ಶಾಲಾ ದಾಖಲಾತಿ ದಿನಾಂಕ ನ.30ರವರೆಗೂ ವಿಸ್ತರಣೆ

ಸಾಂದರ್ಭಿಕ ಚಿತ್ರ
ಬೆಂಗಳೂರು, ನ.18: ಪ್ರಾಥಮಿಕ ಶಾಲೆಗಳ ಭೌತಿಕ ತರಗತಿಗಳು ತಡವಾಗಿ ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ಮಾಧ್ಯಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ವಿದ್ಯಾರ್ಥಿಗಳನ್ನು ನ.30ವರೆಗೆ ದಾಖಲಾತಿ ಮಾಡಿಕೊಳ್ಳುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದಾರೆ.
ಕೊವೀಡ್-19 ಲಾಕ್ಡೌನ್ ಹಿನ್ನಲೆಯಲ್ಲಿ 2021-22 ನೇ ಸಾಲಿನ ಶೈಕ್ಷಣಿಕ ವರ್ಷವು ತಡವಾಗಿ ಪ್ರಾರಂಭವಾಗಿದ್ದು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿಯನ್ನು ಮುಂದುವರೆಸುವಂತೆ ಶಿಕ್ಷಣ ಇಲಾಖೆಯ ಉಪನಿರ್ದೇಶಕ, ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಶಾಲೆಗಳ ಮುಖ್ಯೋಪಾಧ್ಯಾಯರಿಗೆ ಆದೇಶಿಸಿದ್ದಾರೆ.
Next Story





