Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಶಂಕರಪುರ ಮಲ್ಲಿಗೆ ಮಾರಾಟಕ್ಕೆ ಮೊಬೈಲ್...

ಶಂಕರಪುರ ಮಲ್ಲಿಗೆ ಮಾರಾಟಕ್ಕೆ ಮೊಬೈಲ್ ಆ್ಯಪ್ ಆವಿಷ್ಕಾರ

ವಾರ್ತಾಭಾರತಿವಾರ್ತಾಭಾರತಿ18 Nov 2021 9:13 PM IST
share
ಶಂಕರಪುರ ಮಲ್ಲಿಗೆ ಮಾರಾಟಕ್ಕೆ ಮೊಬೈಲ್ ಆ್ಯಪ್ ಆವಿಷ್ಕಾರ

ಉಡುಪಿ, ನ.18: ಬಂಟಕಲ್ಲಿನ ಶ್ರೀಮಧ್ವ ವಾದಿರಾಜ ತಾಂತ್ರಿಕ ವಿದ್ಯಾಲಯದ ಗಣಕ ಯಂತ್ರ ವಿಭಾಗದ ವಿದ್ಯಾರ್ಥಿಗಳು ಶಂಕರಪುರ ಮಲ್ಲಿಗೆ ಮಾರಾಟಕ್ಕೆ ಅನುಕೂಲವಾಗುವ ಮೊಬೈಲ್ ಆ್ಯಪ್ ಅನ್ನು ಅಭಿವೃದ್ಧಿ ಪಡಿಸಿದ್ದು ಇದರಿಂದ ಮಲ್ಲಿಗೆ ಖರೀದಿಸುವ ಗ್ರಾಹಕರಿಗೆ ಹಾಗೂ ಮಲ್ಲಿಗೆ ಬೆಳೆಗಾರರಿಗೆ ಅನುಕೂಲವಾಗಲಿದೆ.

ಪ್ರಸ್ತುತ ಮಾರುಕಟ್ಟೆಯಲ್ಲಿ ಮಲ್ಲಿಗೆಯ ದರ ವಿಪರೀತ ಹೆಚ್ಚಾಗಿದ್ದರೂ, ಅದರ ಬೆಳೆಗಾರರಿಗೆ ಹೆಚ್ಚಾದ ಬೆಲೆಯ ಲಾಭ ಸಿಗುತ್ತಿರಲಿಲ್ಲ. ಅದೇ ರೀತಿ ಅತ್ಯಧಿಕ ಬೆಲೆಗೆ ಮಲ್ಲಿಗೆಯನ್ನು ಕೊಂಡುಕೊಂಡ ಗ್ರಾಹಕನಿಗೆ ದರಕ್ಕೆ ಸೂಕ್ತವಾದ ಪ್ರಮಾಣದ ಮಲ್ಲಿಗೆ ಸಿಗುತ್ತಿರಲಿಲ್ಲ. (ಶಂಕರಪುರದಲ್ಲಿ ಸಿಗುವ ಒಂದು ಚೆಂಡು ಮಲ್ಲಿಗೆಯ ಪ್ರಮಾಣಕ್ಕಿಂತ ಇತರ ಸ್ಥಳಗಳಲ್ಲಿ ಸಿಗುವ ಒಂದು ಚೆಂಡು ಮಲ್ಲಿಗೆಯ ಪ್ರಮಾಣ ಕಡಿಮೆ ಎನ್ನುವುದು ಹೆಚ್ಚಿನ ಗ್ರಾಹಕರು ಅನುಭವಿಸಿರುವ ಕಟು ಸತ್ಯ)

ಮಲ್ಲಿಗೆ ಮಾರಾಟ ಪ್ರಕ್ರಿಯೆಯಲ್ಲಿ ಮಧ್ಯವರ್ತಿಗಳ ಪ್ರಭಾವದಿಂದ ಬೆಳೆಗಾರ ಹಾಗೂ ಗ್ರಾಹಕ ಇಬ್ಬರಿಗೂ ನಷ್ಟವಾಗುತ್ತಿತ್ತು. ಬಂಟಕಲ್‌ನ ವಿದ್ಯಾರ್ಥಿಗಳು ಅಭಿವೃದ್ಧಿ ಪಡಿಸಿರುವ ಈ ಆ್ಯಪ್ ಅನ್ನು ಕೃಷಿಕರೇ ನಿರ್ವಹಿಸಬಹುದಾಗಿದ್ದು, ಆಯ್ದ ಸ್ಥಳಗಳಲ್ಲಿ ಇವರೇ ಮಲ್ಲಿಗೆ ಮಾರಾಟ ಮಳಿಗೆಗಳನ್ನು ತೆರೆದು ಅಥವಾ ಪ್ರಸ್ತುತ ಇರುವ ಹೂ ಮಾರಾಟಗಾರರೊಂದಿಗೆ ಒಪ್ಪಂದ ಮಾಡಿಕೊಂಡಲ್ಲಿ, ಗ್ರಾಹಕನಿಗೆ ಸರಿಯಾದ ಪ್ರಮಾಣದ ಹೂವನ್ನು ಕೊಡಬಹುದು.

ಇದರಿಂದ ಕೊಟ್ಟ ಹಣಕ್ಕೆ ಸರಿಯಾದ ಪ್ರಮಾಣದ ಹೂವನ್ನು ಪಡೆದ ಸಂತೃಪ್ತಿ ಗ್ರಾಹಕನಿಗೆ ಸಿಕ್ಕಿದರೆ, ಬೆಳೆದ ಬೆಳೆಗೆ ಮಧ್ಯವರ್ತಿಗಳ ಹಾವಳಿ ಇಲ್ಲದೆ ಸೂಕ್ತ ಬೆಲೆ ಸಿಕ್ಕಿದ ಸಮಾಧಾನ ಮಲ್ಲಿಗೆ ಕೃಷಿಕರಿಗೆ ಸಿಗಲಿದೆ. ಅಲ್ಲದೇ, ಕೃಷಿಕರೇ ಮಾರಾಟ ಮಳಿಗೆಯನ್ನು ತೆರೆಯುವ ಮೂಲಕ, ಅಥವಾ ಗ್ರಾಹಕರ ಮನೆ ಬಾಗಿಲಿಗೆ ಹೂವನ್ನು ತಲುಪಿಸುವ ಮೂಲಕ ಸ್ವಉದ್ಯೋಗಕ್ಕೂ ಅವಕಾಶಗಳಿವೆ.

ಅಂತಿಮ ವರ್ಷದ ವಿದ್ಯಾರ್ಥಿಗಳಾದ ಅಭಿದೇವ್ ವಿ., ದೀಪಿತ್, ಜಿತೇಶ್ ಶೆಣೈ ಮತ್ತು ಮುಹಮ್ಮದ್ ಸಾಹಿಲ್ ಗಣಕಯಂತ್ರ ವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕ ವೇಣುಗೋಪಾಲ ರಾವ್ ಮಾರ್ಗದರ್ಶನದಲ್ಲಿ ಈ ಆ್ಯಪ್ ಅನ್ನು ಸಿದ್ಧಪಡಿಸಿದ್ದು ಇದರ ಮೂಲಕ ಕೇವಲ ಮಲ್ಲಿಗೆ ಮಾತ್ರವಲ್ಲದೆ, ಮಟ್ಟುಗುಳ್ಳವೇ ಮುಂತಾದ ಸ್ಥಳೀಯ ವಸ್ತುಗಳಿಗೂ ವಿಸ್ತರಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X