Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನ.22ರಿಂದ ಉಡುಪಿ ಜಿಲ್ಲೆಯಾದ್ಯಂತ ಲಸಿಕಾ...

ನ.22ರಿಂದ ಉಡುಪಿ ಜಿಲ್ಲೆಯಾದ್ಯಂತ ಲಸಿಕಾ ಮಿತ್ರರು ಮನೆಮನೆ ಭೇಟಿ

ಕೋವಿಡ್ ಲಸಿಕೆಯಲ್ಲಿ ಶೇ.100 ಗುರಿ ಸಾಧಿಸಲು ಯೋಜನೆ

ವಾರ್ತಾಭಾರತಿವಾರ್ತಾಭಾರತಿ21 Nov 2021 7:43 PM IST
share
ನ.22ರಿಂದ ಉಡುಪಿ ಜಿಲ್ಲೆಯಾದ್ಯಂತ ಲಸಿಕಾ ಮಿತ್ರರು ಮನೆಮನೆ ಭೇಟಿ

ಉಡುಪಿ, ನ. 21: ಉಡುಪಿ ಜಿಲ್ಲೆಯಲ್ಲಿ 18ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ನೀಡಲು 9,99,000 ಗುರಿ ನಿಗಧಿಪಡಿಸಿದ್ದು, ಈವರೆಗೆ ಒಂದನೇ ಡೋಸ್ ಲಸಿಕೆಯನ್ನು 9,24,639(ಶೇ.92.56) ಮಂದಿಗೆ ಮತ್ತು ಎರಡನೇ ಡೋಸ್ ಲಸಿಕೆಯನ್ನು 6,11,569 (ಶೇ.61.22) ಮಂದಿಗೆ ನೀಡಲಾಗಿದೆ.

ಕೋವಿಡ್ ಸಂಭಾವ್ಯ 3ನೇ ಅಲೆಯಲ್ಲಿ ಮಕ್ಕಳಿಗೆ ಹೆಚ್ಚು ಪರಿಣಾಮ ಉಂಟಾಗುವ ಸಾಧ್ಯತೆ ಇದ್ದು, 18ವರ್ಷ ಮೇಲ್ಪಟ್ಟವರಲ್ಲಿ ಲಸಿಕೆ ಪಡೆಯದವ ರಿಗೆ ಕೋವಿಡ್ ಕಾಯಿಲೆ ಬರುವ ಸಾಧ್ಯತೆ ಹೆಚ್ಚಾಗಿದೆ. ಈ ಎರಡನ್ನೂ ತಡೆ ಗಟ್ಟಲು 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡುವ ಉದ್ದೇಶದಿಂದ ಲಸಿಕಾ ಮಿತ್ರರು ನ.22ರಿಂದ 30ರವರಗೆ ಜಿಲ್ಲೆಯ ಪ್ರತೀ ಮನೆಗಳನ್ನು ಭೇಟಿ ನೀಡಲಾಗುತ್ತದೆ. ಈ ಮೂಲಕ ಲಸಿಕೆ ಪಡೆದಿರುವ ಮತ್ತು ಪಡೆಯದಿರುವವರ ಬಗ್ಗೆ ಪರಿಶೀಲನೆ ನಡೆಸಲಾಗುತ್ತದೆ. ಲಸಿಕೆ ಪಡೆಯದವರಿಗೆ ಲಸಿಕೆ ನೀಡುವುದ ರೊಂದಿಗೆ ಶೇ.100 ಗುರಿ ಸಾಧಿಸಲು ಯೋಜನೆ ರೂಪಿಸಲಾಗಿದೆ.

