Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೃಷಿ ವಿಚಕ್ಷಣಾ ದಳ ಜಾಗೃತಗೊಳಿಸಲು ದಿಟ್ಟ...

ಕೃಷಿ ವಿಚಕ್ಷಣಾ ದಳ ಜಾಗೃತಗೊಳಿಸಲು ದಿಟ್ಟ ಕ್ರಮ: ಸಚಿವಬಿ.ಸಿ.ಪಾಟೀಲ್

`ಹುಲಿಬಿಟ್ಟು ಇಲಿ ಹಿಡಿಯಬಾರದು'

ವಾರ್ತಾಭಾರತಿವಾರ್ತಾಭಾರತಿ17 Nov 2021 11:14 PM IST
share
ಕೃಷಿ ವಿಚಕ್ಷಣಾ ದಳ ಜಾಗೃತಗೊಳಿಸಲು ದಿಟ್ಟ ಕ್ರಮ: ಸಚಿವಬಿ.ಸಿ.ಪಾಟೀಲ್

ಬೆಂಗಳೂರು, ನ. 17: `ರಾಜ್ಯದಲ್ಲಿ ರೈತರಿಗೆ ಯಾವುದೇ ರೀತಿಯ ಕಳಪೆ ಕೃಷಿ ಪರಿಕರಗಳು, ರಸಗೊಬ್ಬರ, ಕೀಟನಾಶಕಗಳು ಸರಬರಾಜಾಗದಂತೆ ಕೃಷಿ ವಿಚಕ್ಷಣಾ ದಳವನ್ನು ಇನ್ನಷ್ಟು ಜಾಗೃತಗೊಳಿಸಲು ದಿಟ್ಟ ಕ್ರಮ ವಹಿಸಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್, `ಹುಲಿ ಬಿಟ್ಟು ಇಲಿ ಹಿಡಿಯಬಾರದು' ಎಂದು ಸಲಹೆ ನೀಡಿದ್ದಾರೆ.

ಬುಧವಾರ ವಿಕಾಸಸೌಧದಲ್ಲಿನ ತನ್ನ ಕಚೇರಿಯಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ್‍ರ ಅಧ್ಯಕ್ಷತೆಯಲ್ಲಿ ಸರಕಾರದ ಕೃಷಿ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ನೇತೃತ್ವದಲ್ಲಿ ಕೃಷಿ ವಿಚಕ್ಷಣಾ ದಳದ ಪ್ರಗತಿ ಪರಿಶೀಲನಾ ಸಭೆ ನಡೆಸಲಾಯಿತು.

ಸಭೆಯಲ್ಲಿ ಕೃಷಿ ವಿಚಕ್ಷಣಾ ದಳದ ಕಾರ್ಯನಿರ್ವಹಣೆಯನ್ನು ಇನ್ನಷ್ಟು ಚುರುಕುಗೊಳಿಸುವುದರೊಂದಿಗೆ ಕಳಪೆ ರಸಗೊಬ್ಬರ, ಕೀಟನಾಶಕಗಳು ತಯಾರಾಗದಂತೆ ಅಕ್ರಮ ದಾಸ್ತಾನು, ಕಾಳಸಂತೆಯಲ್ಲಿ ಮಾರಾಟವಾಗದಂತೆ ತಳಮಟ್ಟದಲ್ಲಿಯೇ ಅವುಗಳನ್ನು ಬುಡಸಹಿತ ಕಿತ್ತುಹಾಕಬೇಕು. ರೈತರಿಗೆ ಅನ್ಯಾಯವಾಗುವಂತಹ ಇಂತಹ ಕುಕೃತ್ಯದಲ್ಲಿ ಯಾರೇ ಅಧಿಕಾರಿಗಳಿಗಾಗಲೀ ಇನ್ಯಾರೇ ಆಗಲೀ ಶಾಮೀಲಾಗದಂತೆ ನೋಡಿಕೊಂಡು ತಪ್ಪನ್ನು ಎಸಗಿದವರು ಯಾರೇ ಆಗಲೀ ಅಂತಹವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

