ಥಾನಗಳು ಬಾಕಿ ಇರುವ ಎಲ್ಲಾ ವರ್ಷಗಳ ಲೆಕ್ಕಪತ್ರ ತಪಾಸಣೆಯ ವರದಿಯನ್ನು ಸಲ್ಲಿಸಬೇಕು. ರಾಜ್ಯದಲ್ಲಿ 207 ಎ ದರ್ಜೆ, 139 ಬಿ ದರ್ಜೆ ದೇವಸ್ಥಾನಗಳಿವೆ. ಆದಾಯ ಕಡಿಮೆ ಇರುವ 34217 ಸಿ ದರ್ಜೆಯ ದೇವಸ್ಥಾನಗಳಿವೆ. ಇವುಗಳಲ್ಲಿ ಚಾಮುಂಡೇಶ್ವರಿ ದೇವಸ್ಥಾನ, ಯಡಿಯೂರು ಸಿದ್ದಲಿಂಗೇಶ್ವರ ದೇವಸ್ಥಾನ, ಘಾಟಿ ಸುಬ್ರಮಣ್ಯ ಮತ್ತು ಬೆಂಗಳೂರಿನ ಬನಶಂಕರಿ ದೇವಸ್ಥಾನಗಳಲ್ಲಿ ಮಾತ್ರ ಪ್ರತಿವರ್ಷ ಲೆಕ್ಕತಪಾಸಣಾ ವರದಿಯನ್ನು ನೀಡಲಾಗಿದೆ ಎಂದು ಅವರು ಹೇಳಿದರು.

2 ದಶಕಗಳಿಂದ ಲೆಕ್ಕಪತ್ರ ತಪಾಸಣೆ ಬಾಕಿ; ಇನ್ನುಳಿದ ದೇವಸ್ಥಾನಗಳಲ್ಲಿ ಹಲವು ದೇವಸ್ಥಾನಗಳ ಲೆಕ್ಕಪತ್ರ ತಪಾಸಣೆಯು ಸುಮಾರು 2 ದಶಕಗಳಿಂದ ಬಾಕಿ ಇದೆ. ಈ ರೀತಿ ಲೆಕ್ಕಪತ್ರ ವರದಿಯನ್ನು ನೀಡದೇ ಇರುವುದು ದೇವಸ್ಥಾನ ಆಡಳಿತ ಮಂಡಳಿ ಹಾಗೂ ಆಡಳಿತದ ಬಗ್ಗೆ ಸಂಶಯ ಹುಟ್ಟು ಹಾಕುತ್ತದೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಎಲ್ಲ ದೇವಸ್ಥಾನಗಳು ತಮ್ಮ ಲೆಕ್ಕಪತ್ರ ತಪಾಸಣಾ ವರದಿಯನ್ನು ಸಲ್ಲಿಸುವುದು ಕಡ್ಡಾಯ. ಮುಂದಿನ ಜನವರಿ 30 ರ ಒಳಗಾಗಿ ಲೆಕ್ಕಪತ್ರ ತಪಾಸಣಾ ವರದಿಯನ್ನು ಸಲ್ಲಿಸದೇ ಇದ್ದಲ್ಲಿ ಆಯಾ ದೇವಸ್ಥಾನಗಳ ಅಧಿಕಾರಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಶಶಿಕಲಾ ಜೊಲ್ಲೆ ಎಚ್ಚರಿಕೆ ನೀಡಿದರು.

ಐಟಿಎಂಎಸ್ ಕಾರ್ಯ ಚುರುಕುಗೊಳಿಸಲು ಸೂಚನೆ: ರಾಜ್ಯದ ಸಮಗ್ರ ದೇವಸ್ಥಾನಗಳ ಇಂಟಿಗ್ರೇಟೆಡ್ ವೆಬ್‍ಸೈಟ್ ಕಾರ್ಯ ತೀವ್ರಗತಿಯಲ್ಲಿ ನಡೆಯುತ್ತಿದೆ. ದೇವಸ್ಥಾನಗಳ ಇತಿಹಾಸ, ಐತಿಹ್ಯ ಹಾಗೂ ದೇವಸ್ಥಾನದ ಮಹತ್ವ ವನ್ನು ವೆಬ್‍ಸೈಟ್ ನಲ್ಲಿ ಅಳವಡಿಸಲು ಮಾಹಿತಿಯನ್ನ ಕ್ರೋಢೀಕರಿಸಲು ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.

ಮುಜರಾಯಿ ದೇವಸ್ಥಾನಗಳ ಮೇಲೆ ಸರಕಾರದ ನಾಮಫಲಕ ಕಡ್ಡಾಯ: ರಾಜ್ಯದ ಹಲವಾರು ಮುಜರಾಯಿ ದೇವಸ್ಥಾನಗಳ ಮೇಲೆ ಕರ್ನಾಟಕ ಸರಕಾರದ ನಾಮಫಲಕ ಇಲ್ಲ. ಮುಜರಾಯಿ ಇಲಾಖೆಗೆ ಸೇರಿದ ದೇವಸ್ಥಾನಗಳ ಮೇಲೆ ಮುಜರಾಯಿ ಇಲಾಖೆಯ ನಾಮಫಲಕಗಳನ್ನು ಅಳವಡಿಸುವುದು ಕಡ್ಡಾಯವಾಗಿದೆ. ಈ ನಿಟ್ಟಿನಲ್ಲಿ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಆಡಳಿತಾಧಿಕಾರಿಗಳು ತಪ್ಪದೇ ಕ್ರಮ ಕೈಗೊಳ್ಳುವಂತೆ ಅವರು ಸೂಚನೆ ನೀಡಿದರು.