ಸಮೀಕ್ಷೆಗೆ ಮತದಾರರ ಪಟ್ಟಿ ಬಳಕೆ

ಜಿಲ್ಲೆಯ ಮತದಾರರ ಪಟ್ಟಿಯನ್ನು ಬಳಸಿ ಪ್ರತಿ ಮನೆ ಸಮೀಕ್ಷೆ ಮಾಡಿ ಮನೆಯಲ್ಲಿರುವ 18 ವರ್ಷ ಮೇಲ್ಪಟ್ಟವರಲ್ಲಿ 2 ಡೋಸ್ ಲಸಿಕೆ ಪಡೆದ ಬಗ್ಗೆ ಖಚಿತಪಡಿಸಿಕೊಳ್ಳಲಾಗುತ್ತದೆ. ಪಟ್ಟಿಯಲ್ಲಿರುವ ಪ್ರತಿ ವ್ಯಕ್ತಿಯ ಹೆಸರಿನ ಪಕ್ಕದಲ್ಲಿ ಸೂಕ್ತ ಗುರುತು ಹಾಕಿಕೊಳ್ಳಲಾಗುವುದು. ಲಸಿಕೆ ಪಡೆಯಲು ನಿರಾಕರಣೆ ಇದ್ದಲ್ಲಿ ಅವರ ಹೆಸರಿನ ಮುಂದೆ ನಿರಾಕರಣೆ ನಮೂದಿಸಿ, ಮೊಬೈಲ್ ಸಂಖ್ಯೆ ದಾಖಲಿಸಲಾಗುವುದು.

ಮತದಾರರ ಪಟ್ಟಿಯಲ್ಲಿರುವವರು ಮರಣ ಹೊಂದಿದ್ದಲ್ಲಿ ಹೆಸರಿನ ಮುಂದೆ ಮರಣ ಎಂದು ಹಾಗೂ ಮತದಾರ ಪಟ್ಟಿಯಲ್ಲಿರು ವವರು ಹೊರ ಜಿಲ್ಲೆ/ರಾಜ್ಯದಲ್ಲಿ ನೆಲೆಸಿದ್ದರೆ ಅವರ ಹೆಸರಿನ ಮುಂದೆ ಹೊರಜಿಲ್ಲೆ ನಮೂದಿಸಿ ಮೊಬೈಲ್ ಸಂಖ್ಯೆ ದಾಖಲಿಸಲಾಗು ವುದು. ಮನೆಯಲ್ಲಿರುವವರಲ್ಲಿ 18 ವರ್ಷ ಮೇಲ್ಪಟ್ಟವರ ಹೆಸರು ಪಟ್ಟಿಯಲ್ಲಿ ಇಲ್ಲದಿದ್ದಲ್ಲಿ ಕುಟುಂಬದ ಸದಸ್ಯರ ಪಕ್ಕದಲ್ಲಿ ಹೊಸದಾಗಿ ಹೆಸರು ನಮೂದಿಸಿ ಲಸಿಕೆ ಪಡೆದ ಬಗ್ಗೆ ದಾಖಲಿಸಲಾಗುವುದು.

ಪ್ರತಿ ಪಂಚಾಯತ್‌ನಲ್ಲಿ ವಾರದಲ್ಲಿ 1 ದಿನ ಬೆಳಿಗ್ಗೆ 7ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಮತ್ತು ಇನ್ನೊಂದು ವಾರದಲ್ಲಿ ಮಧ್ಯಾಹ್ನ 12 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಲಸಿಕಾ ಶಿಬಿರ ಏರ್ಪಡಿಸಿ ಕೂಲಿ ಕಾರ್ಮಿಕರು ಲಸಿಕೆ ಪಡೆಯಲು ಯೋಜನೆ ರೂಪಿಸಲಾಗಿದೆ.

ಮನೆ ಭೇಟಿಗೆ ತಂಡ ರಚನೆ

ಆಶಾ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಬಿ.ಎಲ್.ಒರವರನ್ನು ಒಳಗೊಂಡ ತಂಡಗಳನ್ನು ರಚಿಸಿಕೊಂಡು ಪಂಚಾಯತ್ ವ್ಯಾಪ್ತಿಯಲ್ಲಿರುವ ಎಲ್ಲಾ ಮನೆಗಳಿಗೆ ಭೇಟಿ ನೀಡಿ ಪ್ರಥಮ ಡೋಸ್ ಕೋವಿಡ್ ಲಸಿಕೆ ಪಡೆಯದವರನ್ನು ಮತ್ತು ಪ್ರಥಮ ಡೋಸ್ ಕೋವಿಶೀಲ್ಡ್ ಲಸಿಕೆ ಪಡೆದು 84 ದಿನ ದಾಟಿದವರಲ್ಲಿ ಹಾಗೂ ಪ್ರಥಮ ಡೋಸ್ ಕೋವ್ಯಾಕ್ಸಿನ್ ಲಸಿಕೆ ಪಡೆದು 28 ದಿನ ದಾಟಿದವರಲ್ಲಿ 2ನೇ ಡೋಸ್ ಪಡೆಯದವರನ್ನು ಪತೆತಿ ಹಚ್ಚಲಾಗುವುದು.

