'ಚುನಾವಣೆ ಸಮಯದಲ್ಲಿ ಬಿಜೆಪಿ ಕೋಮು ಉದ್ವಿಗ್ನತೆ ಸೃಷ್ಟಿಸುತ್ತದೆ’: ಕೆಸಿಆರ್ ವಾಗ್ದಾಳಿ
ಹೈದರಾಬಾದ್: ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರು ಇಂದು ರಾಜ್ಯದಲ್ಲಿ ಭತ್ತ ಖರೀದಿಯ ಸಮಸ್ಯೆಯನ್ನು ಮುಂದಿಟ್ಟುಕೊಂಡು ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಬಿಜೆಪಿಯು ಕೇವಲ ಚುನಾವಣಾ ಸಮಯದಲ್ಲಿ ಕೋಮು ಉದ್ವಿಗ್ನತೆಯನ್ನು ಸೃಷ್ಟಿಸುವುದರಲ್ಲಿ ನಿರತವಾಗಿರುತ್ತದೆ ಎಂದು ಆರೋಪಿಸಿದರು.
ಬಿಜೆಪಿ ನಾಯಕರು "ಕೇಸ್ ಹಾಕುವುದಾಗಿ ಬೆದರಿಕೆ ಹಾಕುತ್ತಿದ್ದಾರೆ... ಕೆಸಿಆರ್‌ಗೆ ಅವರು ಬೆದರಿಕೆ ಹಾಕುತ್ತಿದ್ದಾರೆಯೇ? ಕೆಸಿಆರ್ ಹೆದರುತ್ತಾರೆ ಎಂದು ಅವರು ಭಾವಿಸುತ್ತಾರೆ?" ಎಂದು ಅವರು ಹೇಳಿದರು.
"ಚುನಾವಣೆಗಳು ಬಂದಾಗ ಅವರು ಹಿಂದೂ-ಮುಸ್ಲಿಂ ಸಮಸ್ಯೆ, ಪಾಕಿಸ್ತಾನದ ವಿಚಾರಗಳನ್ನು ತರುತ್ತಾರೆ ... ಚುನಾವಣಾ ಸಮಯದಲ್ಲಿ ನೀವು ಗಡಿಯಲ್ಲಿ ಕೋಮು ಉದ್ವಿಗ್ನತೆಯನ್ನು ಸೃಷ್ಟಿಸುತ್ತೀರಿ, ಸರ್ಜಿಕಲ್ ಸ್ಟ್ರೈಕ್ ಮಾಡುತ್ತೀರಿ. ಇದನ್ನು ಜನರು ನೋಡುತ್ತಿದ್ದಾರೆ" ಎಂದು ಅವರು ಹೇಳಿದರು.
ಮುಖ್ಯಮಂತ್ರಿ ಕೆಸಿಆರ್ ನೇತೃತ್ವದಲ್ಲಿ ಹೈದರಾಬಾದ್‌ನ ಇಂದಿರಾ ಪಾರ್ಕ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ಅವರ ಸಹೋದ್ಯೋಗಿಗಳು ಹಾಗೂ ಅವರ ಆಡಳಿತಾರೂಢ ತೆಲಂಗಾಣ ರಾಷ್ಟ್ರ ಸಮಿತಿಯ ಇತರ ಮುಖಂಡರು ಭಾಗವಹಿಸಿದ್ದರು.