Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ್ಯ ಹಜ್ ಮತ್ತು ವಕ್ಫ್ ಇಲಾಖೆಯ...

ರಾಜ್ಯ ಹಜ್ ಮತ್ತು ವಕ್ಫ್ ಇಲಾಖೆಯ ಕಾರ್ಯಗಳಿಗೆ ಕೇಂದ್ರದಿಂದ ಅಗತ್ಯ ಸಹಕಾರದ ಭರವಸೆ: ಸಚಿವೆ ಶಶಿಕಲಾ ಜೊಲ್ಲೆ

ವಾರ್ತಾಭಾರತಿವಾರ್ತಾಭಾರತಿ18 Nov 2021 6:28 PM IST
share
ರಾಜ್ಯ ಹಜ್ ಮತ್ತು ವಕ್ಫ್ ಇಲಾಖೆಯ ಕಾರ್ಯಗಳಿಗೆ ಕೇಂದ್ರದಿಂದ ಅಗತ್ಯ ಸಹಕಾರದ ಭರವಸೆ: ಸಚಿವೆ ಶಶಿಕಲಾ ಜೊಲ್ಲೆ

ಹೊಸದಿಲ್ಲಿ: ರಾಜ್ಯ ಹಜ್ ಮತ್ತು ವಕ್ಫ್ ಇಲಾಖೆಯ ಸಮಸ್ಯೆಗಳ ಪರಿಹಾರದ ಜೊತೆಗೆ ಅಭಿವೃದ್ಧಿಗೆ ಅಗತ್ಯ ಸಹಕಾರದ ಭರವಸೆಯನ್ನು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಹಾಗೂ ಕೇಂದ್ರ ವಕ್ಫ್ ಮಂಡಳಿ ಅಧ್ಯಕ್ಷ ಮುಖ್ತಾರ್ ಅಬ್ಬಾಸ್ ನಖ್ವಿ ನೀಡಿದ್ದಾರೆ ಎಂದು ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದರು.  

ಗುರುವಾರ ಹೊಸದಿಲ್ಲಿಯಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಅವರನ್ನು ಭೇಟಿ ಮಾಡಿದ ಅವರು, ಹಜ್ ಯಾತ್ರೆ ಮತ್ತು ರಾಜ್ಯ ವಕ್ಫ್ ಇಲಾಖೆಯ ಅಭಿವೃದ್ಧಿ ಕಾರ್ಯಗಳ ಕುರಿತು ಸಮಾಲೋಚನೆ ನಡೆಸಿದರು. 

ಕೊರೋನ ಸಾಂಕ್ರಾಮಿಕದ ಕಾರಣ ಎರಡು ವರ್ಷಗಳ ನಂತರ ಪವಿತ್ರ ಹಜ್ ಯಾತ್ರೆಯ ಪ್ರಕ್ರಿಯೆಗೆ ಚಾಲನೆ ನೀಡುವಲ್ಲಿ ಕೇಂದ್ರ ಸಚಿವರ ಮುತುವರ್ಜಿಗೆ ಅಭಿನಂದಿಸಿದ ಶಶಿಕಲಾ ಜೊಲ್ಲೆ, ರಾಜ್ಯದಲ್ಲಿರುವ 32 ಸಾವಿರಕ್ಕೂ ಹೆಚ್ಚು ವಕ್ಫ್ ಸಂಸ್ಥೆಗಳ 46 ಸಾವಿರಕ್ಕೂ ಹೆಚ್ಚು ಆಸ್ತಿಗಳ ರಕ್ಷಣೆಗೆ ಕೇಂದ್ರ ವಕ್ಫ್ ಪರಿಷತ್ ನಿಂದ ಅನುದಾನ ನೀಡಿದಲ್ಲಿ ಅನುಕೂಲವಾಗುತ್ತದೆ ಎಂದರು.

