Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೋಮುದ್ವೇಷ ಹುಟ್ಟು ಹಾಕಿದ ಪ್ರಕರಣ;...

ಕೋಮುದ್ವೇಷ ಹುಟ್ಟು ಹಾಕಿದ ಪ್ರಕರಣ; ಶಿಕ್ಷಣ ಸಂಸ್ಥೆ ವಿರುದ್ಧ ಕ್ರಮಕ್ಕೆ ಮಕ್ಕಳ ಹಕ್ಕುಗಳ ಆಯೋಗ ನಿರ್ದೇಶನ

ವಾರ್ತಾಭಾರತಿವಾರ್ತಾಭಾರತಿ20 Nov 2021 7:11 PM IST
share
ಕೋಮುದ್ವೇಷ ಹುಟ್ಟು ಹಾಕಿದ ಪ್ರಕರಣ; ಶಿಕ್ಷಣ ಸಂಸ್ಥೆ ವಿರುದ್ಧ ಕ್ರಮಕ್ಕೆ ಮಕ್ಕಳ ಹಕ್ಕುಗಳ ಆಯೋಗ ನಿರ್ದೇಶನ

ಮಂಗಳೂರು, ನ.20: ಪುತ್ತೂರಿನ ಶಿಕ್ಷಣ ಸಂಸ್ಥೆಯೊಂದರಲ್ಲಿ ನೆರೆ ದೇಶದ ಧ್ವಜವನ್ನು ಮಕ್ಕಳ ಕೈಯಿಂದ ಸುಟ್ಟು ಹಾಕಿಸಿ ದ್ವೇಷ ಹುಟ್ಟು ಹಾಕುವ ಪ್ರಕರಣ ವರದಿಯಾಗಿರುವ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು, ಶಿಕ್ಷಣ ಸಂಸ್ಥೆಯ ವಿರುದ್ಧ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದೆ.

ಮಂಗಳೂರಿನಲ್ಲಿ ಶನಿವಾರ ಮಕ್ಕಳ ಹಕ್ಕುಗಳ ಮಾಸಾಚರಣೆ ಅಂಗವಾಗಿ ಕೋವಿಡ್- 19 ಅವಧಿಯಲ್ಲಿ ಮಕ್ಕಳ ಮೇಲಾಗಿರುವ ದುಷ್ಪರಿಣಾಮಗಳ ಕುರಿತು ಸಾರ್ವಜನಿಕ ಅಹವಾಲು ಸ್ವೀಕಾರ ಸಂದರ್ಭದಲ್ಲಿ ಈ ಕುರಿತು ಚರ್ಚೆ ನಡೆಯಿತು.

ಶಾಲೆಯ ಅಸೆಂಬ್ಲಿಯಲ್ಲಿ ಬೇರೆ ರಾಷ್ಟ್ರದ ವಿರುದ್ಧ ಘೋಷಣೆ, ಧ್ವಜ ಸುಟ್ಟಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ. ಮಕ್ಕಳನ್ನು ಇಂಥ ಕೃತ್ಯಕ್ಕೆ ಬಳಕೆ ಮಾಡಿರುವುದನ್ನು ಮಂಗಳೂರು ವಿಶೇಷ ಮಕ್ಕಳ ಪೊಲೀಸ್ ಅಧೀಕ್ಷಕರ ವ್ಯಾಪ್ತಿಯ ಹಿರಿಯ ಮಕ್ಕಳ ರಕ್ಷಣಾಧಿಕಾರಿ ಡಾ.ಗಾನ ಪಿ.ಕುಮಾರ್ ಗಮನ ಸೆಳೆದರು.

ಇದಕ್ಕುತ್ತರಿಸಿದ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಿ.ಶಂಕರಪ್ಪ, ಶಾಲೆ ಆವರಣದಲ್ಲಿ ಇಂಥ ಕೃತ್ಯ ನಡೆಸಿದವರ ಮೇಲೆ ಪ್ರಕರಣ ದಾಖಲಿಸಬೇಕು. ಶಾಲೆಗಳಲ್ಲಿ ಕೋಮುದ್ವೇಷ, ಕಾನೂನು ಸುವ್ಯವಸ್ಥೆ ಹದಗೆಡಲು ಅವಕಾಶ ಕೊಡಬಾರದು ಎಂದು ಪೊಲೀಸ್ ಇಲಾಖೆಗೆ ಸೂಚನೆ ನೀಡಿದರು.

ಪೊಲೀಸರು ಸಂಬಂಧಪಟ್ಟ ಶಾಲೆಗೆ ಭೇಟಿ ನೀಡಿ, ಯಾರು ಮಕ್ಕಳನ್ನು ಬಳಕೆ ಮಾಡಿದ್ದಾರೆ ಎಂಬುದನ್ನು ನೋಡಿ ಅಂಥವರ ವಿರುದ್ಧ ಎಫ್ಐಆರ್ ದಾಖಲಿಸಬೇಕು. ಶಿಕ್ಷಣ ಸಂಸ್ಥೆಗಳು ವಿದ್ಯಾ ಕೇಂದ್ರಗಳಾಗಬೇಕು. ಮಕ್ಕಳ ಮನ್ಸಸಿನಲ್ಲಿ ವಿಷ ಬೀಜ ಬಿತ್ತಬಾರದು. ಶಾಲೆಗಳು ದ್ವೇಷ ಬೆಳೆಸುವ ರಾಜಕೀಯ ವೇದಿಕೆಗಳಾಗಬಾರದು. ನಮ್ಮ ಅಧಿಕಾರಿಗಳು ಕ್ರಮ ಕೈಗೊಳ್ಳದಿದ್ದರೆ, ಅಧಿಕಾರಿಗಳನ್ನೂ ಸೇರಿಸಿ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಅವರ ಮೇಲೂ ಕ್ರಮ ಕೈಗೊಳ್ಳಬೇಕು ಎಂದು ಶಂಕರಪ್ಪ ಹೇಳಿದರು.

