ಕನ್ನಡ ಸಾಹಿತ್ಯ ಪರಿಷತ್ ರಾಜ್ಯ, ಜಿಲ್ಲಾಧ್ಯಕ್ಷ ಸ್ಥಾನಕ್ಕಾಗಿ ಚುನಾವಣೆ: ಮತದಾನ ಆರಂಭ

ಮಂಗಳೂರು, ನ.21: ಕನ್ನಡ ಸಾಹಿತ್ಯ ಪರಿಷತ್‌ನ ರಾಜ್ಯ ಮತ್ತು ಜಿಲ್ಲಾಧ್ಯಕ್ಷರ ಸ್ಥಾನಕ್ಕಾಗಿ ನಡೆಯುವ ಚುನಾವಣೆಯ ಮತದಾನವು ರವಿವಾರ ಆರಂಭಗೊಂಡಿತು.
ನಗರದ ಮಿನಿ ವಿಧಾನಸೌಧದ ಮತದಾನ ಕೇಂದ್ರದಲ್ಲಿ ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ನಿಕಟಪೂರ್ವ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಮತ್ತಿತರರು ಮತದಾನ ಚಲಾಯಿಸಿದರು.
ದ.ಕ. ಜಿಲ್ಲೆಯ ತಾಲ್ಲೂಕು ಕೇಂದ್ರಗಳಲ್ಲೂ ಮತದಾನ ಆರಂಭಗೊಂಡಿದೆ.

















