Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಾಮಾನ್ಯ ಕನ್ನಡಿಗನಿಗೆ ಆರ್ಥಿಕ ಸಬಲತೆ...

ಸಾಮಾನ್ಯ ಕನ್ನಡಿಗನಿಗೆ ಆರ್ಥಿಕ ಸಬಲತೆ ನೀಡುವುದು ಇಂದಿನ ಅಗತ್ಯ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ20 Nov 2021 10:45 PM IST
share
ಸಾಮಾನ್ಯ ಕನ್ನಡಿಗನಿಗೆ ಆರ್ಥಿಕ ಸಬಲತೆ ನೀಡುವುದು ಇಂದಿನ ಅಗತ್ಯ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು, ನ. 20: ಸಾಮಾನ್ಯ ಕನ್ನಡಿಗನಿಗೆ ಆರ್ಥಿಕ ಸಬಲತೆ ನೀಡುವುದು ಇಂದಿನ ಅಗತ್ಯ. ಆರ್ಥಿಕವಾಗಿ ಸಬಲವಾದ ಕುಟುಂಬ ಭಾಷೆಯ ಬೆಳವಣಿಗೆಗೆ ಪೂರಕವಾಗಿ ಶ್ರಮಿಸಬಹುದು ಎಂಬ ಆಶಯವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ವ್ಯಕ್ತಪಡಿಸಿದರು. 

ಅಮೆರಿಕದ ವಾಷಿಂಗ್ಟನ್‍ನ ಸಿಯಾಚಿನ್‍ನಲ್ಲಿ ಅಮೇರಿಕ ಕನ್ನಡ ಕೂಟಗಳ ಆಗರ (ಅಕ್ಕ) ವಚ್ರ್ಯುವಲ್ ಆಗಿ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮವನ್ನು ಬೆಂಗಳೂರಿನ ತಮ್ಮ ನಿವಾಸದಲ್ಲಿಂದು ಉದ್ಘಾಟಿಸಿ ಮಾತನಾಡಿದರು.

ಕನ್ನಡಿಗರಿಗೆ ಉದ್ಯಮದಲ್ಲಿ ಅವಕಾಶ ನೀಡಲು ಆದ್ಯತೆ: ಸಾಮಾನ್ಯ ಕನ್ನಡಿಗನೂ ಸೇರಿದಂತೆ ರಾಜ್ಯದಲ್ಲಿನ ಎಲ್ಲ ಕನ್ನಡ ಕುಟುಂಬಗಳು ಆರ್ಥಿಕ ಸಬಲತೆ ಹೊಂದಬೇಕೆಂಬುದು ನಮ್ಮ ಆಶಯ. ಕನ್ನಡಿಗರಿಗೆ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸಲು ಪೂರಕವಾಗಿ ಶಿಕ್ಷಣ ಮತ್ತು ಕೌಶಲ್ಯ ತರಬೇತಿಯನ್ನು ಕನ್ನಡದಲ್ಲಿ ನೀಡುವ ಪ್ರಯತ್ನ ಮಾಡಲಾಗುತ್ತಿದೆ. ಇದಕ್ಕೆ ಹಲವಾರು ತೊಂದರೆಗಳಿದ್ದರೂ ಅದನ್ನು ಎದುರಿಸಲು ಸರಕಾರ ಸಿದ್ಧವಾಗಿದೆ. ಉದ್ಯೋಗದಲ್ಲಿ ಕನ್ನಡಿಗರಿಗೆ ಆದ್ಯತೆ ನೀಡಬೇಕೆಂಬ ಬಗ್ಗೆ ಅಗತ್ಯ ಕಾನೂನುಗಳಿದ್ದು ಅದನ್ನು ಅಕ್ಷರಶಃ ಪಾಲನೆ ಮಾಡಲಾಗುವುದು ಎಂದರು.  