ಪಂಚಾಯತ್ ವ್ಯಾಪ್ತಿಯಲ್ಲಿ ಲಸಿಕಾ ಶಿಬಿರ ಏರ್ಪಡಿಸಿ ಲಸಿಕೆ ಪಡೆಯದವ ರನ್ನು ಮೊಬಿಲೈಸ್ ಮಾಡಿ ಶೇ.100 ಲಸಿಕಾ ಸಾಧನೆ ಮಾಡಲು ಗ್ರಾಪಂ ಮಟ್ಟದಲ್ಲಿ ಮೇಲ್ವಿಚಾರಣೆ ಮಾಡಲು ತಾಲೂಕು ಮಟ್ಟದ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಲಸಿಕೆ ಪಡೆಯಲು ನಿರಾಕರಣೆ ಜಾಸಿತಿ ಇರುವ ಪ್ರದೇಶಗಳಿಗೆ ಭೇಟಿ ನೀಡಿ ಜನರನ್ನು ಮನವೊಲಿಸಿ ಲಸಿಕೆ ಪಡೆಯುವಂತೆ ಮಾಡಲಾಗುವುದು.

80 ವರ್ಷ ಮೇಲ್ಪಟ್ಟವರಲ್ಲಿ ಲಸಿಕಾ ಕೇಂದ್ರಕ್ಕೆ ಬರಲು ಅಶಕತಿರಾದವರಿಗೆ ಮನೆಗೆ ಭೇಟಿ ನೀಡಿ ಲಸಿಕೆ ನೀಡಲು ಹಾಗೂ ಗರ್ಭಿಣಿಯರು ಮತುತಿ ಬಾಣಂತಿಯರು ಕೋವಿಡ್ ಲಸಿಕೆ ಪಡೆಯುವಂತೆ ಪ್ರಸೂತಿ ತಜ್ಞರ ಮೂಲಕ ಅರಿವು ಮೂಡಿಸಲಾಗುವುದು. ಲಸಿಕಾ ಕೇಂದ್ರದಲ್ಲಿ ಲಸಿಕೆ ಪಡೆಯುವವರಿಗೆ ಕೋವಿಡ್ ಸ್ವಾಬ್ ಪರೀಕ್ಷೆ ಮಾಡದಂತೆ ಈಗಾಗಲೇ ಸೂಚಿಸಲಾಗಿದೆ.

''ಜಿಲ್ಲೆಯಲ್ಲಿ ಲಸಿಕಾ ಮಿತ್ರರ ಮೂಲಕ ಪ್ರತೀ ಮನೆ ಭೇಟಿ ಕಾರ್ಯಕ್ರಮದ ಯಶಸ್ಸಿಗಾಗಿ ಕ್ರಿಯಾಯೋಜನೆ ರೂಪಿಸಲಾಗಿದ್ದು, ಪ್ರತೀ ದಿನ ಸಾಧಿಸಬೇಕಾದ ಪ್ರಗತಿಯ ಬಗ್ಗೆ ಗುರಿ ನಿಗಧಿಪಡಿಸಲಾಗಿದೆ. ಗ್ರಾಮ ಪಂಚಾಯತ್ ಮಟ್ಟದಲ್ಲಿ ಪ್ರತೀ ದಿನ ಮೇಲ್ವಿಚಾರಣೆ ಮಾಡಲು ಪ್ರತೀ ತಾಲೂಕುವಾರು ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಜಿಲ್ಲೆಯ ಪ್ರತಿಯೊಬ್ಬರೂ 2 ಡೋಸ್ ಕೋವಿಡ್ ಲಸಿಕೆ ಪಡೆಯುವ ಮೂಲಕ ಜಿಲ್ಲೆಯಲ್ಲಿ ಶೇ.100 ಲಸಿಕಾಕರಣದ ಗುರಿ ಸಾಧಿಸಿ, ಉಡುಪಿಯನ್ನು ಕೋವಿಡ್ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಜಿಲ್ಲಾಡಳಿತ ದೊಂದಿಗೆ ಸಹಕರಿಸಬೇಕು''.
-ಕೂರ್ಮಾರಾವ್ ಎಂ., ಜಿಲ್ಲಾಧಿಕಾರಿ, ಉಡುಪಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X