ಎಂವಿಎ ಪ್ರವೇಶಕ್ಕೆ ನ.23ರಂದು ಅರ್ಹತಾ ಪರೀಕ್ಷೆ
ಉಡುಪಿ, ನ.20: ಪ್ರಸಕ್ತ ಸಾಲಿನಲ್ಲಿ ಮೈಸೂರಿನ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜಿನಲ್ಲಿ ಮಾಸ್ಟರ್ ಆಫ್ ವಿಜ್ಯುಯಲ್ ಆರ್ಟ್ಸ್ (ಎಂವಿಎ) ಪ್ರಥಮ ಸ್ನಾತಕೋತ್ತರ ಪದವಿ ಪ್ರವೇಶಕ್ಕೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ನವೆಂಬರ್ 23ರಂದು ಬೆಳಗ್ಗೆ 11 ಗಂಟೆಗೆ ಅರ್ಹತಾ ಪರೀಕ್ಷೆ ಹಾಗೂ ಅಪರಾಹ್ನ 2 ಗಂಟೆಗೆ ವೈಯಕ್ತಿಕ ಸಂದರ್ಶನ ನಡೆಯಲಿದೆ.
ಹೆಚ್ಚಿನ ಮಾಹಿತಿಗಾಗಿ ರಾಜ್ಯ ಸರಕಾರದ ವೆಬ್‌ಸೈಟ್-http://www.mysore.nic.in, http://www.cavamysore.karnataka.gov.in - ಅಥವಾ ಕಾರ್ಯಾಲಯದ ದೂರವಾಣಿ ಸಂಖ್ಯೆ:0821-2438931ನ್ನು ಸಂಪರ್ಕಿಸುವಂತೆ ಕಾಲೇಜಿನ ಪ್ರಕಟಣೆ ತಿಳಿಸಿದೆ.
Next Story





