Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೃಷಿ ಕಾಯ್ದೆ ವಾಪಸ್: ದೇಶದ ಅನ್ನದಾತ,...

ಕೃಷಿ ಕಾಯ್ದೆ ವಾಪಸ್: ದೇಶದ ಅನ್ನದಾತ, ಕಾಂಗ್ರೆಸ್ ಹೋರಾಟಕ್ಕೆ ಸಿಕ್ಕ ಜಯ: ಡಿಕೆಶಿ

ವಾರ್ತಾಭಾರತಿವಾರ್ತಾಭಾರತಿ19 Nov 2021 12:26 PM IST
share
ಕೃಷಿ ಕಾಯ್ದೆ ವಾಪಸ್: ದೇಶದ ಅನ್ನದಾತ, ಕಾಂಗ್ರೆಸ್ ಹೋರಾಟಕ್ಕೆ ಸಿಕ್ಕ ಜಯ: ಡಿಕೆಶಿ

ಬೆಂಗಳೂರು, ನ.19: 'ದೇಶದ ಅನ್ನದಾತರ ಹೋರಾಟಕ್ಕೆ ಮಣಿದಿರುವ ಕೇಂದ್ರ ಸರ್ಕಾರ ಮೂರು ಕರಾಳ ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಾಪಸ್ ಪಡೆದಿದೆ. ಇದು ದೇಶದ ಅನ್ನದಾತ ಮತ್ತು ಕಾಂಗ್ರೆಸ್ ನ ಹೋರಾಟಕ್ಕೆ ಸಂದ ಚಾರಿತ್ರಿಕ ಜಯ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

'ಕೇಂದ್ರ ಸರ್ಕಾರ ತಿದ್ದುಪಡಿ ಮಾಡಿದ್ದ ಮೂರು ಕೃಷಿ ಕಾಯ್ದೆಗಳು ಎಪಿಎಂಸಿ ಮಾರುಕಟ್ಟೆಗೆ ಮಾರಕವಾಗಿದ್ದವು. ಬೆಂಬಲ ಬೆಲೆಗೆ ಕಾನೂನು ರಕ್ಷಣೆ ನೀಡಿರಲಿಲ್ಲ. ದೇಶದ ಕೃಷಿ ಕ್ಷೇತ್ರದಲ್ಲಿ ಖಾಸಗಿಯವರ ಪ್ರವೇಶ, ಒಪ್ಪಂದ ಕೃಷಿ ಸೇರಿದಂತೆ ಇತರೆ ಅಂಶಗಳು ರೈತರ ಭವಿಷ್ಯವನ್ನೇ ಸಮಾಧಿ ಮಾಡುತ್ತಿದ್ದವು. ಈ ಹಿನ್ನೆಲೆಯಲ್ಲಿ ದೇಶದ ಅನ್ನದಾತರು ಚಳಿ, ಮಳೆ, ಬಿಸಿಲೆನ್ನದೆ ಬೀದಿಗಿಳಿದು ಸುದೀರ್ಘ ಹೋರಾಟ ಮಾಡಿದ್ದರು. ಈ ಹೋರಾಟ ಹತ್ತಿಕ್ಕಲು ಸರ್ಕಾರ ಅಧಿಕಾರ, ಪೊಲೀಸ್ ಬಲ ಪ್ರಯೋಗಿಸಿತ್ತು. ಇದ್ಯಾವುದಕ್ಕೂ ಜಗ್ಗದ ರೈತರು ತಮ್ಮ ಭವಿಷ್ಯ ರಕ್ಷಣೆಗೆ ಬದ್ಧವಾಗಿ ನಿಂತರು.

ಈ ಹೋರಾಟದಲ್ಲಿ 600ಕ್ಕೂ ಹೆಚ್ಚು ರೈತರು ಪ್ರಾಣ ತ್ಯಾಗ ಮಾಡಿದ್ದು, ಕೇಂದ್ರ ಸರ್ಕಾರ ಇದೀಗ ಅನ್ನದಾತನ ಮುಂದೆ ಮಂಡಿಯೂರಿದೆ. ದೇಶದ ಅನ್ನದಾತನನ್ನು ಎದುರು ಹಾಕಿಕೊಂಡು ಉಳಿದವರಿಲ್ಲ. ಅಂದು ಬ್ರಿಟಿಷರು ರೈತರ ಮೇಲೆ ದಬ್ಬಾಳಿಕೆ ನಡೆಸಿ ದೇಶದಿಂದ ಕಾಲ್ಕಿತ್ತರು. ಇಂದು ಬಿಜೆಪಿ ಅದೇ ತಪ್ಪು ಮಾಡಿ ಬುದ್ಧಿ ಕಲಿತಿದೆ ಎಂದು ಶಿವಕುಮಾರ್ ಅವರು ಹೇಳಿದ್ದಾರೆ.

