Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪ್ರತಿಯೊಬ್ಬರಿಗೂ ತಪ್ಪದೇ ಕೋವಿಡ್ ನಿರೋಧಕ...

ಪ್ರತಿಯೊಬ್ಬರಿಗೂ ತಪ್ಪದೇ ಕೋವಿಡ್ ನಿರೋಧಕ ಲಸಿಕೆ ನೀಡಿ : ನ್ಯಾ.ಪಿ.ವಿಶ್ವನಾಥ ಶೆಟ್ಟಿ

ವಾರ್ತಾಭಾರತಿವಾರ್ತಾಭಾರತಿ16 Nov 2021 8:05 PM IST
share
ಪ್ರತಿಯೊಬ್ಬರಿಗೂ ತಪ್ಪದೇ ಕೋವಿಡ್ ನಿರೋಧಕ ಲಸಿಕೆ ನೀಡಿ : ನ್ಯಾ.ಪಿ.ವಿಶ್ವನಾಥ ಶೆಟ್ಟಿ

ಉಡುಪಿ, ನ.16: ಜಿಲ್ಲೆಯಲ್ಲಿ ಅರ್ಹರಿರುವ ಪ್ರತಿಯೊಬ್ಬರಿಗೂ ಕೋವಿಡ್ ಲಸಿಕೆ ನೀಡುವುದರೊಂದಿಗೆ ಈ ಸಾಂಕ್ರಾಮಿಕ ರೋಗವನ್ನು ನಿಯಂತ್ರಣಕ್ಕೆ ತರಲು ಪ್ರತಿಯೊಬ್ಬರೂ ಶ್ರಮಿಸಬೇು ಎಂದು ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಪಿ.ವಿಶ್ವನಾಥ ಶೆಟ್ಟಿ ಹೇಳಿದ್ದಾರೆ.

ಸೋಮವಾರ ಮಣಿಪಾಲದಲ್ಲಿರುವ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲೆಯ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಜಿಲ್ಲೆಯಲ್ಲಿ 9.99 ಲಕ್ಷ ಜನರಿಗೆ ಕೋವಿಡ್ ನಿರೋಧಕ ಲಸಿಕೆ ಹಾಕಲು ಗುರುತಿಸಲಾಗಿದ್ದು, ಈಗಾಗಲೇ 9.22 ಲಕ್ಷ ಮಂದಿಗೆ ಪ್ರಥಮ ಡೋಸ್ ಲಸಿಕೆ ನೀಡುವುದರೊಂದಿಗೆ ಶೇ.93.5ರಷ್ಟು ಪ್ರಗತಿ ಸಾಧಿಸಲಾಗಿದೆ. ಇದುವರೆಗೆ 2ನೇ ಡೋಸ್‌ಗೆ ಅರ್ಹರಿರುವ 6.29 ಲಕ್ಷ ಮಂದಿಯಲ್ಲಿ 5.81 ಲಕ್ಷ ಮಂದಿಗೆ ಲಸಿಕೆ ನೀಡಲಾಗಿದ್ದು, ಜಿಲ್ಲೆಯಲ್ಲಿ ಒಟ್ಟು ಶೇ. 58.16ರಷ್ಟು ಮಂದಿ ಎರಡೂ ಡೋಸ್ ಲಸಿಕೆಯನ್ನು ಪಡೆದಿದ್ದಾರೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಅವರು ಲೋಕಾಯುಕ್ತರಿಗೆ ಮಾಹಿತಿ ನೀಡಿದರು.

ಇದುವರೆಗೆ ಲಸಿಕೆಯನ್ನು ಪಡೆಯದೇ ಇರುವವರು ಶೇ.8ರಷ್ಟಿದ್ದು, ಇವರು ಗಳು ಅನ್ಯ ಕಾರಣಗಳಿಂದ ಲಸಿಕೆ ಪಡೆಯಲು ಬಾರದೇ ಇರುವುದು ಕಂಡು ಬಂದಿದೆ. ಇವರುಗಳನ್ನು ಸ್ಥಳೀಯ ಜನಪ್ರತಿನಿಧಿಗಳು, ಇಲಾಖಾಧಿಕಾರಿಗಳು ಹಾಗೂ ಸಮಾಜದ ಮುಖಂಡರುಗಳು ಮನವೊಲಿಸುವುದರೊಂದಿಗೆ ಲಸಿಕೆಯನ್ನು ಪಡೆಯುವಂತೆ ಉತ್ತೇಜಿಸಬೇಕು ಎಂದು ಲೋಕಾಯುಕ್ತರು ನುಡಿದರು.

