ಕೃಷಿ ತಿದ್ದುಪಡಿ ಕಾಯ್ದೆ ವಾಪಸ್ ವಿಚಾರ: ಪ್ರತಿಕ್ರಿಯೆ ನೀಡದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಮೈಸೂರು: ಕೃಷಿ ತಿದ್ದುಪಡಿ ಕಾಯ್ದೆ ರದ್ದು ಕುರಿತು ಮಾಧ್ಯಮದವರೊಂದಿಗೆ ಮಾತನಾಡಲು ಕೇಂದ್ರ ಕೃಷಿ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ನಿರಾಕರಿಸಿ ಮೌನಕ್ಕೆ ಶರಣಾದರು.
ನಗರದ ಬಿಜೆಪಿ ಕಚೇರಿಯಲ್ಲಿ ಶನಿವಾರ ಸಚಿವ ಕೆ.ಎಸ್.ಈಶ್ವರಪ್ಪ ಅವರ ಜೊತೆ ಜಂಟಿ ಪತ್ರಿಗಾಗೋಷ್ಠಿಯಲ್ಲಿ ಭಾಗವಹಿಸಿದ ಅವರು, ಮೂರು ಕೃಷಿ ತಿದ್ದುಪಡಿ ಕಾಯ್ದೆಗಳನ್ನು ಹಿಂಪಡೆದ ಕೇಂದ್ರಸರ್ಕಾರದ ನಿರ್ಧಾರದ ಬಗ್ಗೆ ಮಾತನಾಡದೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸದೆ ಸುಮ್ಮನೆ ಕುಳಿತರು.
ಮತ್ತಷ್ಟು ಪತ್ರಕರ್ತರಿಂದ ಪ್ರಶ್ನೆಗಳ ಸುರಿಮಳೆಗೈಯುತ್ತಿದ್ದಂತೆ ನಾನು ಮಾತನಾಡುವುದಿಲ್ಲ ಎಂದು ಸನ್ನೆ ಮಾಡಿ ಚಾಮರಾಜನಗರಕ್ಕೆ ತೆರಳಬೇಕಿದೆ ಎಂದು ಹೇಳಿ ಹೊರಟುಹೋದರು.
Next Story





