ಪೊಲೀಸ್ ಹುದ್ದೆ ನೇಮಕ ವಿಳಂಬ: ಹೈಕೋರ್ಟ್ ಅಸಮಾಧಾನ

Photo: PTI
ಬೆಂಗಳೂರು, ನ.18: ರಾಜ್ಯದಲ್ಲಿ ಖಾಲಿ ಇರುವ 1142 ಪಿಎಸ್ಐ ಹಾಗೂ 4460 ಪೊಲೀಸ್ ಕಾನ್ಸ್ಟೆಬಲ್ ಹುದ್ದೆಗಳ ಭರ್ತಿ ಪ್ರಕ್ರಿಯೆಯನ್ನು ಸಕಾಲದಲ್ಲಿ ಪೂರ್ಣಗೊಳಿಸದ ಸರಕಾರದ ಕ್ರಮಕ್ಕೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.
ಈ ಸಂಬಂಧ ಸುಪ್ರೀಂಕೋರ್ಟ್ ನಿರ್ದೇಶನದಂತೆ ಹೈಕೋರ್ಟ್ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ, ಕಾಲಮಿತಿಯೊಳಗೆ ಪೊಲೀಸ್ ಇಲಾಖೆಯಲ್ಲಿನ ಖಾಲಿ ಹುದ್ದೆಗಳ ಭರ್ತಿ ಮಾಡಲಾಗುವುದು ಎಂಬ ಬಗ್ಗೆ ಸ್ಪಷ್ಟವಾದ ಪ್ರಮಾಣ ಪತ್ರ ಸಲ್ಲಿಸಲು ಸೂಚನೆ ನೀಡಿತು.
ಈಗಾಗಲೇ ಹುದ್ದೆಗಳ ಭರ್ತಿಗೆ ವಿಳಂಬವಾಗಿದೆ. ಮತ್ತೆ 2022ರ ಜುಲೈವರೆಗೆ ಕಾಲಾವಕಾಶ ಕೇಳಿರುವ ಕ್ರಮ ಸರಿಯಲ್ಲ. ಕನಿಷ್ಠ ಕಾಲಮಿತಿಯೊಳಗೆ ಹುದ್ದೆಗಳನ್ನು ಭರ್ತಿ ಮಾಡಬೇಕು. ಈ ಸಂಬಂಧಿತ ಪ್ರಮಾಣ ಪತ್ರವನ್ನು ನ್ಯಾಯಾಲಯಕ್ಕೆ ಕೂಡಲೇ ಸಲ್ಲಿಸಬೇಕೆಂದು ನ್ಯಾಯಪೀಠ ಸರಕಾರಕ್ಕೆ ಸೂಚನೆ ನೀಡಿದೆ.
Next Story