ಗ್ರಾಮ ಪಂಚಾಯತ್ ಹಾಗೂ ಸ್ಥಳೀಯ ಸಂಸ್ಥೆಗಳು ಸಹಾ ಪ್ರತಿಶತ 100 ರಷ್ಟು ಸಾರ್ವಜನಿಕರು ಲಸಿಕೆಯನ್ನು ಪಡೆಯಲು ಕೈಜೋಡಿಸಬೇಕು. ಈ ಕಾರ್ಯವನ್ನು ಆದಷ್ಟು ಶೀಘ್ರದಲ್ಲಿ ಪೂರ್ಣಗೊಳಿಸಬೇಕು. ಸಾರ್ವಜನಿಕರು ಮಾಸ್ಕ್ ಧರಿಸುವುದು, ಸುರಕ್ಷತಾ ಅಂತರ ಕಾಯ್ದುಕೊಳ್ಳುವುದನ್ನು ತಮ್ಮ ದಿನನಿತ್ಯದ ಭಾಗವನ್ನಾಗಿಸಿಕೊಳ್ಳಬೇಕು ಎಂದರು.

ಮೀನು ಹಿಡಿಯಲು ತೆರಳುವ ಕಾರ್ಮಿಕರಲ್ಲಿ ಹೆಚ್ಚು ಮಂದಿ ಲಸಿಕೆ ಪಡೆಯಲು ಬಾಕಿ ಉಳಿದಿರುವುದು ಕೇಳಿಬರುತ್ತಿದೆ. ಈ ಬಗ್ಗೆ ಸಂಬಂಧಪಟ್ಟ ಇಲಾಖಾಧಿಕಾರಿಗಳು ಇವರುಗಳಿಗೆ ಲಸಿಕೆ ನೀಡುವ ಜವಾಬ್ದಾರಿ ತೆಗೆದು ಕೊಂಡು ಅವರಿಗೆ ಲಸಿಕೆ ಕೊಡಿಸಲು ಮುಂದಾಗಬೇಕು. ಹೊರ ರಾಜ್ಯಗಳಿಗೆ ತೆರಳಿರುವ ಜಿಲ್ಲೆಯ ನಾಗರಿಕರು ತಮ್ಮ ಮನೆಗಳಿಗೆ ಆಗಮಿಸಿದಾಗ ಅವರು ಲಸಿಕೆ ಪಡೆದಿರುವ ಕುರಿತು ಪರಿಶೀಲಿಸಬೇಕು ಎಂದು ಸೂಚನೆ ನೀಡಿದರು.

ಎಲ್ಲಾ ಶಿಕ್ಷಕರಿಗೂ ಲಸಿಕೆ ನೀಡಿ: ಈಗಾಗಲೇ ಜಿಲ್ಲೆಯಲ್ಲಿ ಎಲ್ಲಾ ಶಿಕ್ಷಣ ಸಂಸ್ಥೆಗಳು ಪ್ರಾರಂಭವಾಗಿದ್ದು, ಭೌತಿಕ ತರಗತಿಗಳು ಸಹ ನಡೆಯುತ್ತಿವೆ. ಆದರೆ ಕೆಲವು ಖಾಸಗಿ ಸಂಸ್ಥೆಗಳ ಶಿಕ್ಷಕರು ಪೂರ್ಣ ಪ್ರಮಾಣದ ಲಸಿಕೆಯನ್ನು ಪಡೆಯದೇ ಇರುವುದು ಕಂಡು ಬಂದಿದೆ. ಇವರುಗಳ ಮೆಲೆ ನಿರ್ದಾಕ್ಷಿಣ್ಯವಾದ ಕ್ರಮಗಳನ್ನು ಕೈಗೊಂಡು, ತ್ವರಿತವಾಗಿ ಲಸಿಕೆ ಪಡೆಯುವಂತೆ ನೋಡಿ ಕೊಳ್ಳಬೇಕು, ಶಾಲೆಗಳಿಗೆ ಆಗಿಂದಾಗ್ಗೆ ಭೇಟಿ ನೀಡಿ ಕೋವಿಡ್ ಮಾರ್ಗಸೂಚಿ ಗಳು ಪಾಲನೆಯಾಗುತ್ತಿವೆಯೇ ಎಂಬ ಬಗ್ಗೆ ಪರಿಶೀಲಿಸಬೇಕೆಂದು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಾರ್ವಜನಿಕರು ವಿವಿಧ ಸೌಲಭ್ಯಗಳನ್ನು ಕೋರಿ ಅರ್ಜಿಗಳನ್ನು ಸಲ್ಲಿಸಿದಾಗ, ಅವುಗಳಲ್ಲಿರುವ ಸಣ್ಣಪುಟ್ಟ ತಪ್ಪುಗಳಿಗೆ ಅರ್ಜಿ ಗಳನ್ನು ವಜಾಗೊಳಿಸಿದೆ ಅವುಗಳನ್ನು ಅರ್ಜಿದಾರರಿಂದ ಸರಿಪಡಿಸಿ ನಿಯಮಾನುಸಾರ ವಿಲೇವಾರಿ ಮಾಡಿ, ಅವರುಗಳಿಗೆ ಸೌಲಭ್ಯ ನೀಡುವ ಮೂಲಕ ನ್ಯಾಯ ಒದಗಿಸಬೇಕು ಎಂದರು.