ಧಾರ್ಮಿಕ ಕೇಂದ್ರಗಳಲ್ಲಿ ಸ್ವಚ್ಛತೆಗೆ ಆದ್ಯತೆ: ರಾಜ್ಯದ ಧಾರ್ಮಿಕ ಕೇಂದ್ರಗಳನ್ನು ಮತ್ತಷ್ಟು ಪ್ರವಾಸಿ ಸ್ನೇಹಿ ಮಾಡುವ ನಿಟ್ಟಿನಲ್ಲಿ ಮೂಲಭೂತ ಸೌಕರ್ಯಗಳನ್ನು ಅಭಿವೃದ್ದಿಗೊಳಿಸುವತ್ತ ಹೆಚ್ಚಿನ ಗಮನ ನೀಡಬೇಕು. ಮುಖ್ಯವಾಗಿ ದೇವಸ್ಥಾನ ಹಾಗೂ ಧಾರ್ಮಿಕ ಕೇಂದ್ರಗಳಲ್ಲಿ ಸ್ವಚ್ಚತೆ ಕಾಪಾಡುವುದು ಆದ್ಯತೆ ಆಗಬೇಕು. ರಾಜ್ಯದ 25 ಪ್ರಮುಖ ದೇವಸ್ಥಾನಗಳಲ್ಲಿ ತ್ಯಾಜ್ಯ ವಿಲೇವಾರಿ, ಮೂಲಭೂತ ಸೌಕರ್ಯಗಳ ಅಭಿವೃದ್ದಿ ಹೀಗೆ ಹಲವಾರು ವಿಷಯಗಳ ಬಗ್ಗೆ ಡಿಪಿಆರ್ ರಚಿಸಲು ಏಜೆನ್ಸಿಯನ್ನು ನೇಮಕ ಮಾಡಲಾಗಿದೆ. ಈ ಏಜೆನ್ಸಿ ಡಿಸೆಂಬರ್ ತಿಂಗಳಲ್ಲಿ 4 ದೇವಸ್ಥಾನಗಳ ಡಿಪಿಆರ್ ಸಲ್ಲಿಸಬೇಕು ಎಂದು ಶಶಿಕಲಾ ಜೊಲ್ಲೆ ಸೂಚನೆ ನೀಡಿದರು.

ಕಲ್ಯಾಣೀ ಪುನರುಜ್ಜೀವನಕ್ಕೆ ನರೇಗಾ ಮತ್ತು ಸ್ವಯಂ ಸೇವಾ ಸಂಘಟನೆಗಳ ಬಳಕೆಗೆ ಸೂಚನೆ: ರಾಜ್ಯದ ಒಟ್ಟಾರೆ ಕಲ್ಯಾಣಿಗಳಲ್ಲಿ ಸ್ವಚ್ಛವಾಗಿರುವ ಹಾಗೂ ಸ್ವಚ್ಛತೆ ಕಾಪಾಡದೇ ಇರುವ ಕಲ್ಯಾಣೀಗಳ ಪಟ್ಟಿಯನ್ನು ನೀಡುವಂತೆ ಆಯುಕ್ತರಿಗೆ ಸೂಚನೆ ನೀಡಿದ ಅವರು, ಸ್ವಚ್ಛತೆಯನ್ನು ಕಾಪಾಡದೇ ಇರುವ ಕಲ್ಯಾಣೀಗಳ ಪುನರುಜ್ಜೀವನಕ್ಕೆ ಪಂಚಾಯತ್ ಇಲಾಖೆ ಸಹಯೋಗದಲ್ಲಿ ನರೆಗಾ ಮತ್ತು ಸ್ವಯಂ ಸೇವಾ ಸಂಘಟನೆಗಳನ್ನು ಬಳಸಿಕೊಳ್ಳುವಂತೆ ತಿಳಿಸಿದರು.

ದೇವಸ್ಥಾನಗಳ ಜಾಗ ಒತ್ತುವರಿ ತೆರವುಗೊಳಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ ಶಶಿಕಲಾ ಜೊಲ್ಲೆ, ದೇವಸ್ಥಾನಗಳ ಜಾಗ ಸಮೀಕ್ಷೆಗೆ ವಿಶೇಷ ಅಭಿಯಾನ ನಡೆಸಲು ಕಂದಾಯ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸುವಂತೆ ಸೂಚನೆ ನೀಡಿದರು. ಒಟ್ಟಾರೆಯಾಗಿ ರಾಜ್ಯದ ದೇವಸ್ಥಾನಗಳನ್ನ ಇನ್ನಷ್ಟು ಅಭಿವೃದ್ದಿಗೊಳಿಸುವ ಮತ್ತು ಪಾರದರ್ಶಕ ಆಡಳಿತ ಮಾಡುವ ನಿಟ್ಟಿನಲ್ಲಿ ಕಾರ್ಯತತ್ಪರರಾಗಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಮುಜರಾಯಿ ಇಲಾಖೆ ಪ್ರಧಾನ ಕಾರ್ಯದರ್ಶಿ ತುಷಾರ್ ಗಿರಿನಾಥ್, ಆಯುಕ್ತೆ ರೋಹಿಣಿ ಸಿಂಧೂರಿ, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯರು ಮತ್ತು ರಾಜ್ಯದ ಎ ಮತ್ತು ಬಿ ದರ್ಜೆಯ ದೇವಸ್ಥಾನಗಳ ಕಾರ್ಯನಿರ್ವಾಹಕ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X