ಹೋರಾಟದಲ್ಲಿ ಭಾಗವಹಿಸಿದ ಪ್ರತಿಯೊಬ್ಬ ರೈತನೂ ದೇಶದ ರಕ್ಷಣೆಯಲ್ಲಿ ಯೋಧನಂತೆ ಕೆಲಸ ಮಾಡಿದ್ದಾರೆ. ಇದು ಸರ್ವಾಧಿಕಾರಿ ಧೋರಣೆ ವಿರುದ್ಧ ಪ್ರಜಾಪ್ರಭುತ್ವಕ್ಕೆ ಸಿಕ್ಕ ಗೆಲುವು. ದುಷ್ಟ ಮನಸ್ಥಿತಿ ವಿರುದ್ಧ ಸಿಕ್ಕ ಗೆಲುವು ಎಂದು ಶಿವಕುಮಾರ್  ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ರೈತರ ಹಿತದೃಷ್ಟಿಯಿಂದ ಕಾಂಗ್ರೆಸ್ ಕೂಡ ರೈತರ ಈ ಹೋರಾಟಕ್ಕೆ ಬೆಂಬಲ ಸೂಚಿಸಿತ್ತು. ಕಾಂಗ್ರೆಸ್ ಪಕ್ಷ ಸಂಸತ್ತಿನ ಉಭಯ ಸದನಗಳು, ರಾಜ್ಯ ವಿಧಾನ ಮಂಡಲಗಳಲ್ಲಿ ಈ ಕರಾಳ ಕೃಷಿ ಕಾಯ್ದೆ ವಿರುದ್ಧ ಹೋರಾಟ ಮಾಡಿತ್ತು. ಬೀದಿಗಿಳಿದು ಪ್ರತಿಭಟನೆ ಮಾಡಿತ್ತು. ಈ ಕರಾಳ ಕಾಯ್ದೆಯ ಹಿಂದೆ ಅಡಗಿರುವ ಕೇಂದ್ರ ಸರ್ಕಾರದ ಷಡ್ಯಂತ್ರವನ್ನು ಜನರಿಗೆ ತಿಳಿಸುವ ಪ್ರಯತ್ನ ಮಾಡಿದ್ದೆವು. ಕೇಂದ್ರ ಸರ್ಕಾರ ಇನ್ನುಮುಂದಾದರು ತನ್ನ ಸರ್ವಾಧಿಕಾರಿ ಮನಃಸ್ಥಿತಿಯಿಂದ ಹೊರಬಂದು ಏಕಪಕ್ಷೀಯ ನಿರ್ಧಾರ ಕೈಗೊಳ್ಳುವುದನ್ನು ನಿಲ್ಲಿಸಬೇಕು. ದೇಶ ಹಾಗೂ ಅನ್ನದಾತನ ಹಿತದೃಷ್ಟಿಯಿಂದ ಎಲ್ಲರ ಜತೆ ಚರ್ಚೆ ಮಾಡಬೇಕು ಎಂದು ಈ ಸಮಯದಲ್ಲಿ ಸರ್ಕಾರಕ್ಕೆ ಆಗ್ರಹಿಸುತ್ತೇನೆ' ಎಂದು ಹೇಳಿದ್ದಾರೆ.

ಕಾಂಗ್ರೆಸ್ ಎಂದೆಂದಿಗೂ ರೈತರು ಸೇರಿದಂತೆ ಎಲ್ಲ ವರ್ಗವರ ಜತೆಗೆ ಇರಲಿದೆ. ಅವರ ಹಿತಾಸಕ್ತಿಗೆ ಧಕ್ಕೆಯಾದರೆ ಹೋರಾಟ ಮಾಡಲಿದೆ ಎಂದೂ ಶಿವಕುಮಾರ್ ಅವರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X