Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಷೇರುಪೇಟೆಯ ಮಹಾಕುಸಿತಕ್ಕೆ ಕಾರಣವಾದ...

ಷೇರುಪೇಟೆಯ ಮಹಾಕುಸಿತಕ್ಕೆ ಕಾರಣವಾದ ರಿಲಯನ್ಸ್ ಹೇಳಿಕೆ

ವಾರ್ತಾಭಾರತಿವಾರ್ತಾಭಾರತಿ23 Nov 2021 7:23 AM IST
share
ಷೇರುಪೇಟೆಯ ಮಹಾಕುಸಿತಕ್ಕೆ ಕಾರಣವಾದ ರಿಲಯನ್ಸ್ ಹೇಳಿಕೆ

ಮುಂಬೈ: ಸುಮಾರು 15 ಶತಕೋಟಿ ಡಾಲರ್ ಮೌಲ್ಯದ ಅರಮ್ಕೊ ಒಪ್ಪಂದವನ್ನು ಪುನರ್ ಪರಿಶೀಲನೆ ನಡೆಸುವುದಾಗಿ ರಿಲಯಲ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (ಆರ್‌ಐಎಲ್) ಹೇಳಿಕೆ ನೀಡಿದ ಬೆನ್ನಲ್ಲೇ ರಿಲಯನ್ಸ್ ಇಂಡಸ್ಟ್ರೀಸ್ ಷೇರುಗಳ ಬೆಲೆ ಶೇಕಡ 4.4ರಷ್ಟು ಕುಸಿದಿದ್ದು, ಸೋಮವಾರದ ಕೊನೆಯ ಅವಧಿಯಲ್ಲಿ ಸೆನ್ಸೆಕ್ಸ್ 1600 ಪಾಯಿಂಟ್‌ಗಳ ಮಹಾಕುಸಿತ ಕಂಡಿತು. ಆದರೆ ಕೆಳ ಹಂತದಲ್ಲಿ ಚೌಕಾಶಿ ಬೇಟೆಯ ಕಾರಣದಿಂದ ಅಂತಿಮವಾಗಿ 1170 ಪಾಯಿಂಟ್‌ಗಳ ಕುಸಿತವನ್ನಷ್ಟೇ ದಾಖಲಿಸಿ 58,466 ಅಂಕಗಳಿಗೆ ಮುಕ್ತಾಯಗೊಂಡಿತು.

ಜಾಗತಿಕ ಮಟ್ಟದಲ್ಲಿ ಹಣದುಬ್ಬರ ಹೆಚ್ಚಳದ ಭೀತಿ ದಲಾಲ್ ಸ್ಟ್ರೀಟ್‌ನಲ್ಲಿ ಹೆಚ್ಚುತ್ತಿರುವುದು, ವಿದೇಶಿ ಫಂಡ್‌ಗಳಿಂದ ಮಾರಾಟ ಹಾಗೂ ಯೂರೋಪ್‌ನ ಕೆಲ ಭಾಗಗಳಲ್ಲಿ ಹೊಸ ಕೋವಿಡ್-19 ಸೋಂಕು ಪ್ರಕರಣಗಳ ಏರಿಕೆಯು ಜಾಗತಿಕ ಮಟ್ಟದಲ್ಲಿ ಆರ್ಥಿಕ ಪ್ರಗತಿಯ ಪುನಶ್ಚೇತನ ಪ್ರಕ್ರಿಯೆಯ ಮೇಲೆ ಪರಿಣಾಮ ಬೀರಬಹುದು ಎಂಬ ಭೀತಿ ಕೂಡ ಇಂದಿನ ಕುಸಿತಕ್ಕೆ ಕಾರಣವಾಯಿತು.

ಸೋಮವಾರದ ಸೆನ್ಸೆಕ್ಸ್ ಕುಸಿತ ಆರು ತಿಂಗಳಲ್ಲೇ ಅತಿದೊಡ್ಡ ಕುಸಿತವಾಗಿದೆ. ಬ್ಯಾಂಕಿಂಗ್ ಮತ್ತು ಹಣಕಾಸು ಸಂಸ್ಥೆಗಳ ಷೇರುಗಳು ಕೂಡಾ ಕುಸಿತಕ್ಕೆ ಕೊಡುಗೆ ನೀಡಿದ್ದು, ಭಾರ್ತಿ ಏರ್‌ಟೆಲ್ ಷೇರುಗಳ ಬೆಲೆ ಮಾತ್ರ ಶೇಕಡ 25ರಷ್ಟು ಶುಲ್ಕ ಹೆಚ್ಚಳದ ಬಳಿಕ ಶೇಕಡ 4ರಷ್ಟು ಹೆಚ್ಚಳ ಕಂಡಿದೆ.

ಸೋಮವಾರ ವಿದೇಶಿ ಪೋರ್ಟ್‌ ಫೋಲಿಯೊ ಹೂಡಿಕೆದಾರರ ನಿವ್ವಳ ಮಾರಾಟ 3439 ಕೋಟಿ ಆದರೆ, ದೇಶೀಯ ಸಂಸ್ಥೆಗಳು ನಿವ್ವಳ ರೂ. 2051 ಕೋಟಿ ಮೌಲ್ಯದ ಖರೀದಿಯನ್ನು ಕಂಡಿವೆ ಎಂದು ಬಿಎಸ್‌ಇ ಅಂಕಿ ಅಂಶಗಳು ತೋರಿಸುತ್ತವೆ.

ಸೆನ್ಸೆಕ್ಸ್‌ನ 30 ಅಂಶಗಳ ಪೈಕಿ 27 ಅಂಶಗಳು ಕೆಂಪಿನೊಂದಿಗೆ ಕೊನೆಗೊಂಡವು. ಇಂದಿನ ಕುಸಿತದಿಂದಾಗಿ ಹೂಡಿಕೆದಾರರು ಸುಮಾರು 6 ಲಕ್ಷ ಕೋಟಿಗಳಷ್ಟು ನಷ್ಟ ಹೊಂದಿದರು. ಬಿಎಸ್‌ಇ ಮಾರುಕಟ್ಟೆ ಬಂಡವಾಳ ಪ್ರಮಾಣ ಇದೀಗ 264 ಲಕ್ಷ ಕೋಟಿ ಎಂದು ಅಂದಾಜಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X