ಉಪ್ಪಿನಂಗಡಿ ಕಾಲೇಜು ಆವರಣದಲ್ಲಿ ವಿದ್ಯಾರ್ಥಿಗಳ ಮಧ್ಯೆ ಹೊಡೆದಾಟ; 5 ಮಂದಿ ಆಸ್ಪತ್ರೆಗೆ ದಾಖಲು

ಸಾಂದರ್ಭಿಕ ಚಿತ್ರ
ಉಪ್ಪಿನಂಗಡಿ: ಇಲ್ಲಿನ ಕಾಲೇಜು ಆವರಣದಲ್ಲಿ ವಿದ್ಯಾರ್ಥಿಗಳ 2 ತಂಡದ ಮಧ್ಯೆ ಹೊಡೆದಾಟ ನಡೆದಿದ್ದು, ಇತ್ತಂಡದ 5 ಮಂದಿ ಪುತ್ತೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ.
ಒಂದು ತಂಡದಿಂದ ಮೂವರು ವಿದ್ಯಾರ್ಥಿಗಳು ಮತ್ತು ಇನ್ನೊಂದು ತಂಡದಿಂದ ಇಬ್ಬರು ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ. ಆದರೆ ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಯಾವುದೇ ದೂರು ದಾಖಲಾಗಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
Next Story





