ಎಲ್ಲಾ ಮಾದರಿಯ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದ ಎಬಿ ಡಿವಿಲಿಯರ್ಸ್

ಜೋಹಾನ್ಸ್ ಬರ್ಗ್: ದಕ್ಷಿಣ ಆಫ್ರಿಕಾದ ಸೂಪರ್‌ಸ್ಟಾರ್ ಎಬಿ ಡಿವಿಲಿಯರ್ಸ್ "ಎಲ್ಲಾ ಮಾದರಿಯ ಕ್ರಿಕೆಟ್‌ನಿಂದ" ನಿವೃತ್ತಿಯಾಗುವುದಾಗಿ ಟ್ವಿಟರ್ ನಲ್ಲಿ ಶುಕ್ರವಾರ ಘೋಷಿಸಿದ್ದಾರೆ.
37 ನೇ ವಯಸ್ಸಿನಲ್ಲಿ "ಜ್ವಾಲೆಯು ಇನ್ನು ಮುಂದೆ ಪ್ರಕಾಶಮಾನವಾಗಿ ಉರಿಯುವುದಿಲ್ಲ" ಎಂದು ಹೇಳಿದರು.
"ಇದು ನಂಬಲಾಗದ ಪ್ರಯಾಣವಾಗಿದೆ. ಆದರೆ ನಾನು ಎಲ್ಲಾ ಕ್ರಿಕೆಟ್‌ನಿಂದ ಹಿಂದೆ ಸರಿಯಲು ನಿರ್ಧರಿಸಿದ್ದೇನೆ. ನನ್ನ ಹಿರಿಯ ಸಹೋದರರೊಂದಿಗೆ ಶುದ್ಧ ಆನಂದ ಉತ್ಸಾಹದಿಂದ ಆಟವನ್ನು ಆಡಿದ್ದೇನೆ. ಈಗ 37 ನೇ ವಯಸ್ಸಿನಲ್ಲಿ ಜ್ವಾಲೆಯು ಇನ್ನು ಮುಂದೆ ಪ್ರಕಾಶಮಾನವಾಗಿ ಉರಿಯುವುದಿಲ್ಲ" ಎಂದು ದಕ್ಷಿಣ ಆಫ್ರಿಕಾದ ಆಟಗಾರ ಟ್ವೀಟ್ ಮಾಡಿದ್ದಾರೆ.
ಡಿವಿಲಿಯರ್ಸ್ ಅವರು ಅತ್ಯುತ್ತಮ ಬ್ಯಾಟರ್‌ಗಳಲ್ಲಿ ಒಬ್ಬರಾಗಿದ್ದರು. ಕೊನೆಯ ಬಾರಿಗೆ ಅಂತರಾಷ್ಟ್ರೀಯ ಪಂದ್ಯವನ್ನು ಎಪ್ರಿಲ್ 2018 ರಲ್ಲಿ ಜೋಹಾನ್ಸ್‌ಬರ್ಗ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಆಡಿದ್ದರು. ಫೆಬ್ರವರಿ 16, 2018 ರಂದು ಸೆಂಚುರಿಯನ್‌ನಲ್ಲಿ ಭಾರತದ ವಿರುದ್ಧ ದಕ್ಷಿಣ ಆಫ್ರಿಕಾಕ್ಕಾಗಿ ಅವರ ಕೊನೆಯ ಏಕದಿನ ಪಂದ್ಯವಾಡಿದ್ದರು. ಆದರೆ ಕೊನೆಯದಾಗಿ ಅಕ್ಟೋಬರ್ 29, 2017 ರಂದು ಟ್ವೆಂಟಿ-20 ಪಂದ್ಯವನ್ನು ಆಡಿದ್ದರು.