ಕಲಬುರಗಿ: ಶ್ರೀಗುರುಲಿಂಗ ದೇವರ ಕಾರು ಢಿಕ್ಕಿ; ಇಬ್ಬರು ಪಾದಚಾರಿಗಳು ಸ್ಥಳದಲ್ಲೇ ಸಾವು

ಕಲಬುರಗಿ, ನ.19: ಯಲಗೋಡ ಮಠದ ಶ್ರೀಗುರುಲಿಂಗ ದೇವರು ಸಂಚರಿಸುತ್ತಿದ್ದ ಕಾರು ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿಗಳಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಲಬುರಗಿ ತಾಲೂಕಿನ ಫರ್ತಾಬಾದ್ ಬಳಿ ನಡೆದಿದೆ.
ಬೀದರ್-ಶ್ರೀರಂಗಪಟ್ಟಣ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಪಾದಚಾರಿಗಳಾದ ಶಿವಶರಣಪ್ಪ ಮತ್ತು ಗುಂಡಮ್ಮ ಎಂಬಿಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಯಲಗೋಡ ಗ್ರಾಮದಲ್ಲಿ ಸಾಗುತ್ತಿದ್ದಾಗ ಈ ಕಾರು ಪಾದಚಾರಿಗಳಿಗೆ ಢಿಕ್ಕಿ ಹೊಡೆದಿದ್ದು, ನಂತರ ಪಲ್ಟಿಯಾಗಿ ಬಿದ್ದಿದೆ. ಕಾರಿನಲ್ಲಿದ್ದ ಶ್ರೀಗಳು ಹಾಗೂ ಚಾಲಕನಿಗೆ ಗಾಯಗಳಾಗಿವೆ. ಸ್ಥಳಕ್ಕೆ ಸಂಚಾರ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

Next Story





