ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ; ಆರೋಪಿ ವಕೀಲ ರಾಜೇಶ್ ಭಟ್ ಗಾಗಿ ಶೋಧ

ಮಂಗಳೂರು, ನ.17: ನಗರದ ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ, ನ್ಯಾಯವಾದಿ ಕೆಎಸ್ಎನ್ ರಾಜೇಶ್ ಭಟ್ ನ ಪತ್ತೆಗಾಗಿ ಪೊಲೀಸರು ಕಾರ್ಯಾಚರಣೆ ಬಿರುಸುಗೊಳಿಸಿದ್ದಾರೆ.
ಬುಧವಾರ ಬಿಜೈಯಲ್ಲಿರುವ ರಾಜೇಶ್ ಭಟ್ ಮನೆಗೆ ದಾಳಿ ಮಾಡಿ ಶೋಧ ನಡೆಸಿದ್ದಾರೆ.
ದಾಳಿಯ ವೇಳೆ ಪೊಲೀಸರು ದಾಖಲೆಗಳಿಗಾಗಿ ಹುಡುಕಾಟ ನಡೆಸಿದರು ಎನ್ನಲಾಗಿದೆ. ಮಂಗಳೂರು ಸೆಂಟ್ರಲ್ ಎಸಿಪಿ ರಂಜಿತ್ ನೇತೃತ್ವದಲ್ಲಿ ತನಿಖೆ ಮುಂದುವರಿದಿದೆ. ಲೈಂಗಿಕ ಕಿರುಕುಳ ಪ್ರಕರಣ ಬೆಳಕಿಗೆ ಬಂದೊಡನೆ ಆರೋಪಿ ರಾಜೇಶ್ ಭಟ್ ತಲೆಮರೆಸಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.







.jpeg)
.jpeg)
.jpeg)

.jpeg)

