ವಿವಾದಾತ್ಮಕ 3 ರಾಜಧಾನಿ ಮಸೂದೆಯನ್ನು ಹಿಂಪಡೆಯಲು ಆಂಧ್ರಪ್ರದೇಶ ನಿರ್ಧಾರ

ಅಮರಾವತಿ: ಆಂಧ್ರಪ್ರದೇಶದ ರಾಜ್ಯ ಸರಕಾರವು ವಿವಾದಾತ್ಮಕ ಮೂರು ರಾಜಧಾನಿ ಮಸೂದೆಯನ್ನು ಹಿಂಪಡೆಯಲು ನಿರ್ಧರಿಸಿದೆ. ಮೂರು ರಾಜಧಾನಿಯ ಮಸೂದೆಗೆ ಹಲವಾರು ವಲಯಗಳಿಂದ ಭಾರೀ ಪ್ರತಿರೋಧ ವ್ಯಕ್ತವಾದ ಕಾರಣ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು NDTV ವರದಿ ಮಾಡಿದೆ.
ಕಾರ್ಯಕಾರಿ ರಾಜಧಾನಿ ವೈಝಾಗ್, ಶಾಸಕಾಂಗ ರಾಜಧಾನಿ ಅಮರಾವತಿ, ನ್ಯಾಯಾಂಗ ರಾಜಧಾನಿ ಕರ್ನೂಲ್ ಎನ್ನುವುದಾಗಿ ಮೂರು ರಾಜಧಾನಿಗಳನ್ನು ಮಸೂದೆಯಲ್ಲಿ ಪ್ರಸ್ತಾಪಿಸಲಾಗಿದೆ .
ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರು ರಾಜ್ಯ ವಿಧಾನಸಭೆಯಲ್ಲಿ ಪ್ರಮುಖ ಘೋಷಣೆ ಮಾಡುವ ನಿರೀಕ್ಷೆಯಿದೆ.
ತ್ರಿವಿಧೀಕರಣ ಮಸೂದೆಯನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಹಲವು ಅರ್ಜಿಗಳು ಸಲ್ಲಿಕೆಯಾಗಿದ್ದವು
Next Story