Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಿವಮೊಗ್ಗ: ಸಾಂಕ್ರಾಮಿಕ ರೋಗ ಹರಡುವಿಕೆ...

ಶಿವಮೊಗ್ಗ: ಸಾಂಕ್ರಾಮಿಕ ರೋಗ ಹರಡುವಿಕೆ ತಡೆಯಲು ಸೂಕ್ತ ಕ್ರಮ; ಡಿಎಚ್‍ಒ ಡಾ.ರಾಜೇಶ ಸುರಗಿಹಳ್ಳಿ

ವಾರ್ತಾಭಾರತಿವಾರ್ತಾಭಾರತಿ22 Nov 2021 11:13 PM IST
share
ಶಿವಮೊಗ್ಗ: ಸಾಂಕ್ರಾಮಿಕ ರೋಗ ಹರಡುವಿಕೆ ತಡೆಯಲು ಸೂಕ್ತ ಕ್ರಮ; ಡಿಎಚ್‍ಒ ಡಾ.ರಾಜೇಶ ಸುರಗಿಹಳ್ಳಿ

ಶಿವಮೊಗ್ಗ ,ನ.22 : ಜಿಲ್ಲೆಯ ಹಲವೆಡೆ ಸಾಂಕ್ರಾಮಿಕ ರೋಗಗಳು ಕಂಡು ಬರುತ್ತಿದ್ದು, ಹರಡದಂತೆ ತಡೆಯಲು ಸೂಕ್ತ ಕ್ರಮಗಳನ್ನು ಕೈಗೊಂಡು ಸಾರ್ವಜನಿಕರು ಸಹಕರಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ ಸುರಗಿಹಳ್ಳಿ ಅವರು ಮನವಿ ಮಾಡಿದ್ದಾರೆ.

 ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಅವರು,   ಜಿಲ್ಲೆಯಲ್ಲಿ ಪ್ರಸ್ತುತ ವರ್ಷ ಇದುವರೆಗೆ ಡೆಂಗ್ಯು 381, ಚಿಕನ್‍ಗುನ್ಯ 169, ಮಲೇರಿಯಾ 2, ಇಲಿಜ್ವರ 22 ಮತ್ತು ಮಂಗನ ಕಾಯಿಲೆ 13 ಪ್ರಕರಣಗಳು ಪತ್ತೆಯಾಗಿವೆ. ಸಾಂಕ್ರಾಮಿಕ ರೋಗಗಳು ಹರಡದಂತೆ ತಡೆಯಲು ಸಾರ್ವಜನಿಕರ ಪಾತ್ರ ಬಹಳ ಮುಖ್ಯವಾಗಿದೆ. ಗ್ರಾಮದಲ್ಲಿ ಯಾವುದೇ ಸಭೆ, ಸಮಾರಂಭಗಳು ನಡೆಸುವ ಮೊದಲು ಆರೋಗ್ಯ ಇಲಾಖೆಗೆ ಮಾಹಿತಿ ನೀಡಬೇಕು. ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ವಾಂತಿ ಬೇಧಿ ಪ್ರಕರಣ ಕಂಡು ಬಂದಲ್ಲಿ ತಕ್ಷಣ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯಬೇಕು ಎಂದು ಅವರು ತಿಳಿಸಿದ್ದಾರೆ.

ವಾಂತಿ ಬೇಧಿ ಉಂಟಾದಾಗ ಡಿ ಹೈಡ್ರೇಷನ್ ಆಗುವುದರಿಂದ ತಕ್ಷಣ ಚಿಕಿತ್ಸೆಯನ್ನು ಮನೆಯಲ್ಲಿಯೇ ಪ್ರಾರಂಭಿಸಬೇಕು. ಲೀಟರ್ ಶುದ್ಧವಾದ ನೀರಿಗೆ 1 ಚಮಚ ಉಪ್ಪು ಮತ್ತು 8 ಚಮಚ ಸಕ್ಕರೆ ದ್ರಾವಣ ತಯಾರಿಸಿ ಆಸ್ಪತ್ರೆಗೆ ಹೋಗುವವರೆಗೆ ಸ್ವಲ್ಪ ಸ್ವಲ್ಪ ಕುಡಿಸಬೇಕು. ಕುಡಿಯಲು ಬಳಸುವ ನೀರಿನ ಎಲ್ಲಾ ಮೂಲಗಳನ್ನು ಎಚ್2ಎಸ್ ಪರೀಕ್ಷೆಗೆ ಒಳಪಡಿಸಿ, ಕಲುಷಿತ ಎಂದು ವರದಿ ಬಂದಲ್ಲಿ ಸ್ಥಳೀಯ ಆಡಳಿತದ ಗಮನಕ್ಕೆ ತರಬೇಕು. ಹಾಗೂ ಮರು ಪರೀಕ್ಷೆ ಮಾದರಿಗಳನ್ನು ಒಳಪಡಿಸಿ ನೀರು ಕುಡಿಯಲು ಯೋಗ್ಯವೆಂದು ದೃಢೀಕರಿಸಬೇಕು ಎಂದು ತಿಳಿಸಿದ್ದಾರೆ.