ಕರ್ನಾಟಕದಲ್ಲಿ ಹೂಡಿಕೆಗೆ ಅವಕಾಶಗಳನ್ನು ತೆರೆಯಬೇಕು: ಕನ್ನಡ ನಾಡಿನ ಅಭಿವೃದ್ಧಿಗೆ  ಅಮೆರಿಕದ ಕನ್ನಡಿಗರು  ರಾಯಭಾರಿಗಳು.  ಕನ್ನಡಿಗರಿಗೆ ಪರಿಣಿತಿ ಮತ್ತು ಯೋಗ್ಯತೆ ಇದೆ.  ಆದರೆ ಅವರಿಗೆ ಅವಕಾಶಗಳು ಬೇಕು. ಭಾರತದ ಆಚೆಯೂ ಕನ್ನಡಿಗರು  ಯಶಸ್ವಿಯಾಗಿದ್ದಾರೆ. ವಿದೇಶದಲ್ಲಿ ಕನ್ನಡಿಗರು ಹೆಮ್ಮೆಪಡುವಂತೆ ಕನ್ನಡಿಗರು ನಡೆದುಕೊಳ್ಳುತ್ತಾರೆ. ತಮ್ಮ ಅನುಭವದ ಮಾತುಗಳಿಗೆ ಬಹಳ ಬೆಲೆಯಿರುವುದರಿಂದ  ಅಲ್ಲಿಯ ಉದ್ಯಮಗಳ ಜೊತೆಗೆ ಮಾತನಾಡಿ  ಕರ್ನಾಟಕದ ಔದ್ಯೋಗಿಕ ವಾತಾವರಣದ ಬಗ್ಗೆ ತಿಳಿಸಿ ಹೂಡಿಕೆಗೆ ಅವಕಾಶಗಳನ್ನು ತೆರೆಯಬೇಕು ಎಂದರು. ಅದಕ್ಕೆ ಬೆಂಬಲವಾಗಿ ಕರ್ನಾಟಕ ಸರಕಾರವಿದೆ.  ಅಲ್ಲಿನ ಸರಕಾರದಲ್ಲಿಯೂ ಪ್ರಮುಖ ಹುದ್ದೆಗಳನ್ನು ಕನ್ನಡಿಗರು ಪಡೆಯುವಂತಾಗಲಿ ಎಂದು ಆಶಿಸಿದರು. 

ಕನ್ನಡಿಗರಿಗಾಗಿ ಕನ್ನಡ ನಾಡು: ರಾಜ್ಯೋತ್ಸವ ಕನ್ನಡಿಗರಿಗೆ ಕನ್ನಡ ನಾಡು ಬೇಕೆಂಬ ಕೂಗಿಗೆ ಮನ್ನಣೆ ದೊರೆತ ದಿನ. ವಿವಿಧ ಭಾಗಗಳಲ್ಲಿ ಹರಿದುಹೋಗಿದ್ದ ಪ್ರಾಂತ್ಯಗಳನ್ನು ಒಂದುಗೂಡಿಸಿ ಕನ್ನಡ ಭಾಷಿಕರನ್ನು ಒಂದೆಡೆ ತಂದು ಅವರ ಭವಿಷ್ಯ ನಿರ್ಮಾಣಕ್ಕೆ ಅವಕಾಶ ಕನ್ನಡ ನಾಡಿನ ಸ್ಥಾಪನೆಯಿಂದ ಆಗಿದೆ. ಕನ್ನಡ ಅತ್ಯಂತ ಪುರಾತನ ಭಾಷೆ. ಭಾರತ ದೇಶದಲ್ಲಿ ವಿಂಧ್ಯಾ ಕೆಳಗೆ ಇರುವ ಎಲ್ಲಾ ಭಾಷೆಗಳ ಪೈಕಿ ಕನ್ನಡ ಅತ್ಯಂತ ಹಿರಿಯ ಭಾಷೆ. ತಮಿಳಿಗಿಂತ ಮುನ್ನ ಕನ್ನಡ ಅಸ್ತಿತ್ವದಲ್ಲಿತ್ತು ಎನ್ನಲು ಸಾಕಷ್ಟು ಪುರಾವೆಗಳಿವೆ. ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನವೂ ದೊರೆತಿದೆ. ಇಂಥ ಭಾಷೆಯನ್ನು ನಮ್ಮ ಕವಿಗಳು, ಬರಹಗಾರರು, ಸಾಹಿತಿಗಳು ಇಷ್ಟು ವರ್ಷ ಶ್ರೀಮಂತಗೊಳಿಸಿದ್ದಾರೆ. ಪ್ರತಿಯೊಬ್ಬರೂ ತಮ್ಮ ಭಾಷೆಯಿಂದ  ಕನ್ನಡದ ವಿವಿಧ ಆಯಾಮಗಳ ಬಗ್ಗೆ ಬಹಳ ಉತ್ಕøಷ್ಟವಾದಂಥ ಲೇಖನ ಸಾಹಿತ್ಯ ನೀಡಿ ಕನ್ನಡದ ಪರಂಪರೆಯನ್ನು ಇಂದಿಗೂ ಶ್ರೀಮಂತವಾಗಿರಿಸಿದ್ದಾರೆ. ಹರಿಹರ ರಾಘವಾಂಕ, ನೃಪತುಂಗನಿಂದ ಪ್ರಾರಂಭವಾಗಿ ಹಳೆಗನ್ನಡದ ಎಲ್ಲಾ ಸಾಹಿತ್ಯ, ಪುರಾಣಕಾರರು, ಸೃಜನಶೀಲ ಸಾಹಿತ್ಯ, ಬಂಡಾಯ ಸಾಹಿತ್ಯ, ಎಲ್ಲವೂ ಕನ್ನಡದ ಬೆಳೆವಣಿಗೆಗೆ ದೊಡ್ಡ ಕೊಡುಗೆ ನೀಡಿದ್ದಾರೆ ಎನ್ನುವುದನ್ನು ಮರೆಯುವಂತಿಲ್ಲ. ನಮ್ಮ ಮಕ್ಕಳಿಗೆ ಇದನ್ನು ತಿಳಿಸುವ ಕೆಲಸ ಮಾಡುವುದು ನಮ್ಮ ಕರ್ತವ್ಯವಾಗಿದೆ ಎಂದರು. 

