Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಚರ್ಮದಿಂದ ಚರ್ಮಕ್ಕೆ ಸಂಪರ್ಕ ಮಾತ್ರ...

ಚರ್ಮದಿಂದ ಚರ್ಮಕ್ಕೆ ಸಂಪರ್ಕ ಮಾತ್ರ ಲೈಂಗಿಕ ದೌರ್ಜನ್ಯ: ವಿವಾದಾತ್ಮಕ ಬಾಂಬೆ ಹೈಕೋರ್ಟ್ ತೀರ್ಪು ರದ್ದುಪಡಿಸಿದ ಸುಪ್ರೀಂ

ವಾರ್ತಾಭಾರತಿವಾರ್ತಾಭಾರತಿ18 Nov 2021 7:47 PM IST
share
ಚರ್ಮದಿಂದ ಚರ್ಮಕ್ಕೆ ಸಂಪರ್ಕ ಮಾತ್ರ ಲೈಂಗಿಕ ದೌರ್ಜನ್ಯ: ವಿವಾದಾತ್ಮಕ ಬಾಂಬೆ ಹೈಕೋರ್ಟ್ ತೀರ್ಪು ರದ್ದುಪಡಿಸಿದ ಸುಪ್ರೀಂ

ಹೊಸದಿಲ್ಲಿ,ನ.18: ಪೊಕ್ಸೊ ಕಾಯ್ದೆಯಡಿ ಅಪರಾಧವನ್ನಾಗಿ ಪರಿಗಣಿಸಲು ಚರ್ಮದಿಂದ ಚರ್ಮಕ್ಕೆ ಸಂಪರ್ಕ ಅಗತ್ಯವಲ್ಲ ಎಂದು  ಸರ್ವೋಚ್ಚ ನ್ಯಾಯಾಲಯವು ಗುರುವಾರ ತೀರ್ಪು ನೀಡಿದೆ. ಚರ್ಮಕ್ಕೆ ಚರ್ಮದ ಸಂಪರ್ಕವಿಲ್ಲದೆ ಬಟ್ಟೆಯ ಮೇಲಿಂದಲೇ ಅಪ್ರಾಪ್ತವಯಸ್ಕ ಬಾಲಕಿಯ ಎದೆಯನ್ನು ತಡಕಾಡುವುದು ಪೊಕ್ಸೊ ಕಾಯ್ದೆಯಡಿ ಲೈಂಗಿಕ ದೌರ್ಜನ್ಯವಾಗುವುದಿಲ್ಲ ಎಂದು ಹೇಳಿ ಆರೋಪಿಯನ್ನು ಖುಲಾಸೆಗೊಳಿಸಿದ್ದ ಬಾಂಬೆ ಉಚ್ಚ ನ್ಯಾಯಾಲಯದ ತೀರ್ಪನ್ನು ರದ್ದುಗೊಳಿಸಿದ ಸರ್ವೋಚ್ಚ ನ್ಯಾಯಾಲಯವು,ಸದ್ರಿ ತೀರ್ಪನ್ನು ‘ಕಾನೂನಿನ ಸಂಕುಚಿತ ವ್ಯಾಖ್ಯಾನ ’ಎಂದು ಬಣ್ಣಿಸಿತು.

ಮಕ್ಕಳನ್ನು ಲೈಂಗಿಕ ಶೋಷಣೆಯಿಂದ ರಕ್ಷಿಸುವುದು ಪೊಕ್ಸೊ ಕಾಯ್ದೆಯ ಉದ್ದೇಶವಾಗಿದೆ ಎಂದು ಬೆಟ್ಟು ಮಾಡಿದ ನ್ಯಾಯಮೂರ್ತಿಗಳಾದ ಯು.ಯು.ಲಲಿತ್, ಎಸ್.ಆರ್.ಭಟ್ ಮತ್ತು ಬೇಲಾ ಎಂ.ತ್ರಿವೇದಿ ಅವರ ಪೀಠವು, ಲೈಂಗಿಕ ಉದ್ದೇಶದಿಂದ ಮಾಡಿದ ದೈಹಿಕ ಸಂಪರ್ಕವು ಪೊಕ್ಸೊ ಕಾಯ್ದೆಯಡಿ ಬರುತ್ತದೆ ಮತ್ತು ಚರ್ಮದಿಂದ ಚರ್ಮಕ್ಕೆ ಸಂಪರ್ಕವು ಮಾನದಂಡವಾಗುವುದಿಲ್ಲ ಎಂದು ಹೇಳಿತು.