ವಾಂತಿ ಬೇಧಿ ಕಂಡು ಬಂದಲ್ಲಿ ಗ್ರಾಮದಲ್ಲಿ ಸಂತೆ ಮತ್ತು ಜಾತ್ರೆಗಳನ್ನು ಮುಂದೂಡಬೇಕು. ಗ್ರಾಮದಲ್ಲಿ ಬಯಲು ಮಲ ವಿಸರ್ಜನೆ ಮಾಡಬಾರದು. ರಸ್ತೆ ಬದಿಯಲ್ಲಿ ತೆರೆದಿಟ್ಟ ಕರಿದ ಆಹಾರ ಪದಾರ್ಥ, ಕತ್ತರಿಸಿದ ಹಣ್ಣು ಹಾಗೂ ತಂಪು ಪಾನೀಯಗಳನ್ನು ಸೇವಿಸಬಾರದು. ಕುಡಿಯಲು ಕಾಯಿಸಿ ಆರಿಸಿದ ನೀರು ಹಾಗೂ ಬಿಸಿ ಪದಾರ್ಥ ಸೇವಿಸಬೇಕು. ಮನೆಯಲ್ಲಿ ತಯಾರಿಸಿದ ಆಹಾರ ಪದಾರ್ಥಗಳನ್ನು ನೊಣಗಳು ಮುಟ್ಟದಂತೆ ಮುಚ್ಚಿಡಬೇಕು ಎಂದು  ಸಲಹೆ ನೀಡಿದ್ದಾರೆ.

ಮುಂಜಾಗರೂಕತಾ ಕ್ರಮ: ನಗರ ಪ್ರದೇಶ ವ್ಯಾಪ್ತಿಯಲ್ಲಿ ಆರೋಗ್ಯ ಕಾರ್ಯಕರ್ತರಿಂದ ಪ್ರತಿ ಮನೆ ಮನೆಗೆ ಭೇಟಿ ನೀಡಿ ಲಾರ್ವ/ಜ್ವರ ಸಮೀಕ್ಷೆ ಕಾರ್ಯ ಕೈಗೊಳ್ಳಲಾಗಿದೆ. ಸಾಂಕ್ರಾಮಿಕ ರೋಗಗಳ ಬಗ್ಗೆ ನಿಗಾ ವಹಿಸಲು ಎಲ್ಲಾ ಆರೋಗ್ಯ ಕಾರ್ಯಕರ್ತರ ವಾಟ್ಸಾಪ್ ಗ್ರೂಪ್‍ಗಳನ್ನು ರಚಿಸಲಾಗಿದ್ದು, ಪ್ರತಿದಿನ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ. 

ನಗರ ಪ್ರದೇಶದಲ್ಲಿರುವ ಖಾಸಗಿ ಆಸ್ಪತ್ರೆಗಳಿಗೆ ಶಂಕಿತ ಡೆಂಗ್ಯ, ಇಲಿಜ್ವರ, ಎಚ್1ಎನ್1 ಪ್ರಕರಣ ಕಂಡು ಬಂದಲ್ಲಿ ನಿಗಾ ವಹಿಸಲಾಗುತ್ತಿದ್ದು, ಆಸ್ಪತ್ರೆಗೆ ಭೇಟಿ ನೀಡಿ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಲಾಗುತ್ತಿದೆ. ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕಾಗಿ ರ್ಯಾಪಿಡ್ ರೆಸ್ಪಾನ್ಸ್ ತಂಡವನ್ನು ರಚಿಸಲಾಗಿದೆ. ಫೋನ್ ಇನ್ ಕಾರ್ಯಕ್ರಮಗಳ ಮೂಲಕ ಜನರಿಗೆ ಸಾಮಾನ್ಯ ಮಾಹಿತಿ ನೀಡಲು ಮತ್ತು ಖಾಸಗಿ ಆಸ್ಪತ್ರೆಯ ವೈದ್ಯರಿಗೆ ಸಾಂಕ್ರಾಮಿಕ ರೋಗಗಳ ಕುರಿತು ಕಾರ್ಯಾಗಾರ ನಡೆಸಲಾಗಿದೆ ಎಂದರು.

ಸಾರ್ವಜನಿಕರು ಎಲ್ಲಾ ಮುಂಜಾಗರೂಕತಾ ಕ್ರಮಗಳನ್ನು ಅನುಸರಿಸುವ ಮೂಲಕ ಸಾಂಕ್ರಾಮಿಕ ರೋಗಗಳನ್ನು ನಿಯಂತ್ರಿಸಲು ಸಹಕರಿಸುವಂತೆ ಅವರು ಮನವಿ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X