ದಸಂಸ ಮುಖಂಡ ಎಂ.ಬಿ.ಶ್ರೀನಿವಾಸ್ ನಿಧನ

ಮಂಡ್ಯ, ನ.21: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ, ಪ್ರಗತಿಪರ, ರೈತಪರ ಹೋರಾಟಗಾರ ಎಂ.ಬಿ.ಶ್ರೀನಿವಾಸ್ ಹೃದಯಾಘದಿಂದ ಮೃತಪಟ್ಟಿದ್ದಾರೆ.
ಹೃದಯಘಾತಕ್ಕೊಳಗಾಗಿ ಮೈಸೂರಿನ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ರವಿವಾರ ಮುಂಜಾನೆ ನಿಧನರಾದರು.
ಶ್ರೀನಿವಾಸ್ ಅವರ ಪಾರ್ಥೀವ ಶರೀರವನ್ನು ಮಂಡ್ಯ ನಗರದ ಸುಭಾಷನಗರದಲ್ಲಿರುವ ಡಾ.ಅಂಬೇಡ್ಕರ್ ಭವನದ ಆವರಣದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಮಧ್ಯಾಹ್ನ 2 ಗಂಟೆಯವರೆ ಇಡಲಾಗಿತ್ತು.
ಹಲವಾರು ಗಣ್ಯರು, ಸಂಘಟನೆಗಳ ಮುಖಂಡರು, ಜಿಲ್ಲಾಧಿಕಾರಿ ಎಸ್.ಅಶ್ವಥಿ ಮೃತರಿಗೆ ಅಂತಿಮ ನಮನ ಸಲ್ಲಿಸಿದರು.
ಸ್ವಗ್ರಾಮ ಪಾಂಡವಪುರ ತಾಲೂಕಿನ ಮೆನಗರ ಗ್ರಾಮದಲ್ಲಿ ನಾಳೆ(ಸೋಮವಾರ) ಬೆಳಗ್ಗೆ 10 ಗಂಟೆಗೆ ಅಂತ್ಯಸಂಸ್ಕಾರ
ನಡೆಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.
Next Story