ಕೋವಿಡ್ ಲಾಕ್‌ಡೌನ್ ವೇಳೆ ಮಕ್ಕಳು ಅನುಭವಿಸಿದ ಸಮಸ್ಯೆಗಳನ್ನು ಮೂರು ಗುಂಪುಗಳ ಮೂಲಕ ಸಮೂಹ ಚರ್ಚೆ ನಡೆಸಿ, ಜಿಲ್ಲಾಮಟ್ಟದ ಅಧಿಕಾರಿಗಳ ಗಮನಕ್ಕೆ ತರಲಾಯಿತು. ಆನ್‌ಲೈನ್‌ನಲ್ಲಿ ಸರಿಯಾಗಿ ಪಾಠ ಕೇಳಲು ಸಾಧ್ಯವಾಗಿಲ್ಲ. ಮೊಬೈಲ್ ತೆಗೆಯಲು ಹಣ ಇರಲಿಲ್ಲ. ಮೊಬೈಲ್ ತೆಗೆದರೂ ಡಾಟಾ ಹಾಕಲು ಹಣ ಇರಲಿಲ್ಲ. ಶುಲ್ಕ ಕೊಟ್ಟಿಲ್ಲ ಎಂದು ಆನ್‌ಲೈನ್ ಪಾಠಕ್ಕೆ ಸೇರಿಸಿಲ್ಲ. ಹಿಂದಿನ ವರ್ಷ ಪಠ್ಯ ಕಡಿತ ಮಾಡಿದ್ದರಿಂದ ಈಗ ಪಾಠ ಅರ್ಥವಾಗುತ್ತಿಲ್ಲ ಎಂಬ ಹಲವು ದೂರುಗಳು ವಿದ್ಯಾರ್ಥಿಗಳಿಂದ ವ್ಯಕ್ತವಾಯಿತು.

ಪಂಜಿಮೊಗರು ಸರಕಾರಿ ಶಾಲೆಯ ಮುಖ್ಯ ಶಿಕ್ಷಕರು ವಿದ್ಯಾರ್ಥಿಗಳನ್ನು ಹೀಯಾಳಿಸಿ ಅವಮಾನ ಮಾಡುತ್ತಾರೆ. ಶಾಲೆಯಲ್ಲಿ ಕಲಿಯುವ ವಾತಾವರಣ ಇಲ್ಲ ಎಂದು ವಿದ್ಯಾರ್ಥಿನಿ ದೂರಿದಾಗ, ಯಾವ ಕಾರಣಕ್ಕೂ ಈ ವಿದ್ಯಾರ್ಥಿನಿ ಮತ್ತೆ ದೂರು ಪುನರಾವರ್ತಿಸಬಾರದು ಹಾಗೂ ಆಕೆಯ ಶಿಕ್ಷಣಕ್ಕೆ ಯಾವುದೇ ತೊಂದರೆಯಾಗಬಾರದು. ನಾವು ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಶಂಕರಪ್ಪ ಹೇಳಿದರು.

ಪುತ್ತೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಕಟ್ಟಡ ಶಿಥಿಲಾವಸ್ಥೆಯಲ್ಲಿದೆ. ಕುಳಿತುಕೊಳ್ಳಲು ಬೆಂಚು ಸರಿ ಇಲ್ಲ. ಶೌಚಾಲಯವಿದ್ದರೂ ಬಳಕೆ ಮಾಡಲು ಬಿಡುತ್ತಿಲ್ಲ. ಕುಡಿಯಲು ನೀರಿನ ವ್ಯವಸ್ಥೆ ಇಲ್ಲ ಎಂದು ವಿದ್ಯಾರ್ಥಿನಿ ದೂರಿದಾಗ, ಇದನ್ನು ಗಂಭೀರವಾಗಿ ಪರಿಗಣಿಸಲು ಪಿಯು ಡಿಡಿಗೆ ಸೂಚನೆ ನೀಡಲಾಯಿತು.

ವಿಟ್ಲ ಅನುದಾನಿತ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಯೊಬ್ಬನಿಗೆ ಪ್ರವೇಶ ನಿರಾಕರಣೆ ಬಗ್ಗೆ ಆತ ದೂರಿದಾಗ, ಈಗ ಪ್ರವೇಶದ ಸಮಯ ಮೀರಿದೆ. ಪಿಯು ಇಲಾಖೆ ನಿರ್ದೇಶಕರ ವಿಶೇಷ ಅನುಮತಿ ಪಡೆದುಕೊಂಡು ದಾಖಲಾತಿಗೆ ಅವಕಾಶ ಕೊಡಿಸಬೇಕು. ವಿದ್ಯಾರ್ಥಿಯ ಕಲಿಕೆಗೆ ಅಡ್ಡಿ ಮಾಡಬಾರದು ಎಂದು ಪಿಯು ಉಪನಿರ್ದೇಶಕರಿಗೆ ಶಂಕರಪ್ಪ ಸೂಚನೆ ನೀಡಿದರು.

ಶಿಕ್ಷಣ ಇಲಾಖೆ ಉಪನಿರ್ದೇಶಕ ಮಲ್ಲೇಸ್ವಾಮಿ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ರೆನ್ನಿ ಡಿಸೋಜ, ಕಾರ್ಮಿಕ ಇಲಾಖೆ ಸಹಾಯಕ ಆಯುಕ್ತ ಶಿವಕುಮಾರ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಂಜುಳಾ ಜಿ. ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X