ಬಾಂಬೆ ಉಚ್ಚ ನ್ಯಾಯಾಲಯದ ತೀರ್ಪನ್ನು ವಿರೋಧಿಸಿದ್ದ ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ ಅವರು, ನ್ಯಾಯಾಲಯದ ವ್ಯಾಖ್ಯಾನವು ಯಾರೇ ಆದರೂ ಸರ್ಜಿಕಲ್ ಗ್ಲೋವ್‌ಗಳನ್ನು ಧರಿಸಿ ಮಗುವನ್ನು ಲೈಂಗಿಕವಾಗಿ ಶೋಷಿಸಬಹುದು ಮತ್ತು ಯಾವುದೇ ದಂಡನೆಯಿಲ್ಲದೆ ಪಾರಾಗಬಹುದು ಎಂಬ ಅರ್ಥವನ್ನು ನೀಡುತ್ತದೆ. ಇದನ್ನು ಪೂರ್ವನಿದರ್ಶನವಾಗಿ ಪರಿಗಣಿಸಿದರೆ ಫಲಿತಾಂಶವು ವಿನಾಶಕಾರಿಯಾಗುತ್ತದೆ ಎಂದು ವಾದಿಸಿದ್ದರು.

ಅರ್ಜಿದಾರನ ಪರವಾಗಿ ವಾದಿಸಿದ್ದ ಹಿರಿಯ ವಕೀಲ ಸಿದ್ಧಾರ್ಥ ಲುಥ್ರಾ ಅವರು,ಲೈಂಗಿಕ ಉದ್ದೇಶಕ್ಕೆ ದೈಹಿಕ ಸಂಪರ್ಕವು ಅಗತ್ಯವಾಗುತ್ತದೆ. ಆದರೆ ಈ ಪ್ರಕರಣದಲ್ಲಿ ಆರೋಪಿಯು ಬಾಲಕಿಯ ಬಟ್ಟೆಯನ್ನು ಸ್ಪರ್ಶಿಸಿದ್ದನೇ ಹೊರತು ಚರ್ಮವನ್ನಲ್ಲ ಎಂದು ವಾದಿಸಿದ್ದರು.

ವಿಚಾರಣೆ ಸಂದರ್ಭದಲ್ಲಿ ಸ್ಪರ್ಶದ ವ್ಯಾಖ್ಯಾನವನ್ನು ಪ್ರಶ್ನಿಸಿದ್ದ ಸರ್ವೋಚ್ಚ ನ್ಯಾಯಲಯವು,‘ಸ್ಪರ್ಶವೆಂದರೇನು,ಸುಮ್ಮನೆ ಮುಟ್ಟುವುದೇ? ನೀವು ಬಟ್ಟೆಯ ತುಂಡನ್ನೊಂದನ್ನು ಧರಿಸಿದ್ದರೂ ಅವರು ಬಟ್ಟೆಯನ್ನು ಸ್ಪರ್ಶಿಸಲು ಪ್ರಯತ್ನಿಸುವುದಿಲ್ಲ. ಸಂಸತ್ತು ಉದ್ದೇಶಿಸಿರುವಂತೆ ಸ್ಪರ್ಶವನ್ನು ನಾವು ನೋಡಬೇಕಾಗುತ್ತದೆ ’ ಎಂದು ಹೇಳಿತ್ತು.

‘ಶಾಸಕಾಂಗವು ತನ್ನ ಉದ್ದೇಶವನ್ನು ಸ್ಪಷ್ಟಪಡಿಸಿದೆ ಮತ್ತು ನ್ಯಾಯಾಲಯಗಳು ನಿಬಂಧನೆಯಲ್ಲಿ ಅಸ್ಪಷ್ಟತೆಯನ್ನು ಸೃಷ್ಟಿಸಬಾರದು ಎನ್ನುವುದನ್ನು ನಾವು ಎತ್ತಿ ಹಿಡಿದಿದ್ದೇವೆ. ಅಸ್ಪಷ್ಟತೆಯನ್ನು ಸೃಷ್ಟಿಸುವಲ್ಲಿ ನ್ಯಾಯಾಲಯಗಳು ಅತ್ಯುತ್ಸಾಹಿಗಳಾಗಬಾರದು ’ಎಂದು ಸರ್ವೋಚ್ಚ ನ್ಯಾಯಾಲಯವು ತನ್ನ ತೀರ್ಪಿನಲ್ಲಿ ಹೇಳಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X