ದಾಳಿ ನಡೆಸುವುದು ಸದುದ್ದೇಶದಿಂದ ಕೂಡಿರಬೇಕು ಹಾಗ ರೈತರಿಗೆ ಉಪಯೋಗವಾಗುವಂತಿರಬೇಕು. ಇಲಾಖೆಗೆ ರೈತರಿಗೆ ದ್ರೋಹ ಬಗೆಯುವವರು ಯಾರೇ ಕಂಡುಬಂದರೂ ಮುಲಾಜಿಲ್ಲದೇ ಅಂತವರ ವಿರುದ್ಧ ಕ್ರಮ ಜರುಗಿಸಿ ಎಂದರು. ತಳಮಟ್ಟದಲ್ಲಿಯೇ ಗುಣಮಟ್ಟದ ಅನುಮತಿ ನೀಡಿದ ಪ್ಯಾಕಿಂಗ್ ಗಳು ಮೇಲ್ಮಟ್ಟದವರೆಗೂ ಸರಬರಾಜಾಗಿ ಒಪ್ಪಿತ ಗುಣಮಟ್ಟದ ಮಾದರಿಗಳೇ ರೈತರಿಗೂ ತಲುಪುವಂತೆ ನೋಡಿಕೊಳ್ಳಬೇಕು.

ಜಿಲ್ಲೆಯ ಕೃಷಿ ಅಧಿಕಾರಿಗಳು ವಿಚಕ್ಷಣಾ ದಳದವರು ಇದರತ್ತ ಹೆಚ್ಚಿನ ಲಕ್ಷ್ಯವಹಿಸಬೇಕು. ಅವರವರ ಜವಾಬ್ದಾರಿ ಕರ್ತವ್ಯಗಳನ್ನು ಅವರವರೇ ನಿರ್ವಹಿಸಬೇಕು. ಸ್ಥಳೀಯವಾಗಿ ಜಿಲ್ಲಾ ಕೃಷಿ ವಿಚಕ್ಷಣಾಧಿಕಾರಿಗಳೇ ಆಯಾ ಭಾಗದಲ್ಲಿ ಹದ್ದಿನ ಕಣ್ಣು ಇಡಬೇಕು. ಮೇಲ್ಮಟ್ಟದ ಅಧಿಕಾರಿಗಳಿಗೆ ಇಂತಹ ಕುಕೃತ್ಯಗಳು ಗಮನಕ್ಕೆ ಬಂದು ಸ್ಥಳೀಯವಾಗಿ ಅಧಿಕಾರಿಗಳಿಗೆ ಬಾರದೇ ಇದ್ದ ಸಂದರ್ಭದಲ್ಲಿ ರಾಜ್ಯದ ಯಾವುದೇ ಭಾಗದಲ್ಲಿಯೂ ಕೇಂದ್ರ ಕೃಷಿ ಜಾಗೃತಕೋಶದ ಅಧಿಕಾರಿಗಳು ದಾಳಿ ಮಾಡಿ ಕೃಷಿ ಪರಿಕರಗಳನ್ನು ಜಪ್ತು ಮಾಡಿದ ಸಂದರ್ಭದಲ್ಲಿ ಪರಿವೀಕ್ಷಕರಿಗೆ ನೋಟೀಸ್ ನೀಡುವುದಾಗಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಎಚ್ಚರಿಸಿದರು.

ಬಹುಮುಖ್ಯವಾಗಿ ಕೃಷಿ ಇಲಾಖೆಯ `ಟೋಲ್ ಫ್ರೀ-ಸಹಾಯವಾಣಿ' ದೂರವಾಣಿ ಸಂಖ್ಯೆಯನ್ನು ಜಾಗೃತಕೋಶಕ್ಕೂ ವಿಸ್ತರಿಸುವಂತೆ ಸಭೆಯಲ್ಲಿ ಸೂಚಿಸಿದ ಅವರು, ಜಪ್ತಿ ಮಾಡಿದ ಕೃಷಿ ಪರಿಕರಗಳ ವಿಲೇವಾರಿಗೆ ಸಂಬಂಧಿಸಿದಂತೆ ಅಗತ್ಯ ಮಾರ್ಗಸೂಚಿ ಹೊರಡಿಸಲು ಕೃಷಿ ಇಲಾಖಾ ಮುಖ್ಯಸ್ಥರಿಗೆ ಸೂಚಿಸಲಾಯಿತು. ಇದರೊಂದಿಗೆ ಜಾಗೃತಕೋಶದ ಕಾರ್ಯಕ್ಕೆ ಸುಗಮವಾಗುವಂತೆ ಕೃಷಿ ಪರಿಕರಗಳ ಗುಣಮಟ್ಟ ನಿಯಂತ್ರಣಕ್ಕೆ ಪೂರಕವಾಗಿ ಅಗತ್ಯವಾಗಿ ಬೇಕಾದ ತಂತ್ರಾಂಶದೊಂದಿಗೆ ಜೋಡಿಸಲು ಕ್ರಮವಹಿಸಬೇಕೆಂದು ಬಿ.ಸಿ.ಪಾಟೀಲರು ಅಧಿಕಾರಿಗಳಿಗೆ ಸಲಹೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X