ಅಲ್ಲದೆ, ವಕ್ಫ್ ಆಸ್ತಿಗಳನ್ನು ಅಭಿವೃದ್ಧಿಪಡಿಸಿದಲ್ಲಿ ವಕ್ಫ್ ಮಂಡಳಿಗೆ ಅದಾಯವೂ ಸಿಗಲಿದೆ. ಈ ನಿಟ್ಟಿನಲ್ಲಿ ಕೇಂದ್ರ ವಕ್ಫ್ ಪರಿಷತ್ತಿನಲ್ಲಿ ಬಾಕಿ ಇರುವ ರಾಜ್ಯದ ಪ್ರಸ್ತಾವನೆಗಳನ್ನು ತ್ವರಿತವಾಗಿ ಅಂಗೀಕರಿಸಿ ಮಂಜೂರಾತಿ ನೀಡುವಂತೆ ಕೇಂದ್ರ ಸಚಿವರಿಗೆ ಮನವಿ ಸಲ್ಲಿಸಿದ್ದೇವೆ ಎಂದು ಅವರು ಹೇಳಿದರು.

ಸರ್ವೋಚ್ಚ ನ್ಯಾಯಾಲಯದಲ್ಲಿ ರಾಜ್ಯದ ವಕ್ಫ್ ಆಸ್ತಿಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ರಾಜ್ಯದ ಪರವಾಗಿ ಸಮರ್ಥವಾಗಿ ವಾದಿಸುವಂತಹ ನ್ಯಾಯವಾದಿಗಳನ್ನು ನೇಮಿಸಲು ಆರ್ಥಿಕ ಸಂಪನ್ಮೂಲದ ಕೊರತೆಯಿದೆ. ಇಂತಹ ಪ್ರಕರಣಗಳ ನಿರ್ವಹಣೆಗೆ ನ್ಯಾಯವಾದಿಗಳ ವೆಚ್ಚವನ್ನು ಕೇಂದ್ರ ವಕ್ಫ್ ಪರಿಷತ್ತಿನಿಂದ ಭರಿಸಿದರೆ ಹೆಚ್ಚಿನ ಅನುಕೂಲವಾಗುತ್ತದೆ ಎನ್ನುವುದನ್ನು ಕೇಂದ್ರ ಸಚಿವರಿಗೆ ಮನವರಿಕೆ ಮಾಡಿಕೊಟ್ಟಿದ್ದೇವೆ. ಈ ವಿಷಯಗಳ ಬಗ್ಗೆ ರಾಜ್ಯಕ್ಕೆ ಕೇಂದ್ರ ಸರಕಾರದಿಂದ ಅಗತ್ಯ ಸಹಕಾರ ನೀಡುವ ಭರವಸೆಯನ್ನು ಕೇಂದ್ರ ಸಚಿವರು ನೀಡಿದ್ದಾರೆ ಎಂದು ಶಶಿಕಲಾ ಜೊಲ್ಲೆ ತಿಳಿಸಿದರು. 

ರಾಜ್ಯದಲ್ಲಿ 2020 ರ ಹಜ್ ಯಾತ್ರೆಯ ಪ್ರಕ್ರಿಯೆಗೆ ಚಾಲನೆ ನೀಡಿರುವುದು ಹಾಗೂ ವಕ್ಫ್ ಆಸ್ತಿಗಳ ಸಂರಕ್ಷಣೆಗೆ ಕೈಗೊಳ್ಳಲಾದ ಕ್ರಮಗಳ ಬಗ್ಗೆ ಮಾನ್ಯ ಕೇಂದ್ರ ಸಚಿವರು ಸಂತಸ ವ್ಯಕ್ತಪಡಿಸಿ ಸಚಿವರನ್ನು ಶ್ಲಾಘಿಸಿದರು. ಈ ಸಂಧರ್ಭದಲ್ಲಿ ಚಿಕ್ಕೋಡಿ ಸಂಸದ ಅಣ್ಣಾ ಸಾಹೇಬ್ ಜೊಲ್ಲೆ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X