ರಾಜಸ್ಥಾನ: ಬಿಜೆಪಿ ಶಾಸಕನ ವಿರುದ್ಧ 10 ತಿಂಗಳಲ್ಲಿ ಎರಡನೇ ಬಾರಿ ಅತ್ಯಾಚಾರ ಪ್ರಕರಣ ದಾಖಲು

Photo: Times of india
ಜೈಪುರ: ಬಿಜೆಪಿ ಶಾಸಕ ಪ್ರತಾಪ್ ಭೀಲ್ ವಿರುದ್ಧ 10 ತಿಂಗಳ ಅವಧಿಯಲ್ಲಿ ಎರಡನೇ ಬಾರಿ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಬೀಲ್ ರಾಜಸ್ಥಾನದ ಗೋಗುಂಡಾ ಕ್ಷೇತ್ರದ ಶಾಸಕರಾಗಿದ್ದಾರೆ ಎಂದು India Today ವರದಿ ಮಾಡಿದೆ.
ಎರಡೂ ಪ್ರಕರಣಗಳಲ್ಲಿ ಉದ್ಯೋಗ ನೀಡುವುದಾಗಿ ಭರವಸೆ ನೀಡಿದ ನಂತರ ಶಾಸಕ ಮದುವೆಯ ನೆಪದಲ್ಲಿ ಮಹಿಳೆಯರ ಮೇಲೆ ಅತ್ಯಾಚಾರವೆಸಗಿದ್ದಾನೆ ಎನ್ನಲಾಗಿದೆ.
ಹೊಸ ಪ್ರಕರಣದಲ್ಲಿ ಮಹಿಳೆ ಅಂಬಾಮಾತಾ ಪೊಲೀಸ್ ವರಿಷ್ಠಾಧಿಕಾರಿಯನ್ನು ಸಂಪರ್ಕಿಸಿದರು. ಪ್ರತಾಪ್ ಭೀಲ್ ತನಗೆ ಕೆಲಸ ನೀಡುವುದಾಗಿ ಭರವಸೆ ನೀಡಿದ ನಂತರ ತನ್ನ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಿದರು. ಮದುವೆಯಾಗುವುದಾಗಿ ಭರವಸೆ ನೀಡಿ ಭೀಲ್ ತನ್ನ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳೆ ದೂರಿದ್ದಾರೆ.
ಸುಖೇರ್ ನಲ್ಲಿ 10 ತಿಂಗಳ ಹಿಂದೆ ಭೀಲ್ ವಿರುದ್ಧ ಮತ್ತೊಂದು ಅತ್ಯಾಚಾರ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಸಿಐಡಿ ತನಿಖೆ ನಡೆಯುತ್ತಿದೆ.
ಈ ಪ್ರಕರಣದಲ್ಲಿ, ತಾನು ಉದ್ಯೋಗಕ್ಕಾಗಿ ಪ್ರತಾಪ್ ಭೀಲ್ ರನ್ನು ಭೇಟಿಯಾದ ನಂತರ ಉದ್ಯೋಗದ ಭರವಸೆ ನೀಡಿದ್ದರು ಎಂದು ಮಹಿಳೆ ಪೊಲೀಸರಿಗೆ ತಿಳಿಸಿದ್ದಾರೆ. ಅಂದಿನಿಂದ ಅವರು ತನಗೆ ಕರೆ ಮಾಡುತ್ತಿದ್ದರು ಎಂದು ಮಹಿಳೆ ಆರೋಪಿಸಿದ್ದಾರೆ.
ಕಳೆದ ವರ್ಷ ಮಾರ್ಚ್ನಲ್ಲಿ ಶಾಸಕರು ತನ್ನ ಮನೆಗೆ ಬಂದು ತನ್ನ ಮೇಲೆ ಅತ್ಯಾಚಾರ ಎಸಗಿದ್ದರು ಎಂದು ಆರೋಪಿಸಿದ್ದಾರೆ. ಮದುವೆಯಾಗುವುದಾಗಿ ಭರವಸೆ ನೀಡಿದ್ದಾಗಿಯೂ ಮಹಿಳೆ ಹೇಳಿದ್ದಾರೆ
ಶಾಸಕ ಭೀಲ್ ಈ ಎಲ್ಲಾ ಆರೋಪಗಳನ್ನು ತಳ್ಳಿಹಾಕಿದ್ದಾರೆ.