ತ್ವರಿತ ವಿಲೇವಾರಿಗೆ ಸೂಚನೆ: ಉಪವಿಭಾಗಾಧಿಕಾರಿಗಳ ನ್ಯಾಯಾಲಯದಲ್ಲಿ ಇರುವ ಪ್ರಕರಣಗಳ ಬಗ್ಗೆ ಮಾಹಿತಿ ಪಡೆದು ಮಾತನಾಡಿದ ಲೋಕಾಯುಕ್ತರು ಬಾಕಿ ಉಳಿದಿರುವ ಪ್ರಕರಣಗಳನ್ನು ಶೀಘ್ರದಲ್ಲೇ ವಿಲೇವಾರಿ ಮಾಡುವಂತೆ ಸೂಚನೆ ನೀಡಿದರು.

ಎಲ್ಲಾ ಇಲಾಖೆಗಳ ಸಿಬ್ಬಂದಿಗಳು, ಸಾರ್ವಜನಿಕರಿಂದ ಬರುವ ಅರ್ಜಿಗಳನ್ನು ಅಂದಂದೇ ವಿಳಂಬಲ್ಲದೇ ತಮ್ಮ ಕೆಲಸಗಳನ್ನು ಬಾಕಿ ಇಡದೇ ವಿಲೇವಾರಿ ಮಾಡುವುದು ಸೂಕ್ತ ಎಂದ ಅವರು, ಸಾರ್ವಜನಿಕರು ತಮ್ಮ ಕೆಲಸ ಕಾರ್ಯ ಗಳು ಅಗಿಲ್ಲವೆಂಬ ದೂರುಗಳು ಬಾರದ ರೀತಿಯಲ್ಲಿ ಎಚ್ಚರಿಕೆ ವಹಿಸಿ ಕೆಲಸ ಕಾರ್ಯ ನಿರ್ವಹಿಸುವಂತೆ ಸೂಚನೆಗಳನ್ನು ನೀಡಿದರು.

ಕೆಲವು ಗ್ರಾಮೀಣ ಭಾಗದಲ್ಲಿ ಮೊಬೈಲ್ ನೆಟ್‌ವರ್ಕ್‌ನ ಸಂಪರ್ಕಗಳು ಭ್ಯವಾಗುತ್ತಿಲ್ಲವೆಂಬ ದೂರುಗಳು ಕೇಳಿಬರುತ್ತಿವೆ. ಸರ್ಕಾರಿ ಸೇರಿದಂತೆ ಖಾಸಗಿ ಸಂಸ್ಥೆಗಳು ಮೊಬೈಲ್ ಟವರ್‌ಗಳ ನಿರ್ಮಾಣಕ್ಕೆ ಅರ್ಜಿಗಳನ್ನು ಸಲ್ಲಿಸಿದಾಗ ವಿಳಂಬಲ್ಲದೇ ನಿಯಮಾ ನುಸಾರ ಅವುಗಳಿಗೆ ಸ್ಥಳೀಯ ಸಂಸ್ಥೆಗಳು ಅನುಮತಿ ನೀಡಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ನವೀನ್ ಭಟ್, ಎಸ್ಪಿ ವಿಷ್ಣು ವರ್ಧನ್, ಉಪ ಅರಣ್ಯ ಸಂರಕ್ಷಣಾಧಿಕಾರಿ ರುಥ್ರನ್, ಲೋಕಾಯುಕ್ತ ಎಸ್ಪಿ ಕುಮಾರಸ್ವಾಮಿ ಹಾಗೂ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X