ಕನ್ನಡ ರಾಜ್ಯೋತ್ಸವವು ನಿತ್ಯೋತ್ಸವ ಜನೋತ್ಸವವಾಗಬೇಕು: ರಾಜ್ಯೋತ್ಸವ ಜನೋತ್ಸವವಾಗಬೇಕು ಎಂದು ಕರೆ ನೀಡಿದ ಮುಖ್ಯಮಂತ್ರಿಗಳು, ಇಂದಿನ ಜಾಗತೀಕರಣ, ಖಾಸಗೀಕರಣ ಮತ್ತು ಉದಾರೀಕರಣದ ನಡುವೆ ಅಂತ:ಕರಣದ ಅಗತ್ಯವಿದೆ. ಅಕ್ಕ ಮತ್ತು ಇತರೆ ಕನ್ನಡದ ಸಂಸ್ಥೆಗಳಿಂದ ಪ್ರೀತಿ, ವಿಶ್ವಾಸ ಮತ್ತು ಅಂತ:ಕರಣವನ್ನು ನಾವು ಕಾಣುತ್ತಿದ್ದೇವೆ. 

ಅಕ್ಕ ಕನ್ನಡಿಗರ ಅಸ್ಮಿತೆ: ಅಮೆರಿಕದಲ್ಲಿ ವಿವಿಧ ವೃತ್ತಿಯನ್ನು ಅರಸಿ ಹೋದ ಕನ್ನಡಿಗರನ್ನು ಒಂದುದೂಡಿಸಿ ಕನ್ನಡದ ಭಾವನೆಗಳಿಗೆ ಸ್ಪಂದಿಸಿ, ಜೀವಂತವಾಗಿಡುವ ಕೆಲಸ ಮಾಡಿದ್ದಾರೆ. ಕನ್ನಡ ಹೆಮ್ಮೆಯಿಂದ ಅಮೆರಿಕೆಯಲ್ಲಿ ತಲೆ ಎತ್ತಿ ನಿಲ್ಲುವಂತೆ ಹಾಗೂ ಪ್ರಬಲ, ಭಾಷೆ ಮತ್ತು ಜನಾಂಗವನ್ನಾಗಿ ಅಕ್ಕ ಬೆಳೆಸಿದೆ ಎಂದರು. 

ಅಕ್ಕ ಸಂಸ್ಥೆ ಕಟ್ಟಿ ಬೆಳೆಸಿದ ಎಲ್ಲರಿಗೂ ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ತಮ್ಮ ಕೃತಜ್ಞತೆಗಳನ್ನು ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಉಡುಪಿ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಗಳು ಆಶೀರ್ವಚನ ನೀಡಿದರು. ಐಟಿ ಬಿಟಿ, ಉನ್ನತ ಶಿಕ್ಷಣ, ಕೌಶಲಾಭಿವೃದ್ಧಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ. ಅಶ್ವತ್ ನಾರಾಯಣ್, ಇಂಧನ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್, ಅಮೆರಿಕ ಕನ್ನಡ ಒಕ್ಕೂಟಗಳ ಆಗರ (ಅಕ್ಕ) ಅಧ್ಯಕ್ಷ ತುಮಕೂರು ದಯಾನಂದ್, ಉಪಾಧ್ಯಕ್ಷ ಡಾ. ಅಮರನಾಥ್ ತಾವರೆಕೆರೆ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X