ಉಡುಪಿ; ಸದಾಶಿವ ಪ್ರಭು ವರ್ಗಾವಣೆ ಬಾಲಕೃಷ್ಣಪ್ಪ ಇ.ನೂತನ ಎಡಿಸಿ
ಉಡುಪಿ, ನ.19: ಕಳೆದ ಸುಮಾರು ಎರಡು ವರ್ಷಗಳಿಂದ ಉಡುಪಿ ಜಿಲ್ಲೆಯ ಅಪರ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತಿದ್ದ ಸದಾಶಿವ ಪ್ರಭು ಅವರನ್ನು ರಾಜ್ಯ ವಿಧಾನಪರಿಷತ್‌ನ ದ್ವೈವಾರ್ಷಿಕ ಚುನಾವಣೆಯ ಹಿನ್ನೆಲೆಯಲ್ಲಿ ದಾವಣಗೆರೆ ಜಿಲ್ಲೆಗೆ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.
ಪ್ರಭು ಅವರ ಸ್ಥಾನಕ್ಕೆ ಈಗ ಚಿತ್ರದುರ್ಗದ ಅಪರ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಹಿರಿಯ ಕೆಎಎಸ್ ಅಧಿಕಾರಿ ಬಾಲಕೃಷ್ಣಪ್ಪ ಇ. ಅವರು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.
Next Story





